21.6 C
Sullia
Sunday, March 8, 2026

ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಪೋಲಿಯೊ ಲಸಿಕೆ ಅಭಿಯಾನ ಯಶಸ್ವಿ

ನ್ಯೂಸ್ ನಾಟೌಟ್:ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಪೋಲಿಯೋ ಲಸಿಕಾ ಕಾರ್ಯಕ್ರಮವನ್ನು ಡಿ.21 ಆದಿತ್ಯವಾರದಂದು ಯಶಸ್ವಿಯಾಗಿ ಹಮ್ಮಿಕೊಳ್ಳಲಾಯಿತು. ಈ ಅಭಿಯಾನದ ಭಾಗವಾಗಿ ಐದು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಪೋಲಿಯೊ ಹನಿಗಳನ್ನು ನೀಡಲಾಯಿತು.


Ad Widget
Ad Widget
Ad Widget
Ad Widget
Ad Widget
Ad Widget
Ad Widget

ಕಾರ್ಯಕ್ರಮವನ್ನು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ (ರಿ.) ಸುಳ್ಯ ಅಧ್ಯಕ್ಷರು ಹಾಗೂ ವೈದ್ಯಕೀಯ ನಿರ್ದೇಶಕರಾದ ಡಾ ಕೆವಿ ಚಿದಾನಂದ ಅವರು ಮಗುವಿಗೆ ಪೋಲಿಯೋ ಲಸಿಕೆ ನೀಡುವುದರೊಂದಿಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಕಾಲೇಜಿನ ಡೀನ್ ಡಾ ನೀಲಾಂಬಿಕೈ ನಟರಾಜನ್, ಕೆವಿಜಿ ಇನ್ಸ್ಟಿಟ್ಯೂಟ್ ಆಫ್ ನರ್ಸಿಂಗ್ ಪ್ರಾಂಶುಪಾಲರು ಚಂದ್ರಾವತಿ ಉಪಸ್ಥಿತರಿದ್ದರು.

ಸಾರ್ವಜನಿಕರಲ್ಲಿ ಪೋಲಿಯೊ ಲಸಿಕೆ ಕುರಿತು ಜಾಗೃತಿ ಮೂಡಿಸುವುದು ಮತ್ತು ಪ್ರತಿಯೊಬ್ಬ ಮಗುವಿಗೂ ಲಸಿಕೆ ತಲುಪಿಸುವುದು ಈ ಅಭಿಯಾನದ ಮುಖ್ಯ ಉದ್ದೇಶವಾಗಿತ್ತು.

ಕಾರ್ಯಕ್ರಮದಲ್ಲಿ ಅರೋಗ್ಯ ಸಿಬ್ಬಂದಿ,ವೈದ್ಯಕೀಯ ವಿದ್ಯಾರ್ಥಿಗಳು, ನರ್ಸಿಂಗ್ ಸಿಬ್ಬಂದಿ ಹಾಗೂ ಆರೋಗ್ಯ ಕಾರ್ಯಕರ್ತರು ಸಕ್ರಿಯವಾಗಿ ಪಾಲ್ಗೊಂಡು ಮಕ್ಕಳಿಗೆ ಲಸಿಕೆ ನೀಡುವಲ್ಲಿ ಸಹಕರಿಸಿದರು.

Related Articles

LEAVE A REPLY

Please enter your comment!
Please enter your name here

Latest Articles