ನ್ಯೂಸ್ ನಾಟೌಟ್ : ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಬೆಚ್ಚಿಬೀಳುವ ಘಟನೆಯೊಂದು ಬೆಳಕಿಗೆ ಬಂದಿದೆ.ವೈದ್ಯಕೀಯ ಕಾಲೇಜು ಬಳಿಯ ವ್ಯಾನ್ನಿಂದ ಜಿಲೆಟಿನ್ ಕಡ್ಡಿಗಳು (Gelatin Sticks) ಸೇರಿದಂತೆ ಸ್ಫೋಟಕ ತುಂಬಿದ 100ಕ್ಕೂ ಹೆಚ್ಚು ಬಾಕ್ಸ್ಗಳನ್ನ ಪೊಲೀಸರು ಜಪ್ತಿ ಮಾಡಿದ್ದಾರೆ.
ಸ್ಫೋಟಕ ತಿಂಬಿದ ಪೆಟ್ಟಿಗೆಗಳನ್ನ ಪಿಕಪ್ ವಾಹನದಲ್ಲಿ ರಹಸ್ಯವಾಗಿ ಸಾಗಿಸಲಾಗುತ್ತಿತ್ತು. ಆದ್ರೆ ಪೊಲೀಸರ ಕಾರ್ಯಾಚರಣೆ ವೇಳೆ ಸಿಕ್ಕಿಬಿದ್ದಿದ್ದು, ಇಡೀ ಕೇರಳದಾದ್ಯಂತ ಕಳವಳಕ್ಕೆ ಕಾರಣವಾಗಿದೆ.
ಪಾಲಕ್ಕಾಡ್ ಟೌನ್ ಸೌತ್ ಪೊಲೀಸ್ ಠಾಣೆಯ ಅಧಿಕಾರಿಗಳ ಪ್ರಕಾರ, ಪಾಲಕ್ಕಾಡ್ ವೈದ್ಯಕೀಯ ಕಾಲೇಜು (Palakkad Medical College) ಬಳಿ ವಾಹನದಿಂದ 100 ಕ್ಕೂ ಹೆಚ್ಚು ಬಾಕ್ಸ್ ಜೆಲೆಟಿನ್ ಕಡ್ಡಿಗಳು ಮತ್ತು ಡಿಟೋನೇಟರ್ ತುಂಬಿದ 20 ಕ್ಕೂ ಹೆಚ್ಚು ಬಾಕ್ಸ್ಗಳು ಪತ್ತೆಯಾಗಿವೆ. ಭಾರೀ ಪ್ರಮಾಣದ ಕಲ್ಲಂಗಡಿ ಹಣ್ಣುಗಳ ಕೆಳಗೆ ಸ್ಫೋಟಕಗಳನ್ನ ಇಟ್ಟು ಸಾಗಿಸಲಾಗುತ್ತಿತ್ತು. ರಾಜ್ಯಕ್ಕೆ ಹೆಚ್ಚಿನ ಪ್ರಮಾಣದ ಸ್ಫೋಟಕಗಳನ್ನ ತರಲಾಗುತ್ತಿದೆ ಅನ್ನೋ ಬಗ್ಗೆ ಮೊದಲೇ ಮಾಹಿತಿ ಬಂದಿದ್ದರಿಂದ ನಾವು ಕೂಡ ಅಲರ್ಟ್ ಆಗಿದ್ದು, ಬಂಧಿಸಿದ್ದೇವೆ ಎಂದು ತಿಳಿಸಿದ್ದಾರೆ.













