21.6 C
Sullia
Sunday, March 8, 2026

ಹಾಸನ: ಸಕಲೇಶಪುರದಲ್ಲಿ ಕಾಡಾನೆ ದಾಳಿಗೆ ಮಹಿಳೆ ಬಲಿ, ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ

ನ್ಯೂಸ್ ನಾಟೌಟ್ : ಹಾಸನ  ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಮೋಗಲಿ ಗ್ರಾಮದಲ್ಲಿ ಕಾಡಾನೆ ದಾಳಿಗೆ ಕಾರ್ಮಿಕ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಮೃತ ಮಹಿಳೆಯನ್ನು ಶೋಭಾ (40) ಎಂದು ಗುರುತಿಸಲಾಗಿದ್ದು, ಈ ದುರ್ಘಟನೆ ಜಿಲ್ಲೆಯಲ್ಲಿನ ಮಾನವ–ಕಾಡಾನೆ ಸಂಘರ್ಷ ಮತ್ತೊಮ್ಮೆ ತೀವ್ರವಾಗುತ್ತಿರುವುದಕ್ಕೆ ಸಾಕ್ಷಿಯಾಗಿದೆ.


Ad Widget
Ad Widget
Ad Widget
Ad Widget
Ad Widget
Ad Widget
Ad Widget

ಮಂಗಳವಾರ ಮುಂಜಾನೆ ಕಾಫಿ ತೋಟದಲ್ಲಿ ಸುಣ್ಣ ಹಚ್ಚುವ ಕೆಲಸಕ್ಕೆ ಪುತ್ರಿಯರಾದ ಶೋಭ ಮತ್ತು ರಾಗಿಣಿ ಜತೆ ರಾಜಮ್ಮ ತೆರಳಿದ್ದರು. ಕೆಲಸದ ವೇಳೆ ಏಕಾಏಕಿ ಕಾಡಾನೆ ದಾಳಿ ನಡೆಸಿದೆ. ಕಾಡಾನೆಯಿಂದ ತಪ್ಪಿಸಿಕೊಳ್ಳಲು ಮೂವರು ಓಡಿದರೂ, ಶೋಭಾ ಅವರನ್ನು ಬೆನ್ನಟ್ಟಿದ ಸಲಗ ತುಳಿದು ಸ್ಥಳದಲ್ಲೇ ಸಾಯಿಸಿದೆ. ಘಟನೆಯ ಬಳಿಕ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಧಾವಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Latest Articles