27.7 C
Sullia
Sunday, March 8, 2026

ದೆವ್ವ ಬಿಡಿಸುವ ನೆಪದಲ್ಲಿ ಥಳಿತ, ಮಹಿಳೆ ಸಾವು

ನ್ಯೂಸ್ ನಾಟೌಟ್ : ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆಯೊಬ್ಬರಿಗೆ ಮಾರಣಾಂತಿಕವಾಗಿ ಹಲ್ಲೆ ಮಾಡಲಾಗಿದ್ದು, ಈ ವೇಳೆ ಮಹಿಳೆ ಸಾವನ್ನಪ್ಪಿದ್ದಾಳೆ ಎಂದು ತಿಳಿದುಬಂದಿದೆ.


Ad Widget
Ad Widget
Ad Widget
Ad Widget
Ad Widget
Ad Widget
Ad Widget

ಕಲಬುರಗಿಯ ಆಳಂದದಲ್ಲಿ ಈ ಘಟನೆ ನಡೆದಿದ್ದು, ದೆವ್ವ ಹಿಡಿದಿದೆ ಅಂತ ಬೇವಿನ ಕಟ್ಟಿಗೆಯಿಂದ ಹಲ್ಲೆ ನಡೆಸಿದ ಪರಿಣಾಮ ಗಂಭೀರ ಗಾಯಗೊಂಡು ಮಹಿಳೆ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ. ಸಂತ್ರಸ್ಥ ಮಹಿಳೆಯನ್ನು ಆಳಂದ ಮೂಲದ ಮುಕ್ತಾಬಾಯಿ (26) ಎಂದು ಗುರುತಿಸಲಾಗಿದೆ.

ಮೂಲಗಳ ಪ್ರಕಾರ ಮುಕ್ತಾಬಾಯಿ ಕುಟುಂಬಸ್ಥರೇ ಆಕೆಗೆ ದೆವ್ವ ಹಿಡಿದಿದೆ ಎಂದು ಆರೋಪಿಸಿದ್ದರು. ಅದರಂತೆ ಗಂಡನ ಮನೆಯವರು, ಬೇವಿನ ಕಟ್ಟಿಗೆಯಿಂದ ಆಕೆ ಮೇಲೆ ಭೀಕರವಾಗಿ ಹಲ್ಲೆ ನಡೆಸಿದ ಪರಿಣಾಮ ಮುಕ್ತಾಬಾಯಿ (26) ಎಂಬವರು ಗಂಭೀರವಾಗಿ ಗಾಯಗೊಂಡಿದ್ದರು.

ಈ ವೇಳೆ ಅವರನ್ನು ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಜಿಮ್ಸ್ ಆಸ್ಪತ್ರೆಯಲ್ಲಿ ಮುಕ್ತಾಬಾಯಿ ಕೊನೆಯುಸಿರೆಳೆದಿದ್ದಾರೆ.

ಕುಟುಂಬಸ್ಥರು ಹೇಳುವಂತೆ ಆಳಂದ ಪಟ್ಟಣದ ವೆಂಕಟೇಶ್ವರ ನಗರದ ನಿವಾಸಿಯಾದ ಮುಕ್ತಾಬಾಯಿ ಅವರನ್ನು ಆರು ವರ್ಷಗಳ ಹಿಂದೆ ಮಹಾರಾಷ್ಟ್ರದ ಮುರುಮ್ ಗ್ರಾಮದ ಗಿಡ್ಡೆಪ್ಪ ಎಂಬಾತನಿಗೆ ವಿವಾಹ ಮಾಡಿಕೊಡಲಾಗಿತ್ತು. ಈ ದಂಪತಿಗೆ ಐದು ವರ್ಷದ ಮಗನಿದ್ದಾನೆ.

ಆದರೆ, ಕಳೆದ ಕೆಲವು ದಿನಗಳಿಂದ ಮುಕ್ತಾಬಾಯಿಗೆ ದೆವ್ವ ಹಿಡಿದಿದೆ ಎಂದು ಗಂಡನ ಮನೆಯವರು ಕಿರುಕುಳ ನೀಡುತ್ತಿದ್ದರು ಎನ್ನಲಾಗಿದೆ. ಮಗಳಿಗೆ ಯಾವುದೇ ದೆವ್ವ ಹಿಡಿದಿಲ್ಲ, ಆಕೆಯನ್ನು ಹೊಡೆಯಬೇಡಿ ಎಂದು ತಾಯಿ ತಿಪ್ಪವ್ವ ಎಷ್ಟೇ ಮನವಿ ಮಾಡಿದರೂ ಗಂಡನ ಮನೆಯವರು ಕೇಳಿರಲಿಲ್ಲ ಎಂದು ಆರೋಪಿಸಲಾಗಿದೆ.

Related Articles

LEAVE A REPLY

Please enter your comment!
Please enter your name here

Latest Articles