ನ್ಯೂಸ್ ನಾಟೌಟ್ : ಧರ್ಮಸ್ಥಳ ಕ್ಷೇತ್ರದ ಮೇಲೆ ನಡೆದ ಷಡ್ಯಂತ್ರ (Conspiracy) ಮುಂದೆಂದೂ ಮತ್ಯಾವ ಧಾರ್ಮಿಕ ಶ್ರದ್ಧಾ ಕೇಂದ್ರಗಳ ಮೇಲಾಗದಂತೆ ತಡೆಯುವ ಅವಶ್ಯಕತೆಯಿದ್ದು ಸರ್ಕಾರ ಈ ವಿಚಾರವಾಗಿ ಗಮನವಹಿಸಬೇಕೆಂದು ಧರ್ಮಸ್ಥಳ ಧರ್ಮಾಧಿಕಾರಿಗಳ ಕಚೇರಿ ಮನವಿ ಮಾಡಿದೆ.
ಬುರುಡೆ ಗ್ಯಾಂಗ್ ವಿರುದ್ಧ ವಿಶೇಷ ತನಿಖಾ ತಂಡ (SIT) ಬೆಳ್ತಂಗಡಿ ನ್ಯಾಯಾಲಯಕ್ಕೆ ಸಲ್ಲಿಸಿದ ಪ್ರಾಥಮಿಕ ವರದಿಯನ್ನು ವರದಿ ಮಾಡಿದ ಬೆನ್ನಲ್ಲೇ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳ ಕಚೇರಿಯ ವಕ್ತಾರರಾದ ಕೆ ಪಾರ್ಶ್ವನಾಥ್ ಜೈನ್ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ್ದಾರೆ.
ಧಾರ್ಮಿಕ ಶ್ರದ್ಧಾಕೇಂದ್ರಗಳ ಮೇಲಿನ ವ್ಯವಸ್ಥಿತ ಷಡ್ಯಂತ್ರಗಳು ಮೇಲಿಂದ ಮೇಲೆ ನಡೆಯುತ್ತಾ ಬಂದಿದೆ ಎನ್ನುವುದಕ್ಕೆ ಇದೂ ಕೂಡ ಒಂದು ಉದಾಹರಣೆಯೇ. ಇದೇ ರೀತಿಯ ಷಡ್ಯಂತ್ರ ಮುಂದೆಂದೂ ಮತ್ಯಾವ ಧಾರ್ಮಿಕ ಶ್ರದ್ಧಾ ಕೇಂದ್ರಗಳ ಮೇಲಾಗದಂತೆ ತಡೆಯುವ ಅವಶ್ಯಕತೆಯಿದ್ದು ಸರ್ಕಾರ ಈ ವಿಚಾರವಾಗಿ ಗಮನವಹಿಸಬೇಕೆಂದು ವಿನಂತಿ ಮಾಡುತ್ತೇವೆ. ಈ ಷಡ್ಯಂತ್ರದ ಹಿಂದಿರುವ ಶಕ್ತಿಗಳಿಗೆ ಕಾನೂನು ರೀತ್ಯಾ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸುತ್ತೇವೆ.













