21.6 C
Sullia
Sunday, March 8, 2026

ಶಿಕಾರಿಪುರ:1 ಲಕ್ಷ ರೂ. ಲಂಚ ಪಡೆಯುವಾಗ ʻಲೋಕಾʼ ಬಲೆಗೆ ಬಿದ್ದ ಗ್ರಾಮ ಲೆಕ್ಕಾಧಿಕಾರಿ

ನ್ಯೂಸ್ ನಾಟೌಟ್ : ಜಮೀನು ಖಾತೆ ಬದಲಾವಣೆಗೆ 4ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟು, 1 ಲಕ್ಷ ರೂ. ಹಣ ಮುಂಗಡವಾಗಿ ಪಡೆಯುವಾಗ ಶಿಕಾರಿಪುರದ ಚಿಕ್ಕಜಂಬೂರು ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.


Ad Widget
Ad Widget
Ad Widget
Ad Widget
Ad Widget
Ad Widget
Ad Widget

ಗ್ರಾಮ ಲೆಕ್ಕಾಧಿಕಾರಿಯನ್ನು ವಿಠಲ ಎಂದು ಗುರುತಿಸಲಾಗಿದೆ. ಶಿಕಾರಿಪುರ ಪಟ್ಟಣದ ಸರ್ಕಾರಿ ನೌಕರರ ಕ್ಯಾಂಟೀನ್‌ನಲ್ಲಿ 1ಲಕ್ಷ ರೂ. ಲಂಚದ ಹಣ ಪಡೆಯುವಾಗ ಲೋಕಾಯುಕ್ತ ಪೊಲೀಸರು ಇವರನ್ನು ವಶಕ್ಕೆ ಪಡೆದಿದ್ದರು. ಜಂಬೂರಿನ ಜಿಕ್ರಿಯಾ ಬೇಗ್ ಎಂಬವರು ತಮ್ಮ ತಂದೆಯ ವಿಲ್‌ಪತ್ರದಂತೆ ಜಮೀನಿನ ಖಾತೆ ಬದಲಾವಣೆ ಅರ್ಜಿ ಸಲ್ಲಿಸಿದ್ದರು. ಖಾತೆ ಬದಲಾವಣೆಗೆ ಗ್ರಾಮ ಲೆಕ್ಕಾಧಿಕಾರಿ 4 ಲಕ್ಷ ರೂ. ಬೇಡಿಕೆ ಇಟ್ಟಿದ್ದರು

ಇದರಲ್ಲಿ 1 ಲಕ್ಷ ರೂ. ಹಣ ಪಡೆಯುವಾಗ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related Articles

LEAVE A REPLY

Please enter your comment!
Please enter your name here

Latest Articles