27.7 C
Sullia
Sunday, March 8, 2026

ಸುಳ್ಯ: ಅಜ್ಜಾವರ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

ನ್ಯೂಸ್ ನಾಟೌಟ್ : ಯುವಜನತೆ ದುಶ್ಚಟದಿಂದ ಮುಕ್ತರಾಗಿ ನಿಮ್ಮ ಭವಿಷ್ಯವನ್ನು ನೀವು ನಿರ್ಮಾಣ ಮಾಡಿಕೊಳ್ಳುವುದರೊಂದಿಗೆ ಭವ್ಯ ಭಾರತವನ್ನು ಕಟ್ಟುವಲ್ಲಿ ಪಣತೊಡಬೇಕು. ಯುವಜನತೆ ಮನಸ್ಸು ಮತ್ತು ಬುದ್ಧಿಯನ್ನು ಹತೋಟಿಯಲ್ಲಿಟ್ಟುಕೊಂಡು ದುಶ್ಚಟ ಮುಕ್ತ ಸಮಾಜವನ್ನು ಕಟ್ಟಿದಾಗ ಮಾತ್ರ ಅದು ಸಾಧ್ಯ ಎಂದು ಉಪನ್ಯಾಸಕಿ ಡಾ. ಅನುರಾಧಾ ಕುರುಂಜಿ ಅಭಿಪ್ರಾಯಪಟ್ಟರು.


Ad Widget
Ad Widget
Ad Widget
Ad Widget
Ad Widget
Ad Widget
Ad Widget

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ ಸುಳ್ಯ ವತಿಯಿಂದ ಅಜ್ಜಾವರ ಸರಕಾರಿ ಪ್ರೌಢಶಾಲೆಯಲ್ಲಿ ಸೋಮವಾರ (ನ. 24) ಆಯೋಜಿಸಿದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿ, ದುಶ್ಚಟಕ್ಕೆ ಬಲಿಯಾಗಿ ತಮ್ಮ ಜೀವನವನ್ನು ಹಾಳು ಮಾಡಿಕೊಳ್ಳದೆ, ಸಾಮಾಜಿಕ ಜಾಲತಾಣಕ್ಕೆ ಸಿಲುಕದೆ, ಸ್ವಾಸ್ಥ್ಯ ಸಮಾಜವನ್ನು ನಿರ್ಮಿಸುವಲ್ಲಿ ವಿದ್ಯಾರ್ಥಿಗಳ ಪಾತ್ರ ಅತಿ ಮುಖ್ಯ. ವಿದ್ಯಾರ್ಥಿಗಳು ಹಿರಿಯರಿಗೆ, ತಂದೆ ತಾಯಿಗೆ, ಗುರುಗಳಿಗೆ, ಗೌರವ ನೀಡುವಂತೆ ತಿಳಿಸಿದರು. ದುಶ್ಚಟಕ್ಕೆ ಬಲಿಯಾಗದೆ ಉತ್ತಮ ರೀತಿಯಲ್ಲಿ ಶಿಕ್ಷಣ ಪಡೆದು ಸಮಾಜಕ್ಕೆ ಆದರ್ಶ ವ್ಯಕ್ತಿಗಳಾಗಿ ಎಂದು ಹಾರೈಸಿದರು.

ಕಾರ್ಯಕ್ರಮವನ್ನು ಅಜ್ಜಾವರ ವಲಯದ ಜನ ಜಾಗೃತಿ ಅಧ್ಯಕ್ಷ ಶಿವಪ್ರಕಾಶ್ ಅಡ್ಪಂಗಾಯ ಉದ್ಘಾಟಿಸಿ ಪ್ರಾಸ್ತಾವಿಕ ಮಾತನಾಡಿದರು. SDMC ಅಧ್ಯಕ್ಷ ಪ್ರಕಾಶ್ ಕಣೆಮರಡ್ಕ ಅಧ್ಯಕ್ಷತೆ ವಹಿಸಿದ್ದರು. ಯೋಜನೆಯ ಕಾರ್ಯಕ್ರಮಗಳ ಬಗ್ಗೆ ಮಾತನಾಡಿದರು. ಶಾಲಾ ಮುಖ್ಯೋಪಾಧ್ಯಾಯ ಗೋಪಿನಾಥ್ ಮಾತನಾಡಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಲವಾರು ಉತ್ತಮ ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಅನುದಾನಗಳನ್ನು ನೀಡುತ್ತಿದ್ದು, ಮಾದರಿ ಸಂಸ್ಥೆಯಾಗಿದೆ ಇದರಿಂದ ಸಮಾಜಕ್ಕೆ ತುಂಬಾ ಪ್ರಯೋಜನವಾಗಿದೆ ಎಂದು ಸಂಸ್ಥೆಯ ಬಗ್ಗೆ ಪ್ರಸಂಶೆ ವ್ಯಕ್ತಪಡಿಸಿದರು. ವೇದಿಕೆಯಲ್ಲಿ ಅಜ್ಜಾವರ ಮಹಿಷಮರ್ದಿನಿ ದೇವಸ್ಥಾನದ ಟ್ರಸ್ಟಿ ಶಶ್ಮಿ ಭಟ್ ಉಪಸ್ಥಿತರಿದ್ದರು. ಶಾಲಾ ಶಿಕ್ಷಕರಾದ ಅಶೋಕ್ ಸ್ವಾಗತಿಸಿ, ಸೇವಾಪ್ರತಿನಿಧಿಯಾದ ವೇದಾವತಿ ವಂದಿಸಿದರು. ವಲಯ ಮೇಲ್ವಿಚಾರಕಿ ಅನಿತಾ ಕಾರ್ಯಕ್ರಮ ನಿರೂಪಿಸಿದರು.

Related Articles

LEAVE A REPLY

Please enter your comment!
Please enter your name here

Latest Articles