21.6 C
Sullia
Sunday, March 8, 2026

ಸುಳ್ಯ ಎನ್.ಎಂ.ಸಿ ಕಾಮೆಕ್ಸ್ 2k25 ಇಂಟರ್ ಕ್ಲಾಸ್ ಕಾಮರ್ಸ್ ಫೆಸ್ಟ್

ನ್ಯೂಸ್ ನಾಟೌಟ್ : ಸುಳ್ಯದ ನೆಹರು ಮೆಮೋರಿಯಲ್ ಕಾಲೇಜಿನ ವಾಣಿಜ್ಯ ವಿಭಾಗ ಹಾಗೂ ವಾಣಿಜ್ಯ ಸಂಘದ ವತಿಯಿಂದ ಕಾಮೆಕ್ಸ್ 2k25 ಅಂತರ ತರಗತಿ ಕಾಮರ್ಸ್ ಫೆಸ್ಟ್ ಇತ್ತೀಚೆಗೆ ಹಮ್ಮಿಕೊಳ್ಳಲಾಯಿತು.


Ad Widget
Ad Widget
Ad Widget
Ad Widget
Ad Widget
Ad Widget
Ad Widget

ಕಾರ್ಯಕ್ರಮ ಉದ್ಘಾಟಿಸಿದ ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜಿನ ಅಸೋಸಿಯೇಟ್ ಪ್ರೊಫೆಸರ್, ಎಚ್ಒಡಿ ಆಫ್ ಕಾಮರ್ಸ್ ಡಾ. ಈಶ್ವರ ಗೌಡ ಮಾತನಾಡಿ, ಆತ್ಮವಿಶ್ವಾಸ, ತಾಳ್ಮೆ , ಪ್ರಯತ್ನ ಇವುಗಳೆಲ್ಲವೂ ಯಶಸ್ಸಿಗೆ ಪೂರಕವಾದವುಗಳು ಮತ್ತು ಕಾಮರ್ಸ್ ಫೆಸ್ಟ್ ನಲ್ಲಿ ಪಾಲ್ಗೊಳ್ಳುವುದರಿಂದ ಸಂಘಟನಾ ಚಾತುರ್ಯ ಮತ್ತು ವ್ಯವಹಾರಕ್ಕೆ ಸಂಬಂಧಪಟ್ಟ ಜ್ಞಾನವನ್ನು ವೃದ್ಧಿಸಿಕೊಳ್ಳಲು ಇದೊಂದು ಉತ್ತಮ ವೇದಿಕೆಯಾಗಿದೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ಕಾರ್ಯದರ್ಶಿ ಕೆ ವಿ ಹೇಮನಾಥ ಮಾತನಾಡಿ, ಈ ಕಾಮರ್ಸ್ ಫೆಸ್ಟ್ ನಲ್ಲಿ ವ್ಯವಹಾರಗಳಿಗೆ ಸಂಬಂಧಿಸಿದ ವಿವಿಧ ಸ್ಪರ್ಧೆಗಳನ್ನು ಆಯೋಜಿಸಿರುವುದರಿಂದ ವಿದ್ಯಾರ್ಥಿಗಳಿಗೆ ಇದೊಂದು ಉತ್ತಮ ಕಾರ್ಯಕ್ರಮವಾಗಿದೆ. ಎಲ್ಲರೂ ಇದರ ಪ್ರಯೋಜನ ಪಡೆಯಬೇಕು ಎಂದು ಶುಭ ಹಾರೈಸಿದರು.

