27.7 C
Sullia
Sunday, March 8, 2026

ಕೆವಿಜಿ ಸುಳ್ಯ ಹಬ್ಬದ ಪ್ರಯುಕ್ತ ಬೃಹತ್ ಉಚಿತ ಆರೋಗ್ಯ ಮತ್ತು ಚಿಕಿತ್ಸಾ ಶಿಬಿರ:ಆಧುನಿಕ ಸುಳ್ಯದ ನಿರ್ಮಾತೃ ಡಾ.ಕುರುಂಜಿ ವೆಂಕಟರಮಣ ಗೌಡರ 97ನೇ ಜಯಂತ್ಯೋತ್ಸವದ ಪ್ರಯುಕ್ತ ವಿಶೇಷ ಕಾರ್ಯಕ್ರಮ


Ad Widget
Ad Widget
Ad Widget
Ad Widget
Ad Widget
Ad Widget
Ad Widget

ನ್ಯೂಸ್ ನಾಟೌಟ್ : ಕೆ.ವಿ.ಜಿ. ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ, ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ ಹಾಗೂ ಕೆ.ವಿ.ಜಿ. ದಂತ ವೈದ್ಯಕೀಯ ಮಹಾವಿದ್ಯಾಲಯ ಸಹಭಾಗಿತ್ವದೊಂದಿಗೆ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಆಧುನಿಕ ಸುಳ್ಯದ ನಿರ್ಮಾತೃ ಡಾ.ಕುರುಂಜಿ ವೆಂಕಟರಮಣ ಗೌಡರ 97ನೇ ಜಯಂತ್ಯೋತ್ಸವದ ಸವಿನೆನಪಿಗಾಗಿ ಬೃಹತ್ ಉಚಿತ ಆರೋಗ್ಯ ಮತ್ತು ಚಿಕಿತ್ಸಾ ಶಿಬಿರ ಭಾನುವಾರ (ಡಿ.7ರಂದು) ಗುತ್ತಿಗಾರಿನ ದೀನ್ ದಯಾಳ್ ಸಭಾ ಭವನದಲ್ಲಿ ನಡೆಯಿತು.

ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ (ರಿ.) ಸುಳ್ಯ ಇದರ ಅಧ್ಯಕ್ಷರಾದ ಡಾ ಕೆ.ವಿ ಚಿದಾನಂದ ಅವರು ದೀಪ ಬೆಳಗುವುದರ ಮೂಲಕ ಶಿಬಿರವನ್ನು ಉದ್ಘಾಟಿಸಿದರು. ವೇದಿಕೆಯಲ್ಲಿ ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಪ್ರಾಂಶುಪಾಲರು ಪ್ರೊ. ಡಾ ಲೀಲಾಧರ್ ಡಿ.ವಿ,ಗಣ್ಯರಾದ ವೆಂಕಟ್ ದಂಬೆಕೋಡಿ, ವೆಂಕಟ್ ವಳಲಂಬೆ, ಕೆ.ಟಿ ವಿಶ್ವನಾಥ್ ಪ್ರವೀಣ್ ಮುಂಡೋಡಿ, ಪಿ.ಸಿ ಜಯರಾಮ್, ಜಯಪ್ರಕಾಶ್ ಮೊಗ್ರ, ನಿತ್ಯಾನಂದ ಮುಂಡೋಡಿ, ದಿನೇಶ್ ಮಡಪ್ಪಾಡಿ, ಶೈಲೇಶ್ ಅಂಬೆಕಲ್ಲು, ಹರೀಶ್ ಬಂಟ್ವಾಳ್ ಸೇರಿದಂತೆ ಹಲವಾರು ಗಣ್ಯರು ಉಪಸ್ಥಿತರಿದ್ದರು.

ಶಿಬಿರದಲ್ಲಿ ತಜ್ಞ ವೈದ್ಯರಿಂದ ಉಚಿತ ತಪಾಸಣೆ ನಡೆಸಲಾಯಿತು.ಗ್ರಾಮಸ್ಥರಿಗೆ ಅಗತ್ಯವಾದ ಔಷಧಗಳನ್ನು ಉಚಿತವಾಗಿ ವಿತರಿಸಲಾಯಿತು

ಕಾರ್ಯಕ್ರಮದ ಯಶಸ್ಸಿಗೆ ಸಂಘಗಳ ಅಧ್ಯಕ್ಷರು, ನಿರ್ದೇಶಕರು, ಸಿಬ್ಬಂದಿಗಳು ಮತ್ತು ಎಲ್ಲಾ ಸಹಕಾರ ಸಂಘಗಳು ಸಹಕಾರ ನೀಡಿದರು. ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಶಿಬಿರದ ಸದುಪಯೋಗ ಪಡೆದರು.

Related Articles

LEAVE A REPLY

Please enter your comment!
Please enter your name here

Latest Articles