ನ್ಯೂಸ್ ನಾಟೌಟ್ : ಸುಳ್ಯದ ಕೆ.ವಿ.ಜಿ. ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಜ.19ರಂದು “ಲ್ಯೂಮಿಯರ್–2k26” ಕಾಲೇಜು ವಾರ್ಷಿಕೋತ್ಸವ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಯಿತು. ಎರಡು ದಿನಗಳ ಕಾಲ (ಜ.19 & 20) ನಡೆಯುವ ಈ ಕಾರ್ಯಕ್ರಮಕ್ಕೆ ಜ.19ರಂದು ಗಣ್ಯರು ದೀಪ ಬೆಳಗುವುದರೊಂದಿಗೆ ಸಾಂಸ್ಕೃತಿಕ ಚಟುವಟಿಕೆಗಳಿಗೆ ಚಾಲನೆ ನೀಡಿದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಕಾಡೆಮಿ ಆಫ್ ಲಿಬೆರಲ್ ಎಜ್ಯುಕೇಶನ್ (ರಿ.) ಸುಳ್ಯ ಅಧ್ಯಕ್ಷ ಡಾ. ಕೆವಿ ಚಿದಾನಂದ ವಹಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಮುಖ್ಯ ಅತಿಥಿಯಾಗಿ ಆರ್.ಜಿ.ಯು.ಹೆಚ್.ಎಸ್ ಬೆಂಗಳೂರು ಇದರ ಅಕಾಡೆಮಿಕ್ ಕೌನ್ಸಿಲ್ ಮೆಂಬರ್ ಹಾಗೂ ಶ್ರೀ ಚಾಮುಂಡೇಶ್ವರಿ ಮೆಡಿಕಲ್ ಕಾಲೇಜು ಹಾಸ್ಪಿಟಲ್, ರಿಸರ್ಚ್ ಇನ್ಸ್ಟಿಟ್ಯೂಟ್ ಚನ್ನಪಟ್ಟಣ ಪ್ರಾಂಶುಪಾಲ ಡಾ ಪ್ರವೀಣ್ ಜಿ. ಯು ಭಾಗವಹಿಸಿ ಮಾತನಾಡಿ ಕಠಿಣ ಪರಿಶ್ರಮವೇ ಯಶಸ್ಸಿನ ಮೂಲ ಮಂತ್ರ ಎಂದರು. ಬಳಿಕ ಅಂಗಾಂಗ ದಾನದ ಪ್ರಾಮುಖ್ಯತೆ ಹಾಗೂ ಹೆಣ್ಣು ಭ್ರೂಣ ಹತ್ಯೆಯ ಕುರಿತು ಮಾಹಿತಿ ನೀಡಿದರು.
ವೇದಿಕೆಯಲ್ಲಿ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ (ರಿ.) ಉಪಾಧ್ಯಕ್ಷೆ ಶೋಭಾ ಚಿದಾನಂದ, ಸಂಸ್ಥೆಯ ಡೀನ್ ಡಾ. ನೀಲಾಂಬಿಕೈ ನಟರಾಜನ್, ಸರ್ಜರಿ ವಿಭಾಗ ಮುಖ್ಯಸ್ಥರು ಹಾಗೂ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ. ಗೋಪಿನಾಥ್ ಪೈ, ಮೆಡಿಸಿನ್ ವಿಭಾಗ ಮುಖ್ಯಸ್ಥರು ಡಾ ಪ್ರಕಾಶ್ ರಾವ್, ಒಬಿಜಿ ವಿಭಾಗ ಮುಖ್ಯಸ್ಥರು ಹಾಗೂ ಪಿಜಿ ಕೋರ್ಡಿನೇಟರ್ ಡಾ ಗೀತಾ ದೊಪ್ಪಾ, ಕಮ್ಯುನಿಟಿ ಮೆಡಿಸಿನ್ ವಿಭಾಗ ಮುಖ್ಯಸ್ಥರು ಹಾಗೂ ಇಂಟರ್ನ್ ಕೊರ್ಡಿನೇಟರ್ ಡಾ ಅಪೂರ್ವ ದೊರೆ ಹಾಗೂ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಕಾಲೇಜು ಮ್ಯಾಗಜಿನ್ “ಸ್ವಾಸ್ತ್ಯ” ಬಿಡುಗಡೆಗೊಳಿಸಲಾಯಿತು. ಬಳಿಕ ಶೈಕ್ಷಣಿಕ, ಸಾಂಸ್ಕೃತಿಕ ಹಾಗೂ ಆಟೋಟ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಡಾ ಸಂಜನಾ ಹಾಗೂ ಡಾ ಸೌಮ್ಯ ಪ್ರಾರ್ಥಿಸಿದರು. ಡಾ ಪ್ರಕಾಶ್ ರಾವ್ ಸ್ವಾಗತಿಸಿದರು. ಡಾ ನೀಲಾಂಬಿಕೈ ನಟರಾಜನ್ ಕಾಲೇಜಿನ ವಾರ್ಷಿಕ ವರದಿ ವಾಚಿಸಿದರು. ಡಾ ಸರ್ಫರಾಜ್ ಜಮಾಲ್ ಅತಿಥಿ ಪರಿಚಯ ವಾಚಿಸಿದರು. ಡಾ ನವ್ಯ ಬಿ.ಎನ್ ಡಾ ಸುಬ್ರಮಣ್ಯ ಭಟ್, ಡಾ ಗೀತಾ ದೊಪ್ಪಾ ವಿವಿಧ ವಿಭಾಗಗಳ ಸ್ಪರ್ಧೆಗಳ ವಿಜೇತರ ಪಟ್ಟಿ ವಾಚಿಸಿದರು. ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಾದ ಡಾ. ನಿಕ್ಷೇಪ್ ಹಾಗೂ ಡಾ. ಗೌರಿ ವಂದಿಸಿದರು. ಸಭಾ ಕಾರ್ಯಕ್ರಮದ ಬಳಿಕ ಸಂಸ್ಥೆಯ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ವತಿಯಿಂದ ವಿವಿಧ ಸಾಂಸ್ಕೃತಿಕ ವೈವಿಧ್ಯ ನಡೆಯಿತು.













