21.6 C
Sullia
Sunday, March 8, 2026

ಮದ್ವೆಗೂ ಮುಂಚೆ ಪ್ರೆಗ್ನೆಂಟ್, ಹುಟ್ಟಿದಾಕ್ಷಣ ಹಸುಗೂಸು ಸಾವು

ನ್ಯೂಸ್ ನಾಟೌಟ್ : ಮದುವೆಗೂ  ಮುನ್ನವೇ ಸ್ಟಾಫ್​​ ನರ್ಸ್​ವೊಬ್ಬರು ತಾಯಿ ಆಗಿದ್ದು, ಹೆರಿಗೆ ಆದ ಒಂದೇ ನಿಮಿಷದಲ್ಲಿ ಹಸುಗೂಸು ಸಾವನ್ನಪ್ಪಿದೆ.


Ad Widget
Ad Widget
Ad Widget
Ad Widget
Ad Widget
Ad Widget
Ad Widget

ಚಿಕ್ಕಮಗಳೂರಿನ (Chikkamagaluru) ತರೀಕೆರೆಯ ಬಾವಿಕೆರೆ ಗ್ರಾಮದ ಸ್ಟಾಫ್ ನರ್ಸ್ ಮದುವೆಗೂ ಮುನ್ನ ಮಗುವಿಗೆ ಜನ್ಮ ನೀಡಿದ್ದಾರೆ. ಆದ್ರೆ, ಮಗು ಮೃತಪಟ್ಟಿದ್ದು, ಸಮಾಜದ ಗೌರವಕ್ಕೆ ಅಂಜಿ ಕುಟುಂಬಸ್ಥರೇ ಹಸುಗೂಸನ್ನು ಕೊಲೆ ಮಾಡಿದ್ದಾರೆ ಎನ್ನುವ ಅನುಮಾನಗಳು ವ್ಯಕ್ತವಾಗಿವೆ. ಹೀಗಾಗಿ ಈ ಸಂಬಂಧ ಲಕ್ಕವಳ್ಳಿ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಸ್ಟಾಫ್ ನರ್ಸ್ ಆಗಿ ಕೆಲಸ ಮಾಡುತ್ತಿದ್ದ ಯುವತಿ, ಮದುವೆಗೆ ಮೊದಲೇ ಗರ್ಭಿಣಿಯಾಗಿದ್ದು, ಕುಟುಂಬದ ಗೌರವದ ದೃಷ್ಟಿಯಿಂದ ಈ ವಿಷಯವನ್ನು ಗುಟ್ಟಾಗಿಡಲಾಗಿತ್ತು. ಆದ್ರೆ, ಕಳೆದ 15 ದಿನಗಳ ಹಿಂದೆ ಮನೆಯಲ್ಲೇ ಯುವತಿಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದು, ಆಸ್ಪತ್ರೆಗೆ ಹೋದರೆ ವಿಷಯ ಜಗಜ್ಜಾಹೀರಾಗುತ್ತದೆ ಎಂಬ ಭಯಕ್ಕೆ ನರ್ಸ್ ಆಗಿದ್ದ ಯುವತಿ, ತನ್ನ ತಂದೆ-ತಾಯಿ ಮತ್ತು ಅಜ್ಜಿಯ ಸಹಾಯದಿಂದ ಮನೆಯಲ್ಲೇ ಹೆರಿಗೆ ಮಾಡಿಸಿಕೊಂಡಿದ್ದಾಳೆ. ಆದ್ರೆ,  ಹುಟ್ಟಿದ ಒಂದೇ ನಿಮಿಷದಲ್ಲೇ ಮಗು ಸಾವನ್ನಪ್ಪಿದೆ. ಹೀಗಾಗಿ ಮರ್ಯಾದೆ ಹೆದರಿ ಮಗುವನ್ನು ಕುಟುಂಬಸ್ಥರೇ ಉಸಿರುಗಟ್ಟಿಸಿ ಕೊಂದಿರಬಹುದು ಎಂದು ಶಂಕಿಸಲಾಗಿದೆ.

ಇನ್ನು ಮಗು ಸಾವನ್ನಪ್ಪಿದ ಬಳಿಕ ಮೃತದೇವನ್ನು ಬ್ಯಾಗ್‌ನಲ್ಲಿ ತುಂಬಿಕೊಂಡು ಹೋಗಿ, ಜನವಸತಿ ಇಲ್ಲದ ತಿಪ್ಪೆಯ ಗುಂಡಿಯೊಂದರಲ್ಲಿ ಹೂತು ಬಂದಿದ್ದಾರೆ. ಆದ್ರೆ, ಇದನ್ನು ತಿಪ್ಪೆ ಗುಂಡಿಯ ಪಕ್ಕದ ಮನೆಯ ಯುವಕ ನೋಡಿದ್ದು, ಏನೋ ಹೂತು ಹಾಕಿರುವ ಬಗ್ಗೆ ಯುವಕನಿಗೆ ಅನುಮಾನ ಮೂಡಿದೆ. ಬಳಿಕ ಯುವಕ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ. ಈ ಮಾಹಿತಿ ಮೇರೆಗೆ ಕೂಡಲೇ ಲಕ್ಕವಳ್ಳಿ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದಾಗ ತಿಪ್ಪೆಯಲ್ಲಿ ಹೂತಿದ್ದ ಮಗುವಿನ ಮೃತದೇಹ ಪತ್ತೆಯಾಗಿದೆ.

Related Articles

LEAVE A REPLY

Please enter your comment!
Please enter your name here

Latest Articles