ಕಾಲೇಜಿನ ಪ್ರಾಂಶುಪಾಲ ಹಾಗೂ ವಾಣಿಜ್ಯ ವಿಭಾಗದ ಉಪನ್ಯಾಸಕ ಡಾ. ರುದ್ರ ಕುಮಾರ್ ಎಂ ಎಂ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ವಾಣಿಜ್ಯ ವಿಭಾಗದ ಮುಖ್ಯಸ್ಥರು ಹಾಗೂ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ರತ್ನಾವತಿ ಡಿ ಪ್ರಾಸ್ತಾವಿಕ ಮಾತನಾಡಿದರು. ಕಾಲೇಜಿನ IQAC ಸಂಚಾಲಕಿ ಮಮತಾ ಕೆ, ವಾಣಿಜ್ಯ ಸಂಘದ ಸಂಚಾಲಕಿ ದಿವ್ಯ ಟಿ ಎಸ್, ವಾಣಿಜ್ಯ ವಿಭಾಗದ ಉಪನ್ಯಾಸಕರಾದ ಶ್ರೀಧರ ವಿ ಹಾಗೂ ಗೀತಾ ಶೆಣೈ ಮತ್ತು ವಾಣಿಜ್ಯ ಸಂಘದ ಪದಾಧಿಕಾರಿಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಿದ್ಯಾರ್ಥಿನಿಯರಾದ ತುಳಸಿ ಪ್ರಾರ್ಥಿಸಿದರು. ಸ್ಟುಡೆಂಟ್ ಕೋ ಆರ್ಡಿನೇಟರ್ ಗಳಾದ ದೀಕ್ಷಿತ ಜಿ ಆಚಾರ ಸ್ವಾಗತಿಸಿ ಹರ್ಷಿತ್ ಕೆ ಎಲ್ ವಂದಿಸಿದರು. ವಿದ್ಯಾರ್ಥಿನಿ ಶಮ್ನ ಮುಖ್ಯ ಅತಿಥಿಗಳನ್ನು ಪರಿಚಯಿಸಿದರು. ಶಿಹಾನ ಶಿರಿನ್ ಕಾರ್ಯಕ್ರಮ ನಿರೂಪಿಸಿದರು.

ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಪ್ರಾಂಶುಪಾಲ ಡಾ. ರುದ್ರ ಕುಮಾರ್ ಎಂ ಎಂ ವಹಿಸಿದ್ದರು. ಅತಿಥಿಗಳಾಗಿ ಆಗಮಿಸಿದ ಚಂದ್ರಶೇಖರ ಪೆರಾಲು ಆಡಳಿತ ಅಧಿಕಾರಿ ಎನ್ಎಂಸಿ ಮಾತನಾಡಿ ಸ್ಪರ್ಧೆಗಳಲ್ಲಿ ವಿದ್ಯಾರ್ಥಿಗಳ ಅತ್ಯುತ್ತಮ ಭಾಗವಹಿಸಿಕೆಯನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ಕಾಲೇಜಿನ ಹಿರಿಯ ವಿದ್ಯಾರ್ಥಿ ರಜತ್ ಕುಮಾರ್ ಉಪಸ್ಥಿತರಿದ್ದು ಫೆಸ್ಟ್ ನ ಬೆಸ್ಟ್ ಮ್ಯಾನೇಜರ್ ಸ್ಪರ್ಧೆಯ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಕಾಲೇಜಿನ ವಾಣಿಜ್ಯ ವಿಭಾಗದ ಮುಖ್ಯಸ್ಥರು ಹಾಗೂ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ರತ್ನಾವತಿ ಡಿ, IQAC ಸಂಚಾಲಕಿ ಡಾ. ಮಮತಾ ಕೆ , ವಾಣಿಜ್ಯ ಸಂಘದ ಸಂಚಾಲಕಿ ದಿವ್ಯ ಟಿಎಸ್ ವಾಣಿಜ್ಯ ವಿಭಾಗದ ಉಪನ್ಯಾಸಕರಾದ ಶ್ರೀಧರ ವಿ ಹಾಗೂ ಗೀತಾ ಶೆಣೈ ಹಾಗೂ ವಾಣಿಜ್ಯ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು. ವಿದ್ಯಾರ್ಥಿಗಳಿಗಾಗಿ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು ವಿಜೇತರಿಗೆ ಬಹುಮಾನ ವಿತರಿಸಲಾಯಿತು.

Related Articles

LEAVE A REPLY

Please enter your comment!
Please enter your name here

Latest Articles