27.7 C
Sullia
Sunday, March 8, 2026

27 ವರ್ಷಗಳ ನಾಸಾ ಜರ್ನಿಗೆ ಸುನಿತಾ ವಿಲಿಯಮ್ಸ್‌ ವಿದಾಯ

ನ್ಯೂಸ್ ನಾಟೌಟ್ : ಸುದೀರ್ಘ ಬಾಹ್ಯಾಕಾಶ ನಡಿಗೆ ಪೂರೈಸಿದ ಮೊದಲ ಮಹಿಳಾ ಗಗನಯಾತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದ ಭಾರತ ಮೂಲದ ಸುನಿತಾ ವಿಲಿಯಮ್ಸ್‌ ನಾಸಾದಿಂದ ನಿವೃತ್ತಿಯಾಗಿದ್ದಾರೆ. 2025ರ ಡಿ.27ರಂದು ಸುನಿತಾ ನಿವೃತ್ತಿಯಾಗಿದ್ದಾರೆ ಎಂದು ನಾಸಾ ಘೋಷಿಸಿದೆ. ಇದರೊಂದಿಗೆ 27 ವರ್ಷಗಳ ಸುದೀರ್ಘ ಜರ್ನಿಗೆ ಗುಡ್‌ಬೈ ಹೇಳಿದ್ದಾರೆ.


Ad Widget
Ad Widget
Ad Widget
Ad Widget
Ad Widget
Ad Widget
Ad Widget

ಈ ಕುರಿತು ಮಾತನಾಡಿರುವ ನಾಸಾ ಆಡಳಿತಾಧಿಕಾರಿ ಜೇರೆಡ್ ಐಸಾಕ್‌ಮನ್, ಸುನಿತಾ ವಿಲಿಯಮ್ಸ್‌ ಅವರನ್ನ ಮಾನವ ಬಾಹ್ಯಾಕಾಶ ಹಾರಾಟದ ಪ್ರವರ್ತಕಿ ಎಂದು ಬಣ್ಣಿಸಿದರು. ವಿಜ್ಞಾನ ಮತ್ತು ತಂತ್ರಜ್ಞಾನ ಕ್ಕೆ ಸುನಿತಾ ಅವರು ನೀಡಿದ ಕೊಡುಗೆಗಳು ಅಪಾರವಾಗಿದೆ. ಅವರ ಯೋಜನೆಗಳು ಚಂದ್ರ ಮತ್ತು ಮಂಗಳ ಗ್ರಹದತ್ತ ತೆರಳುವ ನಮ್ಮ ಪ್ರಯತ್ನಗಳಿಗೆ ಭದ್ರ ಅಡಿಪಾಯವಾಗಿದೆ. ಅವರ ಸಾಧನೆಗಳು ಮುಂದಿನ ಪೀಳಿಗೆಗೆ ಪ್ರೇರಣೆ. ನಾಸಾ ಮತ್ತು ನಮ್ಮ ರಾಷ್ಟ್ರಕ್ಕೆ ಸುನಿತಾ ಅವರು ನೀಡಿದ ಗಣನೀಯ ಸೇವೆಗೆ ಧನ್ಯವಾದಗಳು ಎಂದು ಶ್ಲಾಘಿಸಿದರು.

Related Articles

LEAVE A REPLY

Please enter your comment!
Please enter your name here

Latest Articles