ನ್ಯೂಸ್ ನಾಟೌಟ್: ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಸ್ವಾಗತ ಸಮಿತಿ 28ನೇ ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ -2025 ಇದರ ಆಶ್ರಯದಲ್ಲಿ ಡಿ.30ರಂದು ಕುಕ್ಕುಜಡ್ಕದ ಚೊಕ್ಕಾಡಿ ಪ್ರೌಢ ಶಾಲೆಯಲ್ಲಿ 28ನೇ ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಈ ಸಮಾರಂಭದಲ್ಲಿ ಕವಿಗೋಷ್ಠಿ ನಡೆಯಲಿದ್ದು, ಇದರಲ್ಲಿ ಭಾಗವಹಿಸುವ ಆಸಕ್ತರು ತಮ್ಮ ಕವನ ಮತ್ತು ಹೆಸರು ಹಾಗೂ ವಿಳಾಸವನ್ನು ಡಿ.2ರೊಳಗೆ ಅಧ್ಯಕ್ಷರು, ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು (9448889005) ಇವರಿಗೆ ಕಳುಹಿಸಬಹುದು. ಸುಳ್ಯ ತಾಲೂಕಿನ ಆಯ್ದ ಕವನಗಳನ್ನು ವಾಚನ ಮಾಡಲು ಅವಕಾಶ ನೀಡಲಾಗುವುದು.
ಪುಸ್ತಕ ಬಿಡುಗಡೆಗೆ ಆಹ್ವಾನ: ಅಲ್ಲದೇ ಈ ಸಮ್ಮೇಳನದಲ್ಲಿ ಪುಸ್ತಕ ಬಿಡುಗಡೆ ಮಾಡಲು ಅವಕಾಶವಿದ್ದು, ಆಸಕ್ತರು ಪುಸ್ತಕದ ಹೆಸರು ಹಾಗೂ ಲೇಖಕರ ಹೆಸರನ್ನು ಡಿ. 2ರೊಳಗೆ ಅಧ್ಯಕ್ಷರು ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು (9448889005) ಇವರಿಗೆ ಕಳುಹಿಸಲು ಪ್ರಕಟಣೆ ತಿಳಿಸಿದೆ.













