21.6 C
Sullia
Sunday, March 8, 2026

ರೀಲ್ಸ್ ರಾಣಿ ಸುಚಿತ್ರಾ ಜೊತೆ ಸಂಪರ್ಕದಲ್ಲಿದ್ದ ಯುವಕರಿಗೂ ಶಾಕ್!ಇನ್ಸ್ಟಾಗ್ರಾಂ ಖಾತೆ ಡಿಲೀಟ್ ಮಾಡಿ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡ ಯುವಕರು!

ನ್ಯೂಸ್ ನಾಟೌಟ್ : ಜ್ಯೋತಿಷಿ ಕಮಲಾಕರ್ ಭಟ್ ಮತ್ತು ಸುಚಿತ್ರಾ ಪ್ರಕರಣ ದಿನಕ್ಕೊಂದು ಆಯಾಮ ಪಡೆಯುತ್ತಿದೆ. ಪೊಲೀಸ್ ತನಿಖೆ ವೇಳೆ ರೀಲ್ಸ್ ರಾಣಿ ಸುಚಿತ್ರಾ ಹಲವು ಯುವಕರೊಂದಿಗೆ ಸಂಪರ್ಕದಲ್ಲಿದ್ದ ವಿಚಾರ ಬೆಳಕಿಗೆ ಬಂದ ನಂತರ ಸುಚಿತ್ರಾ ಪತಿ ಹೇಳಿಕೆ ಬೆನ್ನಲ್ಲೇ ಆತಂಕಕ್ಕೊಳಗಾದ ಯುವಕರು ತಮ್ಮ ಇನ್ಸ್ಟಾಗ್ರಾಂ ಖಾತೆಗಳನ್ನು ಡಿಲೀಟ್ ಮಾಡಿ, ಮೊಬೈಲ್‌ಗಳನ್ನು ಸ್ವಿಚ್ ಆಫ್ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ತನಿಖೆ ಮುಂದುವರಿದಿದೆ.


Ad Widget
Ad Widget
Ad Widget
Ad Widget
Ad Widget
Ad Widget
Ad Widget

ಇತ್ತ ಶಿವಮೊಗ್ಗದಲ್ಲಿ ಸುಚಿತ್ರಾಳ ಪತಿ ಹಾಗೂ ಮಗಳು ಮಾಧ್ಯಮಗಳ ಮುಂದೆ ನೀಡಿದ ಹೇಳಿಕೆಗಳು ಯುವಕರನ್ನು ಇನ್ನಷ್ಟು ದಂಗು ಮಾಡಿವೆ. ಸುಚಿತ್ರಾಳ ಮೊಬೈಲ್ ಚೆಕ್ ಮಾಡಿದ್ರೆ ಇವಳ ಬಗ್ಗೆ ಅಸಹ್ಯ ಆಗುತ್ತೆ. ಬೇರೆ ಬೇರೆ ಹುಡುಗರ ಜೊತೆ ಇವಳು ನಿತ್ಯ ಸಂಪರ್ಕದಲ್ಲಿ ಇದ್ದಳು ಎಂದು ಆಕೆಯ ಪತಿ ಹೇಳಿಕೆ ನೋಡಿದ ಬೆನ್ನಲ್ಲೇ ಕೆಲವರು ತಮ್ಮ ಇನ್‌ಸ್ಟಾಗ್ರಾಂ ಖಾತೆಗಳನ್ನು ಡಿಲಿಟ್ ಮಾಡಿಕೊಂಡರೆ, ಇನ್ನೂ ಕೆಲವರು ಮೊಬೈಲ್‌ಗಳನ್ನು ಸ್ವಿಚ್ ಆಫ್ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ತಮ್ಮ ಹೆಸರು ತನಿಖೆಯಲ್ಲಿ ಹೊರಬೀಳಬಹುದೆಂಬ ಆತಂಕದಲ್ಲಿ ಯುವಕರು ಸಿಲುಕಿದ್ದಾರೆ.

ಸುಚಿತ್ರಾ ಹಲವು ಯುವಕರೊಂದಿಗೆ ನಿತ್ಯ ಸಂಪರ್ಕದಲ್ಲಿದ್ದಳು, ತನ್ನ ಮೇಲೆ ಹಲ್ಲೆ ನಡೆಸಲು ಯುವಕರ ಸಹಾಯ ಕೇಳಿದ್ದಳು ಎಂದು ಆಕೆಯ ಪತಿ ಆರೋಪ ಹೊರೆಸಿದ್ದಾನೆ . ಈ ಕುರಿತು ಪೊಲೀಸರು ಒಂದೊಂದಾಗಿ ತನಿಖೆ ಮುಂದುವರಿಸುತ್ತಿದ್ದು, ಸುಚಿತ್ರಾ ಪ್ರಕರಣ ಹಲವಾರು ಪ್ರಶ್ನೆಗಳ ಸುಳಿಯಲ್ಲಿ ಸಿಲುಕಿದೆ.

Related Articles

LEAVE A REPLY

Please enter your comment!
Please enter your name here

Latest Articles