27.7 C
Sullia
Sunday, March 8, 2026

ದೀರ್ಘಾವಧಿ ಸಿಎಂ ಆಗಲಿದ್ದಾರೆ ಸಿದ್ದರಾಮಯ್ಯ!ಐತಿಹಾಸಿಕ ಕ್ಷಣವನ್ನು ಸಂಭ್ರಮಿಸುತ್ತಿರುವ ಅಭಿಮಾನಿಗಳು

ನ್ಯೂಸ್ ನಾಟೌಟ್ : ರಾಜ್ಯದ ದೀರ್ಘಾವಧಿ ಸಿಎಂ ಎಂಬ ಹೆಗ್ಗಳಿಕೆಗೆ ಸಿದ್ದರಾಮಯ್ಯ ಅವರು ಪಾತ್ರರಾಗಲು ಕೇವಲ ಒಂದೇ ದಿನ ಬಾಕಿ ಇದೆ.


Ad Widget
Ad Widget
Ad Widget
Ad Widget
Ad Widget
Ad Widget
Ad Widget

ದೇವರಾಜ ಅರಸು ದಾಖಲೆಯನ್ನು ನಾಳೆ ಮುರಿಯಲಿದ್ದಾರೆ. 7 ವರ್ಷ 239 ದಿನಗಳ ಕಾಲ ಡಿ. ದೇವರಾಜ ಅರಸು ಕರ್ನಾಟಕದ ಸಿಎಂ‌ ಆಗಿದ್ದ‌ರು. ಸಿದ್ದರಾಮಯ್ಯ ಕೂಡ ಇಂದಿಗೆ 7 ವರ್ಷ 239 ದಿನ ಪೂರೈಸಿದ್ದಾರೆ. ಮೂರನೇ ಸ್ಥಾನದಲ್ಲಿ ಎಸ್​. ನಿಜಲಿಂಗಪ್ಪ ಅವರಿದ್ದು, 7 ವರ್ಷ 175 ದಿನಗಳ ಕಾಲ ಅವರು ಮುಖ್ಯಮಂತ್ರಿಗಳಾಗಿ ಸೇವೆ ಸಲ್ಲಿಸಿದ್ದಾರೆ. ಬಳಿಕ 4ನೇ ಸ್ಥಾನದಲ್ಲಿ ರಾಮಕೃಷ್ಣ ಹೆಗಡೆ 5 ವರ್ಷ 216 ದಿನ ಮತ್ತು 5 ವರ್ಷ 82 ದಿ‌ನ ಸಿಎಂ ಆಗಿದ್ದ ಬಿ.ಎಸ್​. ಯಡಿಯೂರಪ್ಪ 5ನೇ ಸ್ಥಾನದಲ್ಲಿದ್ದಾರೆ.

ದೇವರಾಜ ಅರಸು ಅವರು ಸತತವಾಗಿ ಏಳೂವರೆ ವರ್ಷ ಅಧಿಕಾರದಲ್ಲಿದ್ದರೆ ಸಿದ್ದರಾಮಯ್ಯ ಮೊದಲ ಅವಧಿ ಪೂರ್ಣಗೊಂಡ ಬಳಿಕ ಮತ್ತೆ ಕಾಂಗ್ರೆಸ್​​ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರಲಿಲ್ಲ. 2018ರ ವಿಧಾನ ಸಭೆ ಚುನಾವಣೆ ಫಲಿತಾಂಶ ಅತಂತ್ರವಾಗಿದ್ದ ಕಾರಣಕ್ಕೆ ಜೆಡಿಎಸ್​​ ಜೊತೆ ಸೇರಿ ಕಾಂಗ್ರೆಸ್​​ ಮೈತ್ರಿ ಸರ್ಕಾರ ರಚಿಸಿತ್ತು. ಆದರೆ ಕುಮಾರಸ್ವಾಮಿ ಅವರ ನೇತೃತ್ವದ ಸರ್ಕಾರ 14 ತಿಂಗಳಿಗೇ ಪತನವಾಗಿತ್ತು. ಬಳಿಕ ಅಧಿಕಾರಕ್ಕೆ ಬಂದ ಬಿಜೆಪಿಯಿಂದ ಯಡಿಯೂರಪ್ಪ ಮತ್ತು ಬಸವರಾಜ ಬೊಮ್ಮಾಯಿ ಕ್ರಮವಾಗಿ ಮುಖ್ಯಮಂತ್ರಿಗಳಾಗಿದ್ದರು. ಅದಾದ ಬಳಿಕ 2023ರ ಚುನಾವಣೆಯಲ್ಲಿ ಕಾಂಗ್ರೆಸ್​​ ಸ್ಪಷ್ಟ ಬಹುಮತ ಪಡೆದ ಕಾರಣ ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದರು.

ಶುಭಾಶಯ ಕೋರಿ ಬ್ಯಾನರ್​

ಸಿಎಂ ಸಿದ್ದರಾಮಯ್ಯನವರು ವಿಶಿಷ್ಠ ದಾಖಲೆ ಬರೆಯುತ್ತಿರುವ ಹಿನ್ನೆಲೆ ಅವರ ಅಭಿಮಾನಿಗಳು ಮತ್ತು ಬೆಂಬಲಿಗರಿಂದ ಸಂಭ್ರಮಾಚರಣೆಗೆ ಅದಾಗಲೇ ತಯಾರಿ ನಡೆದಿದೆ. ದೀರ್ಘವಧಿ ಸಿಎಂ ಆಗಿ ದಾಖಲೆ ಬರೆದ ಸಿದ್ದರಾಮಯ್ಯ ಎಂದು ಶುಭಾಶಯ ಕೋರಿರುವ ಪೋಸ್ಟರ್​​ನ ಅಭಿಮಾನಿಗಳು ಮುಖ್ಯಮಂತ್ರಿಗಳ ನಿವಾಸದ ಬಳಿ ಹಾಕಿದ್ದಾರೆ. ಕಾವೇರಿ ನಿವಾಸದ ಎದುರಿಗಿನ ಸರ್ಕಲ್ ಬಳಿ ಬ್ಯಾನರ್​​ ರಾರಾಜಿಸುತ್ತಿದೆ.

Related Articles

LEAVE A REPLY

Please enter your comment!
Please enter your name here

Latest Articles