27.7 C
Sullia
Sunday, March 8, 2026

ಮೈಸೂರು ಅರಮನೆ ಬಳಿ ಭಾರಿ ಭದ್ರತಾ ಲೋಪ? ಅತ್ಯಾಧುನಿಕ ಸಿಸಿಟಿವಿ ಕ್ಯಾಮರಾ ಇದ್ದರೂ ಸೆರೆಯಾಗಿಲ್ಲ ಸ್ಫೋಟದ ದೃಶ್ಯ!

ನ್ಯೂಸ್ ನಾಟೌಟ್: ಮೈಸೂರು ಅರಮನೆಯ ಜಯಮಾರ್ತಾಂಡ ದ್ವಾರದ ಮುಂಭಾಗದಲ್ಲಿ ಹೀಲಿಯಂ ಸಿಲಿಂಡರ್ ಸ್ಫೋಟ ಸಂಭವಿಸಿದೆ.


Ad Widget
Ad Widget
Ad Widget
Ad Widget
Ad Widget
Ad Widget
Ad Widget

ಘಟನೆಯಲ್ಲಿ ಸಾವಿನ ಸಂಖ್ಯೆ ಮೂರಕ್ಕೆ ಏರಿದೆ.ಬಲೂನು ಮಾರಾಟಗಾರ ಸಲೀಂ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಂಜನಗೂಡು ಮೂಲದ ಮಂಜುಳಾ ಹಾಗೂ ಬೆಂಗಳೂರು ಮೂಲದ ಲಕ್ಷ್ಮೀ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಸಿಸಿಟಿವಿಯಲ್ಲಿ ದಾಖಲಾಗದ ದೃಶ್ಯ:

ಈ ಘಟನೆ ನಡೆದ ಸ್ಥಳದ ಸಮೀಪವೇ ಅಳವಡಿಸಲಾಗಿದ್ದ ಅತ್ಯಾಧುನಿಕ ಸಿಸಿಟಿವಿ ಕ್ಯಾಮರಾದಲ್ಲಿ ಘಟನೆಯ ಯಾವುದೇ ದೃಶ್ಯ ಸೆರೆಯಾಗದಿರುವುದು ಅಚ್ಚರಿ ಮೂಡಿಸಿದೆ. 360 ಡಿಗ್ರಿ ಕ್ಯಾಮರಾ , ಘಟನೆ ಸಮಯದಲ್ಲಿ ಬೇರೆ ಭಾಗವನ್ನು ಸೆರೆ ಹಿಡಿಯುತ್ತಿತ್ತು ಎಂದು ಮಾಹಿತಿ ಲಭ್ಯವಾಗಿದೆ. ಅರಮನೆಯ ಭದ್ರತೆಗಾಗಿ ಕೋಟ್ಯಾಂತರ ರೂಪಾಯಿ ವೆಚ್ಚದಲ್ಲಿ ಕ್ಯಾಮರಾಗಳನ್ನು ಅಳವಡಿಸಿದ್ದರೂ, ನಿರ್ಣಾಯಕ ಸಮಯದಲ್ಲಿ ದೃಶ್ಯಗಳು ಲಭ್ಯವಾಗದಿರುವುದು ಭದ್ರತಾ ಲೋಪದ ಬಗ್ಗೆ ಗಂಭೀರ ಚರ್ಚೆಗೆ ಕಾರಣವಾಗಿದೆ. ರಾಜ್ಯ ಗೃಹ ಇಲಾಖೆ ಹಾಗೂ ಮೈಸೂರು ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದೆ. ಎನ್ಐಎ ಸಹ ಮಾಹಿತಿ ಕಲೆ ಹಾಕುತ್ತಿದೆ. ಈ ಘಟನೆಯು ಅರಮನೆಯ ಭದ್ರತಾ ವ್ಯವಸ್ಥೆಯ ಬಗ್ಗೆ ಕಳವಳ ಹುಟ್ಟುಹಾಕಿದೆ.

Related Articles

LEAVE A REPLY

Please enter your comment!
Please enter your name here

Latest Articles