27.7 C
Sullia
Sunday, March 8, 2026

ಸುಳ್ಯ-ಸಂಪಾಜೆ: ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪೊಲೀಸ್ ಕಸ್ಟಡಿಗೆ, ಅಬ್ದುಲ್ ಜಬ್ಬಾರ್ ಹತ್ಯೆ ಪ್ರಕರಣ

ನ್ಯೂಸ್ ನಾಟೌಟ್: ಇತ್ತೀಚೆಗೆ ನಡೆದಿದ್ದ ಆಟೋ ಚಾಲಕನ ಹತ್ಯೆಗೆ ಸಂಬಂಧಿಸಿದಂತೆ ಸುಳ್ಯ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.


Ad Widget
Ad Widget
Ad Widget
Ad Widget
Ad Widget
Ad Widget
Ad Widget

ಏನಿದು ಪ್ರಕರಣ..?

ದೂರುದಾರರಾದ ಸುಳ್ಯ ಕಸ್ಬಾ ಗ್ರಾಮದ ನಿವಾಸಿ ಸುಮಯ್ಯಾ (35 ವರ್ಷ) ಎಂಬವರ ದೂರಿನಂತೆ, ಪಿರ್ಯಾದುದಾರರ ಗಂಡ ಅಬ್ದುಲ್‌ ಜಬ್ಬಾರ್‌ ಎಂಬವರನ್ನು, ದಿನಾಂಕ 16.10.2025 ರಂದು ಮದ್ಯಾಹ್ನ ವೇಳೆ, ಆರೋಪಿಗಳಾದ ಮೊಹಮ್ಮದ್ ರಫೀಕ್ ಮತ್ತು ಇತರರು, ಬಾಡಿಗೆಯ ನೆಪದಲ್ಲಿ ದುಗ್ಗಲಡ್ಕ ಎಂಬಲ್ಲಿಗೆ ಕರೆದುಕೊಂಡು ಹೋಗಿ ಕಿರುಕುಳ ನೀಡಿ, ಅಲ್ಲಿಂದ ಸುಳ್ಯ ಕಲ್ಲುಗುಂಡಿಗೆ ಕರೆತಂದು ಮಾರಣಾಂತಿಕ ಹಲ್ಲೆ ನಡೆಸಿ, ಜೀವಬೆದರಿಕೆ ಒಡ್ಡಿ ಕಳುಹಿಸಿದ್ದಾರೆ. ಇದರಿಂದಾಗಿ 17.10.2025 ರಂದು ಪಿರ್ಯಾದುದಾರರ ಗಂಡ ಅಬ್ದುಲ್‌ ಜಬ್ಬಾರ್‌ ಮನೆಯಲ್ಲಿದ್ದಾಗ ಅನಾರೋಗ್ಯಕ್ಕೀಡಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದರು. ಈ ಹಿನ್ನೆಲೆಯಲ್ಲಿ ಸುಳ್ಯ ಪೊಲೀಸ್ ಠಾಣೆಯಲ್ಲಿ ಅ.ಕ್ರ: 125/2025, ಕಲಂ: 105 ಜೊತೆಗೆ 3(5) BNS ರಂತೆ ಪ್ರಕರಣ ದಾಖಲಾಗಿತ್ತು. ಆರೋಪಿಗಳು ನಡೆಸಿದ ಹಲ್ಲೆಯ ಪರಿಣಾಮ ಸದ್ರಿ ಅಬ್ದುಲ್‌ ಜಬ್ಬಾರ್‌ ರವರು ಮೃತಪಟ್ಟಿರುವುದಾಗಿ ವೈದ್ಯಕೀಯ ವರದಿಯಲ್ಲಿ ದೃಢಪಟ್ಟಿತ್ತು. ಪ್ರಸ್ತುತ ಸದ್ರಿ ಪ್ರಕರಣವನ್ನು ಕಲಂ: 103 ಜೊತೆಗೆ 3(5) BNS ರಂತೆ ಕೊಲೆ ಪ್ರಕರಣವಾಗಿ ಮಾರ್ಪಡಿಸಲಾಗಿದೆ.

ಪ್ರಕರಣದ ತನಿಖೆ ನಡೆಸಲಾಗಿ, ಆರೋಪಿಯಾದ ಸುಳ್ಯ ಕಸಬ ನಿವಾಸಿ ಮೊಹಮ್ಮದ್ ರಫೀಕ್ (41) ಎಂಬಾತನನ್ನು ದಸ್ತಗಿರಿ ಮಾಡಿ, ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿ, ಪ್ರಕರಣದ ಮುಂದಿನ ತನಿಖೆಗಾಗಿ ಪೊಲೀಸ್ ಕಸ್ಟಡಿಗೆ ಪಡೆದುಕೊಳ್ಳಲಾಗಿರುತ್ತದೆ. ಕೃತ್ಯಕ್ಕೆ ಬಳಿದ ಕಾರನ್ನು ಸ್ವಾಧೀನಪಡಿಸಿಕೊಳ್ಳಲಾಗಿದ್ದು, ಪ್ರಕರಣದ ಇನ್ನೋರ್ವ ಆರೋಪಿಯಾದ ಸುಳ್ಯ ಸಂಪಾಜೆ ನಿವಾಸಿ ಮನೋಹರ್ ಕೆ ಎಸ್ @ ಮನು (42) ಎಂಬಾತನನ್ನು ದಸ್ತಗಿರಿ ಮಾಡಲಾಗಿದ್ದು, ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿ, ಮುಂದಿನ ತನಿಖೆ ನಡೆಸಲಾಗುವುದು ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Related Articles

LEAVE A REPLY

Please enter your comment!
Please enter your name here

Latest Articles