21.6 C
Sullia
Sunday, March 8, 2026

ಮೆಟ್ರೋ ದರ ಏರಿಕೆ ವಿರುದ್ಧ ಪ್ರತಿಭಟಿಸಿದ ತೇಜಸ್ವಿ ಸೂರ್ಯ ಪೊಲೀಸ್ ವಶಕ್ಕೆ: ಕಾಂಗ್ರೆಸ್ ಸರ್ಕಾರದ ವಿರುದ್ಧ ಕೆಂಡಾಮಂಡಲ

ನ್ಯೂಸ್ ನಾಟೌಟ್ : ನಮ್ಮ ಮೆಟ್ರೋ ದರ ಏರಿಕೆ ವಿರುದ್ಧ ಬೆಂಗಳೂರಿನ ಆರ್​ವಿ ರೋಡ್ ಮೆಟ್ರೋ ನಿಲ್ದಾಣದಲ್ಲಿ ಖಾಲಿ ಟ್ರಂಕ್ ಪ್ರದರ್ಶಿಸಿ ಪ್ರತಿಭಟನೆ ನಡೆಸಿದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರನ್ನು ಪೊಲೀಸರು ವಶಕ್ಕೆ ಪಡೆದರು. ಈ ಬಗ್ಗೆ ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ವಿಡಿಯೋ ಪೋಸ್ಟ್ ಮಾಡಿರುವ ತೇಜಸ್ವಿ ಸೂರ್ಯ ಕರ್ನಾಟಕ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.


Ad Widget
Ad Widget
Ad Widget
Ad Widget
Ad Widget
Ad Widget
Ad Widget

ಕಾಂಗ್ರೆಸ್ ಆಡಳಿತದ ಕರ್ನಾಟಕದಲ್ಲಿ ಸಾರ್ವಜನಿಕ ಸಾರಿಗೆ ಮತ್ತು ಉತ್ತಮ ಮೂಲಸೌಕರ್ಯಕ್ಕೆ ಬೇಡಿಕೆ ಇಟ್ಟರೆ ಬಂಧನವಾಗುತ್ತದೆ. ಉತ್ತಮ ಬೆಂಗಳೂರಿಗಾಗಿ ಹೋರಾಟ ಮಾಡುವುದು ಅಪರಾಧವಾಗಿದ್ದರೆ, ನಾನು ಸಾವಿರ ಬಾರಿ ಬಂಧನಕ್ಕೊಳಗಾಗಲು ಸಿದ್ಧ ಎಂದು ತೇಜಸ್ವಿ ಸೂರ್ಯ ಹೇಳಿದ್ದಾರೆ. ಮೆಟ್ರೋ ದರ ಏರಿಕೆ ಮಧ್ಯಮ ವರ್ಗದ ಜನರಿಗೆ ಭಾರವಾಗಿದ್ದು, ಸರ್ಕಾರ ತಕ್ಷಣ ಮಧ್ಯಪ್ರವೇಶಿಸಬೇಕು ಎಂದು ಆಗ್ರಹಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Latest Articles