ನ್ಯೂಸ್ ನಾಟೌಟ್: ಬೆಳ್ತಂಗಡಿ ಗ್ರಾಮದಲ್ಲಿ 15 ವರ್ಷದ ಬಾಲಕನ ಸಾವಿನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹೊಸ ಟ್ವಿಸ್ಟ್ ದೊರೆತಿದೆ.
ಜ.14ರಂದು ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಒಡಿಲ್ನಾಳ ಗ್ರಾಮದ ಸಂಬೋಳ್ಯದಲ್ಲಿ ಸುಮಂತ್ ಎಂಬ ಬಾಲಕನ ಶವ ಕೆರೆಯಲ್ಲಿ ಸಿಕ್ಕಿತ್ತು. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆ ನಡೆದು ಮುಳುಗಿ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿತ್ತು. ಬಾಲಕನ ಬಲಗೈನಲ್ಲಿ ಆಗಿದ್ದ ಗಾಯದಿಂದ ಕೊಲೆ ಆಗಿರಬಹುದೇ ಎಂಬ ಹಿನ್ನೆಲೆಯಲ್ಲಿ ಒಂದಷ್ಟು ಅನುಮಾನಗಳು ವ್ಯಕ್ತವಾಗಿದ್ದವು. ತಲೆಯಲ್ಲಿ ಕೂಡ ಗಾಯ ಆಗಿದ್ದರಿಂದ ಸಮರ್ಪಕ ವಿವರಣೆ ದೊರಕಿರಲಿಲ್ಲ. ಸಮಗ್ರ ತನಿಖೆ ಹಾಗೂ ಸೂಕ್ಷ್ಮ ತನಿಖೆ ನಡೆಸುವ ಉದ್ದೇಶದಿಂದ ಈ ಅಸಹಜ ಸಾವು ಪ್ರಕರಣವನ್ನು ಕೊಲೆ ಪ್ರಕರಣವಾಗಿ ಪರಿವರ್ತಿಸಿ ತನಿಖೆ ನಡೆಸಲಾಗುತ್ತಿದೆ. ಸದ್ಯ ಪ್ರಕರಣದ ತನಿಖೆಗಾಗಿ ಬೆಳ್ತಂಗಡಿ ಡಿಎಸ್ ಪಿ ನೇತೃತ್ವದಲ್ಲಿ ನಾಲ್ಕು ತಂಡಗಳನ್ನು ರಚಿಸಲಾಗಿದೆ.













