ನ್ಯೂಸ್ ನಾಟೌಟ್: ಕೆವಿಜಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವಾರ್ಷಿಕ ಕ್ರೀಡಾಕೂಟ ಜ.8ರಂದು ಎನ್‌ಎಂಸಿ ಕ್ರೀಡಾಂಗಣದಲ್ಲಿ ನೆರವೇರಿತು. ಕಾರ್ಯಕ್ರಮವನ್ನು ಎಒಎಲ್ ಇ(ರಿ.) ಸುಳ್ಯ ಅಧ್ಯಕ್ಷರು ಹಾಗೂ ಕೆವಿಜಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ. ಕೆ.ವಿ. ಚಿದಾನಂದ ವಹಿಸಿ ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ಕೆವಿಜಿ ಇನ್ಸ್ಟಿಟ್ಯೂಟ್ ಆಫ್ ನರ್ಸಿಂಗ್ ಸಂಸ್ಥೆಯ ಪ್ರಾಂಶುಪಾಲೆ ಚಂದ್ರಾವತಿ ಕೆ.ಎಸ್. ಉಪಸ್ಥಿತರಿದ್ದು ಶುಭ ಹಾರೈಸಿದರು. ಕೆವಿಜಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಡೀನ್ ಡಾ. ನೀಲಾಂಬಿಕೈ ನಟರಾಜನ್ ಕ್ರೀಡಾ ಸಂಯೋಜಕರಾದ ಡಾ. ದಾಮೋದರ ಡಿ ಹಾಗೂ ದೈಹಿಕ ಶಿಕ್ಷಣ ನಿರ್ದೇಶಕರಾದ ಮಿಥನ್ ಎಸ್ ಉಪಸ್ಥಿತರಿದ್ದರು. ಸಭಾ ಕಾರ್ಯಕ್ರಮದ ಬಳಿಕ ವಿದ್ಯಾರ್ಥಿಗಳೊಂದಿಗೆ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗೆ ವಿವಿಧ ಕ್ರೀಡಾ ಸ್ಪರ್ಧೆಗಳು ನೆರವೇರಿದವು.













