ನ್ಯೂಸ್ ನಾಟೌಟ್ : ಬಿಗ್ ಬಾಸ್ ಕನ್ನಡ ಸೀಸನ್ 12ರ ವಿನ್ನರ್ ಗಿಲ್ಲಿ ನಟ ಅವರು ಈಗ ಅವರು ವಿಡಿಯೋ ಮಾಡಿ ಪೋಸ್ಟ್ ಮಾಡಿದ್ದಾರೆ. ಈ ವಿಡಿಯೋದಲ್ಲಿ ಅವರು ವಾಸ್ತವಕ್ಕೆ ಬರೋಕೆ ಒದ್ದಾಡುತ್ತಿದ್ದಾರೆ. ಈ ಮಧ್ಯೆ ಅವರು ದೊಡ್ಡ ಘೋಷಣೆ ಒಂದನ್ನು ಮಾಡಿದ್ದಾರೆ. ಈ ವಿಡಿಯೋ ವೈರಲ್ ಆಗಿ ಗಮನ ಸೆಳೆದಿದೆ. ಅವರ ಮುಂದಿನ ಪ್ರಾಜೆಕ್ಟ್ ಬಗ್ಗೆ ಕುತೂಹಲ ಮೂಡಿದೆ.
ನನ್ನ ಬೆಂಬಲಿಸಿದ ಎಲ್ಲರಿಗೂ ಧನ್ಯವಾದ. ಬಿಗ್ ಬಾಸ್ ಮನೆಯಲ್ಲಿರುವಾಗ ಜನರಿಂದ ಇಷ್ಟೊಂದು ಬೆಂಬಲ ಸಿಗುತ್ತದೆ ಎಂದು ನನಗೆ ಗೊತ್ತಿರಲಿಲ್ಲ. ಈಗಲೂ ಇದನ್ನು ನಂಬೋಕೆ ಆಗುತ್ತಿಲ್ಲ. ಟ್ಯಾಟೂ ಹಾಕಿಸಿಕೊಂಡ, ಹರಕೆ ಹೊತ್ತವರಿಗೆ, ಮಾಧ್ಯಮದವರಿಗೆ, ಸೋಶಿಯಲ್ ಮೀಡಿಯಾದಲ್ಲಿ ಬೆಂಬಲಿಸಿದವರಿಗೆ ಧನ್ಯವಾದ‘ ಎಂದಿದ್ದಾರೆ ಗಿಲ್ಲಿ.
ಆ ಬಳಿಕ ಅವರು ಹೊಸ ಘೋಷಣೆ ಬಗ್ಗೆಯೂ ಮಾಹಿತಿ ನೀಡಿದ್ದಾರೆ. ವಿಡಿಯೋಗೆ ಕ್ಯಾಪ್ಶನ್ ನೀಡಿರೋ ಅವರು, ‘ಇಷ್ಟು ದೂರ ಕರ್ಕೊಂಡು ಬಂದಿದ್ದೀರಿ. ಮನಸ್ಸಲ್ಲಿ ಜಾಗ ಕೊಟ್ಟಿದ್ದೀರಿ. ಕೈ ಮೇಲೆ ಹಚ್ಚೆ ಹಾಕಿಸ್ಕೊಂಡಿದ್ದೀರಿ. ನಿರಂತರವಾಗಿ ಬೆಂಬಲಿಸಿದ್ದೀರಿ. ಇದುವರೆಗೂ ಬರಿ ರನ್ನರ್ ಅಪ್ ಆಗೇ ಉಳ್ಕೊತಿದ್ದ ಗಿಲ್ಲಿಗೆ ಗೆಲುವಿನ ಕಿರೀಟ ತೊಡಿಸಿದ್ದೀರಿ, ಮೆರೆಸಿದ್ದೀರಿ. ಈ ಪ್ರೀತಿಗೆ ಏನು ಹೇಳಿದ್ರು, ಎಷ್ಟು ಹೇಳಿದ್ರು ಕಡಿಮೇನೆ’ ಎಂದಿದ್ದಾರೆ ಅವರು. ‘ಈ ಗೆಲುವಿನ ಬೆನ್ನಲ್ಲೇ ಹೊಸ ಹೆಜ್ಜೆ , ಹೊಸ ದಾರಿ ಕಡೆ ಮುಖ ಮಾಡೋ ಹೊತ್ತು’ ಎಂದು ಬರೆಯಲಾಗಿದೆ. ಈ ಸಾಲು ಕುತೂಹಲ ಮೂಡಿಸಿದೆ.













