27.7 C
Sullia
Sunday, March 8, 2026

ವಿಚ್ಛೇದಿತ ಮಹಿಳೆಗೆ ಬಾಳು ಕೊಡ್ತೀನಿ ಅಂತ ಹೇಳಿ ಮಗು ಕೊಟ್ಟ,ಬಳಿಕ 36 ಲಕ್ಷ ರೂ ಹಣ ಹೊತ್ತು ಪರಾರಿಯಾದ..!

ನ್ಯೂಸ್ ನಾಟೌಟ್ : ವಿಚ್ಛೇದಿತ ಮಹಿಳೆಯನ್ನು ಮದುವೆಯಾದ ವ್ಯಕ್ತಿಯೊಬ್ಬ ಮಗು ಜನಿಸಿದ ಬಳಿಕ 36 ಲಕ್ಷ ರೂ. ವಂಚಿಸಿ ಪರಾರಿಯಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.


Ad Widget
Ad Widget
Ad Widget
Ad Widget
Ad Widget
Ad Widget
Ad Widget

ಬೆಂಗಳೂರಿನ ಬನಶಂಕರಿಯಲ್ಲಿ ಮಹಿಳೆ ಪೊಲೀಸ್ ದೂರು ನೀಡಿದ್ದು, ಮಹಿಳೆಯ ದೂರಿನ ಮೇರೆಗೆ ಎಫ್‌ಐಆರ್ ದಾಖಲಿಸಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಬನಶಂಕರಿಯ ನಿವಾಸಿ ಮೋಹನ್ ರಾಜ್ ಎಂಬಾತನ ವಿರುದ್ಧ ಮಹಿಳೆ ದೂರು ನೀಡಿದ್ದು, ಬಾಳು ಕೊಡುವುದಾಗಿ ಹೇಳಿ ಆಕೆ ಜತೆ ಸಂಸಾರ ನಡೆಸಿ ಮಗು ಜನಿಸಿದ ಬಳಿಕ, ಚಿನ್ನಾಭರಣ ಸೇರಿ ಸುಮಾರು 36 ಲಕ್ಷ ರೂಪಾಯಿ ತೆಗೆದುಕೊಂಡು ಪರಾರಿಯಾಗಿದ್ದಾನೆ.

ಮಹಿಳೆ ದಾಖಲಿಸಿರುವ ದೂರಿನಲ್ಲಿರುವಂತೆ ಕಳೆದ 10 ವರ್ಷಗಳಿಂದ ಮೋಹನ್ ರಾಜ್ ಪರಿಚಯವಿದ್ದು, 2022ರಲ್ಲಿ ಇಬ್ಬರ ನಡುವೆ ಮದುವೆ ನಡೆದಿತ್ತು. 2023ರ ಫೆಬ್ರವರಿಯಲ್ಲಿ ದಂಪತಿಗೆ ಹೆಣ್ಣು ಮಗು ಜನಿಸಿತ್ತು. ಆದರೆ 2025ರಲ್ಲಿ ಏಕಾಏಕಿ ಮನೆ ಬಿಟ್ಟು ಹೋದ ಮೋಹನ್ ರಾಜ್ ಇಂದಿಗೂ ಪತ್ತೆಯಾಗಿಲ್ಲ.

ಸಂತ್ರಸ್ತೆಯು 2021ರಲ್ಲಿ ಮೊದಲ ಪತಿಯಿಂದ ವಿಚ್ಛೇದನ ಪಡೆದಿದ್ದರು. ಮೊದಲ ಮದುವೆಯ ವಿಚಾರ ಸಂಪೂರ್ಣವಾಗಿ ತಿಳಿದಿದ್ದರೂ ಮೋಹನ್ ರಾಜ್ ಮದುವೆಯಾಗಿದ್ದಾನೆ ಎಂದು ತಿಳಿಸಿದ್ದಾರೆ. ಮೊದಲ ಪತಿಗೆ ಅನಾರೋಗ್ಯ ಸಮಸ್ಯೆ ಇದ್ದುದರಿಂದ ವಿಚ್ಛೇದನ ಪಡೆದಿದ್ದೆ ಎಂದು ಮಹಿಳೆ ಸ್ಪಷ್ಟಪಡಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Latest Articles