ನ್ಯೂಸ್ ನಾಟೌಟ್ : ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ 77ನೇ ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಜ. 26ರಂದು ಆಚರಿಸಲಾಯಿತು. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ (ರಿ ) ಸುಳ್ಯ ಇದರ ಅಧ್ಯಕ್ಷ ಡಾ.ಕೆ.ವಿ. ಚಿದಾನಂದ ಧ್ವಜಾರೋಹಣ ನೆರವೇರಿಸಿ ಶುಭ ಹಾರೈಸಿದರು. ಈ ಸಂದರ್ಭ ಕಾಲೇಜಿನ ಡೀನ್ ಡಾ. ನೀಲಾಂಬಿಕೈ ನಟರಾಜನ್, ಮೆಡಿಕಲ್ ಸೂಪರಿಂಟೆಂಡೆಂಟ್ ಡಾ. ಸಿ. ರಾಮಚಂದ್ರ ಭಟ್, ಕೆವಿಜಿ ಇನ್ಸ್ಟಿಟ್ಯೂಟ್ ಆಫ್ ನರ್ಸಿಂಗ್ ಪ್ರಾಂಶುಪಾಲೆ ಚಂದ್ರಾವತಿ, ಡಾ. ನವ್ಯ.ಬಿ, ದೈಹಿಕ ಶಿಕ್ಷಣ ನಿರ್ದೇಶಕರಾದ ಮಿಥನ್ ಹಾಗೂ ಎಲ್ಲಾ ವಿಭಾಗ ಮುಖ್ಯಸ್ಥರು, ಪ್ರಾಧ್ಯಾಪಕ ವೃಂದದವರು ಮತ್ತು ಬೋಧಕೇತರ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.
ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆಯಲ್ಲಿ ಆಚರಣೆ



ಸುಳ್ಯದ ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆಯಲ್ಲೂ ಗಣರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಎಒಎಲ್ಇ (ರಿ.) ಸುಳ್ಯ ಇದರ ಅಧ್ಯಕ್ಷ ಡಾ. ಕೆ ವಿ ಚಿದಾನಂದ ಧ್ವಜರೋಹಣವನ್ನು ನೆರವೇರಿಸಿದರು. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ (ರಿ.) ಸುಳ್ಯ ಇದರ ಅಧ್ಯಕ್ಷರ ಆಪ್ತ ಕಾರ್ಯದರ್ಶಿ ಚಂದ್ರಶೇಖರ ಪೇರಾಲು, ಕೆವಿಜಿ ಆಯುರ್ ಫಾರ್ಮ ಮತ್ತು ರಿಸರ್ಚ್ ಸೆಂಟರ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಪುರುಷೋತ್ತಮ ಕೆ. ಜಿ., ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ಸುಳ್ಯ ಇದರ ಅಕಾಡೆಮಿಕ್ ಕೋ ಆರ್ಡಿನೇಟರ್ ಡಾ. ಕವಿತಾ ಬಿ ಎಂ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಸನತ್ ಕುಮಾರ್ ಡಿ ಜೆ, ಕಾಲೇಜಿನ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಅಧಿಕಾರಿ ಡಾ. ವಿನಯ ಶಂಕರ್ ಭಾರದ್ವಾಜ್ ಬಿ ಹಾಗೂ ಸಂಸ್ಥೆಯ ಬೋಧಕ ಬೋಧಕೇತರ ಸಿಬ್ಬಂದಿ ವರ್ಗದವರು, ಸ್ನಾತಕೋತ್ತರ ವಿದ್ಯಾರ್ಥಿಗಳು ಕಲಿಕಾ ವೈದ್ಯರು ಪದವಿ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.













