27.7 C
Sullia
Sunday, March 8, 2026

ಶಾಲೆಯಿಂದ ಮನೆಗೆ ಬರುತ್ತಿದ್ದ ಬಾಲಕಿಯನ್ನು ಹಿಂಬಾಲಿಸಿದ್ದ ಅಪರಿಚಿತ ಅರೆಸ್ಟ್: ಆರೋಪಿಯ ವಿಚಾರಣೆ

ನ್ಯೂಸ್ ನಾಟೌಟ್ : ಶಾಲೆಯಿಂದ ಮನೆಗೆ ಬರುತ್ತಿದ್ದ ಬಾಲಕಿಯನ್ನು ಹಿಂಬಾಲಿಸಿ, ಆತಂಕ ಸೃಷ್ಟಿಸಿದ್ದ ಅಪರಿಚಿತನನ್ನು ಪೊಲೀಸರು ಅರೆಸ್ಟ್ ಮಾಡಿರುವ ಘಟನೆ ಹಾಸನದಲ್ಲಿ ನಡೆದಿದೆ.


Ad Widget
Ad Widget
Ad Widget
Ad Widget
Ad Widget
Ad Widget
Ad Widget

ಕೋಲಾರ (Kolar) ಜಿಲ್ಲೆ ದಂಡಿಹಳ್ಳಿ ಹೋಬಳಿಯ ಪ್ರಸನ್ನ (38) ಬಂಧಿತ ಆರೋಪಿ. ಜ.17ರಂದು ಹಾಸನದ (Hassan) 80 ಅಡಿ ರಸ್ತೆಯಲ್ಲಿ ಈ ಘಟನೆ ನಡೆದಿತ್ತು. ಶಾಲೆಯಿಂದ ಮನೆಗೆ ಬರುತ್ತಿದ್ದ ಬಾಲಕಿಯನ್ನು ಹಿಂಬಾಲಿಸಿಕೊಂಡು ಬಂದಿದ್ದ. ಇದನ್ನು ಗಮನಿಸಿದ್ದ ಬಾಲಕಿ ಗಾಬರಿಯಲ್ಲೇ ಓಡೋಡಿ ಬಂದು ಮನೆ ಸೇರಿಕೊಂಡಿದ್ದಳು. ಬಳಿಕ ಮನೆ ಬಳಿ ಬಂದ ಆರೋಪಿ ಗೇಟ್ ಹೊರಗೆ ನಿಂತು ಒಳಗೆ ಇಣುಕಿನೋಡಿ ಹೋಗಿದ್ದ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಈ ಸಂಬಂಧ ಪೆನ್‌ಷನ್‌ಮೊಹಲ್ಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಘಟನೆ ನಡೆದ ಮೂರು ದಿನಗಳ ಬಳಿಕ ಆಗಂತುಕನನ್ನು ಪೊಲೀಸರು ಬಂಧಿಸಿದ್ದು, ಆರೋಪಿಯ ವಿಚಾರಣೆ ನಡೆಸುತ್ತಿದ್ದಾರೆ

Related Articles

LEAVE A REPLY

Please enter your comment!
Please enter your name here

Latest Articles