21.6 C
Sullia
Sunday, March 8, 2026

ನಿರ್ಮಲಾ ಸೀತಾರಾಮನ್ ದಾಖಲೆಯ ಒಂಬತ್ತನೇ ಬಜೆಟ್‌ ಮಂಡನೆ, ತಮಿಳುನಾಡಿನ ಕಾಂಜೀವರಂ ರೇಷ್ಮೆ ಸೀರೆಯನ್ನುಟ್ಟ ವಿತ್ತ ಸಚಿವೆ

ನ್ಯೂಸ್ ನಾಟೌಟ್ : 2026-27ನೇ ಹಣಕಾಸು ವರ್ಷದ ಕೇಂದ್ರ ಬಜೆಟ್‌ನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಅವರಿಂದು (ಫೆ.1) ಮಂಡಿಸಲಿದ್ದಾರೆ. ಪ್ರತಿ ಬಾರಿ ಭಾರತದ ವಿವಿಧ ಪ್ರದೇಶಗಳ ಸಂಸ್ಕೃತಿಯನ್ನು ಬಿಂಬಿಸುವ ಸೀರೆಯುಡುವ ಅವರು ಈ ಬಾರಿ ತಮಿಳುನಾಡಿನ ಕಾಂಜೀವರಂ ರೇಷ್ಮೆ ಸೀರೆಯಲ್ಲಿ ಮಿಂಚಿದ್ದಾರೆ.


Ad Widget
Ad Widget
Ad Widget
Ad Widget
Ad Widget
Ad Widget
Ad Widget

ಈ ಬಾರಿ ನಿರ್ಮಲಾ ಸೀತಾರಾಮನ್ ಅವರು ದಾಖಲೆಯ ಒಂಬತ್ತನೇ ಬಜೆಟ್‌ನ್ನು ಮಂಡಿಸಲಿದ್ದಾರೆ. ಬಜೆಟ್ ವೇಳೆ ತಮಿಳುನಾಡಿನ ಪ್ರಾಚೀನ ನೇಯ್ಗೆ ಪರಂಪರೆಯನ್ನು ಗೌರವಿಸುವ ಸಲುವಾಗಿ ಕೈಯಿಂದ ನೇಯ್ದ ಕಾಂಜೀವರಂ ರೇಷ್ಮೆ ಸೀರೆಯನ್ನು ಉಟ್ಟುಕೊಂಡಿದ್ದಾರೆ. ನೇರಳೆ ಬಣ್ಣದ ಸೀರೆಯಲ್ಲಿ ಚಿನ್ನದ ಬಣ್ಣದ ಗೆರೆ ಹಾಗೂ ಕಾಫಿ ಬಣ್ಣದ ದಡಿಯನ್ನು ಹೊಂದಿರುವ ಕಾಂಜೀವರಂ ರೇಷ್ಮೆ ಸೀರೆಯನ್ನು ಆರಿಸಿಕೊಂಡಿದ್ದು, ಇದನ್ನು ತಮಿಳಿನಲ್ಲಿ `ಕಟ್ಟಂ’ ಎಂದು ಕರೆಯಲಾಗುತ್ತದೆ.

ಸೀತಾರಾಮನ್ ಅವರಿಗೆ ಸೀರೆಗಳೆಂದರೆ ಅಚ್ಚುಮೆಚ್ಚು. ಇದುವರೆಗೂ ತಾವು ಮಂಡಿಸಿದ ಬಜೆಟ್‌ಗಳಲ್ಲಿ ಒಂದೊಂದು ಬಗೆಯ, ಕಲಾಕುಸುರಿಯ ವಿಶೇಷತೆ ಇರುವ ಸೀರೆಗಳನ್ನುಟ್ಟು ಗಮನ ಸೆಳೆದಿದ್ದಾರೆ. ಅವರು ಧರಿಸುವ ಸೀರೆಗಳು ಕೈಮಗ್ಗ (ಕೈಯಿಂದ ನೇಯ್ದ) ಭಾರತೀಯ ಜವಳಿ ಮತ್ತು ಕರಕುಶಲ ವಸ್ತುಗಳ ಮೇಲಿನ ಅವರ ಪ್ರೀತಿಯನ್ನು ಪ್ರತಿಬಿಂಬಿಸುತ್ತವೆ. ಸೀರೆಗಳು ಭಾರತೀಯ ಸಂಸ್ಕೃತಿ, ಪರಂಪರೆ ಮೇಲೆ ಬೆಳಕು ಚೆಲ್ಲಿವೆ.

Related Articles

LEAVE A REPLY

Please enter your comment!
Please enter your name here

Latest Articles