27.7 C
Sullia
Sunday, March 8, 2026

ಡಾ. ಚಂದ್ರಶೇಖರ ದಾಮ್ಲೆಯವರಿಗೆ ಪೇಜಾವರ ಶ್ರೀಗಳಿಂದ ಜೀವಮಾನ ಸಾಧನಾ ಪ್ರಶಸ್ತಿ, ಸುಳ್ಯಕ್ಕೆ ಸಂದ ಗೌರವ

ನ್ಯೂಸ್ ನಾಟೌಟ್: ಕನ್ನಡ ಶಾಲೆಯನ್ನು ಕಟ್ಟಿ, ನಿತ್ಯ ಹಗಲಿರುಳು ದುಡಿದು, ಸಾವಿರಾರು ವಿದ್ಯಾರ್ಥಿಗಳಿಗೆ ಶಿಕ್ಷಣದ ಬೆಳಕನ್ನು ನೀಡಿದ ಸುಳ್ಯದ ಹೆಮ್ಮೆಯ ಸಾಧಕ ಡಾ.ಚಂದ್ರಶೇಖರ ದಾಮ್ಲೆಯವರಿಗೆ ಪೇಜಾವರ ವಿಶ್ವೇಶತೀರ್ಥ ಜೀವಮಾನ ಸಾಧನಾ ಪ್ರಶಸ್ತಿ ದೊರಕಿದೆ. ಕಲ್ಕೂರ ಪ್ರತಿಷ್ಠಾನ ಮಂಗಳೂರು ವತಿಯಿಂದ ಡಿ.29ರಂದು “ಪೇಜಾವರ ವಿಶ್ವೇಶತೀರ್ಥ ನಮನ-2025” ಕಾರ್ಯಕ್ರಮದಲ್ಲಿ ಚಂದ್ರಶೇಖರ ದಾಮ್ಲೆ- ಜಯಲಕ್ಷ್ಮೀ ದಾಮ್ಲೆಯವರಿಗೆ ಈ ಪ್ರಶಸ್ತಿಯನ್ನು ಹಸ್ತಾಂತರಿಸಲಾಯಿತು. ಉಡುಪಿಯ ಪಲಿಮಾರು ಮಠಾಧೀಶ ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರು, ಮೂಡುಬಿದಿರೆ ಜೈನ ಮಠದ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ, ಚಿತ್ರಾಪುರ ಮಠದ ಸದ್ಯೋಜಾತ ಶಂಕರಶ್ರಮ ಸ್ವಾಮೀಜಿ ದಿವ್ಯ ಸಾನಿಧ್ಯವಹಿಸಿದ್ದರು. ಕರ್ನಾಟಕ ಬ್ಯಾಂಕ್ ಆಡಳಿತ ನಿರ್ದೇಶಕ ಹಾಗೂ ಕಾರ್ಯ ನಿರ್ವಹಣಾಧಿಕಾರಿ ರಾಘವೇಂದ್ರ ಶ್ರೀನಿವಾಸ್ ಭಟ್ ಮುಖ್ಯ ಅತಿಥಿಗಳಾಗಿದ್ದರು.


Ad Widget
Ad Widget
Ad Widget
Ad Widget
Ad Widget
Ad Widget
Ad Widget

Related Articles

LEAVE A REPLY

Please enter your comment!
Please enter your name here

Latest Articles