21.6 C
Sullia
Sunday, March 8, 2026

ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ನಟಿ ಸುಧಾ ರಾಣಿ ಆಯ್ಕೆ

ನ್ಯೂಸ್ ನಾಟೌಟ್ : ಕರ್ನಾಟಕ ಹಾಲು ಉತ್ಪಾದಕರ ಒಕ್ಕೂಟದ ಹೆಮ್ಮೆಯ ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ಸ್ಯಾಂಡಲ್‌ವುಡ್‌ನ ಖ್ಯಾತ ನಟಿ ಸುಧಾ ರಾಣಿ ಅವರನ್ನು ಆಯ್ಕೆ ಮಾಡಲಾಗಿದೆ. ಈ ಕುರಿತು ಬೆಂಗಳೂರು ಹಾಲು ಒಕ್ಕೂಟದ (ಬಮೂಲ್‌) ಅಧ್ಯಕ್ಷ ಡಿ.ಕೆ.ಸುರೇಶ್‌ ಅವರು ಅಧಿಕೃತ ಮಾಹಿತಿ ಹಂಚಿಕೊಂಡಿದ್ದಾರೆ.


Ad Widget
Ad Widget
Ad Widget
Ad Widget
Ad Widget
Ad Widget
Ad Widget

ನಟಿ ಸುಧಾ ರಾಣಿ ಅವರನ್ನು ನಂದಿನಿ ಬ್ರ್ಯಾಂಡ್‌ನ ಮುಖವಾಗಿಸಿಕೊಂಡಿರುವುದಕ್ಕೆ ಸಂತಸ ವ್ಯಕ್ತಪಡಿಸಿರುವ ಡಿ.ಕೆ. ಸುರೇಶ್‌, “ನಂದಿನಿ ಉತ್ಪನ್ನಗಳಿಗೆ ಪ್ರಚಾರ ರಾಯಭಾರಿಯಾಗಿ ಸುಧಾ ರಾಣಿ ಅವರನ್ನು ಆಯ್ಕೆ ಮಾಡಿರುವುದು ನಮಗೆ ಹೆಮ್ಮೆಯ ವಿಷಯ. ಬಮೂಲ್‌ ಕುಟುಂಬಕ್ಕೆ ಅವರನ್ನು ಪ್ರೀತಿಯಿಂದ ಸ್ವಾಗತಿಸುತ್ತೇವೆ” ಎಂದು ಹೇಳಿದ್ದಾರೆ.

ಕನ್ನಡ ಚಿತ್ರರಂಗದಲ್ಲಿ ದಶಕಗಳ ಕಾಲ ತಮ್ಮ ಅಭಿನಯದಿಂದ ಜನಮನ ಗೆದ್ದಿರುವ ಸುಧಾ ರಾಣಿ, ಸರಳತೆ, ನಂಬಿಕೆ ಮತ್ತು ಕುಟುಂಬ ಮೌಲ್ಯಗಳ ಪ್ರತೀಕವಾಗಿ ಗುರುತಿಸಿಕೊಂಡಿದ್ದಾರೆ. ಇದೇ ಗುಣಗಳು ನಂದಿನಿ ಬ್ರ್ಯಾಂಡ್‌ನ ಮೂಲ ತತ್ವಗಳಿಗೂ ಹೊಂದಿಕೆಯಾಗುತ್ತವೆ ಎಂಬ ಕಾರಣದಿಂದ ಅವರನ್ನು ಪ್ರಚಾರ ರಾಯಭಾರಿಯಾಗಿ ಆಯ್ಕೆ ಮಾಡಲಾಗಿದೆ ಎಂದು ಬಮೂಲ್‌ ಮೂಲಗಳು ತಿಳಿಸಿವೆ.

Related Articles

LEAVE A REPLY

Please enter your comment!
Please enter your name here

Latest Articles