ನ್ಯೂಸ್ ನಾಟೌಟ್: ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಕಮಿಟಿ ‘ಬಿ’ ವತಿಯಿಂದ ಕುರುಂಜಿ ವೆಂಕಟರಮಣ ಗೌಡರ 97ನೇ ಜಯಂತ್ಯೋತ್ಸವ ಹಿನ್ನೆಲೆಯಲ್ಲಿ ಮ್ಯಾರಥಾನ್ ಅನ್ನು ಆಯೋಜಿಸಲಾಗಿತ್ತು. ಬೆಳಗ್ಗೆ ನಡೆದ ಈ ಕೂಟದಲ್ಲಿ ಸಾವಿರಾರು ಕ್ರೀಡಾಪಟುಗಳು ಭಾಗಿಯಾದರು. ಬಳಿಕ ಮಾತನಾಡಿದ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಕಮಿಟಿ ‘ಬಿ’ ಅಧ್ಯಕ್ಷ ಡಾ. ಕೆ.ವಿ. ರೇಣುಕಾ ಪ್ರಸಾದ್ ಅವರು, ‘ನಮ್ಮ ಕಾರ್ಯಕ್ರಮ ದೊಡ್ಡ ಯಶಸ್ಸನ್ನು ಕಂಡಿದೆ. ಇದರ ದೊಡ್ಡ ಗೌರವ ಕೆವಿಜಿಯವರಿಗೆ ಸಲ್ಲುತ್ತದೆ ಎಂದು ತಿಳಿಸಿದರು.













