27.7 C
Sullia
Sunday, March 8, 2026

ಬಳ್ಳಾರಿ ಪ್ರಕರಣವನ್ನು ಸಿಬಿಐಗೆ ವಹಿಸುವ ಅಗತ್ಯತೆ ಇಲ್ಲ: ಪರಮೇಶ್ವರ್

ನ್ಯೂಸ್ ನಾಟೌಟ್ :ಬಳ್ಳಾರಿ ಘಟನೆಯ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವ ಅಗತ್ಯವಿಲ್ಲ. ಪ್ರಕರಣವನ್ನು ತನಿಖೆ ಮಾಡುವ ಸಾಮರ್ಥ್ಯ ನಮ್ಮ ಪೊಲೀಸರಿಗೆ ಇದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ (G Parameshwar) ಹೇಳಿದರು.


Ad Widget
Ad Widget
Ad Widget
Ad Widget
Ad Widget
Ad Widget
Ad Widget

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಪೊಲೀಸರಿಗೆ ತನಿಖೆ ಮಾಡಲು ಆಗುವುದಿಲ್ಲ ಎಂಬ ಸಂದರ್ಭ ಬಂದರೆ ಸಿಬಿಐಗೆ ನೀಡುವ ಬಗ್ಗೆ ಮಾತನಾಡಬಹುದು. ಈಗಾಗಲೇ ಯಾವುದೇ ಪ್ರಕರಣಗಳನ್ನು ಸಿಬಿಐಗೆ ನೀಡುವುದಿಲ್ಲ ಎಂದು ಕ್ಯಾಬಿನೆಟ್‌ನಲ್ಲಿ ತೀರ್ಮಾನ ಮಾಡಲಾಗಿದೆ. ಸಿಬಿಐಗೆ ಕೊಡುವ ಅಗತ್ಯತೆಯೂ ಇಲ್ಲ ಎಂದರು. 

ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿ, ಕುಮಾರಸ್ವಾಮಿ ಅವರು ಎರಡು ಬಾರಿ ರಾಜ್ಯದ ಮುಖ್ಯಮಂತ್ರಿಗಳಾಗಿದ್ದವರು. ಕೇಂದ್ರದಲ್ಲಿ ಬೃಹತ್ ಕೈಗಾರಿಕೆ ಸಚಿವರಾಗಿದ್ದಾರೆ. ನನ್ನ ಬಗ್ಗೆ ವೈಯಕ್ತಿಕವಾಗಿ ಹೇಳಿಕೆ ಕೊಟ್ಟಿದ್ದಾರೆ. ನಾನು ಅವರ ಬಗ್ಗೆ ನಾನು ಏನು ಬೇಕಾದರೂ ಮಾತನಾಡಬಹುದು. ಅವರು ಬಹಳ ಜವಾಬ್ದಾರಿಯುತವಾಗಿ ಹೇಳಿಕೆ ಕೊಟ್ಟಿದ್ದಾರೆ ಎಂದು ಭಾವಿಸುತ್ತೇನೆ. ಅದನ್ನು ಸ್ವೀಕಾರ ಮಾಡುತ್ತೇನೆ ಎಂದು ಹೇಳಿದರು. 

Related Articles

LEAVE A REPLY

Please enter your comment!
Please enter your name here

Latest Articles