21.6 C
Sullia
Sunday, March 8, 2026

ಮತ್ತೋರ್ವ ಹಿಂದೂ ವ್ಯಕ್ತಿಯ ಭೀಕರ ಹತ್ಯೆ, ಪರಿಸ್ಥಿತಿ ಉದ್ವಿಗ್ನ, ರಕ್ತ ಸೋರಿಕೊಂಡು ಕೈಕಾಲು ಕಟ್ಟಿದ ಸ್ಥಿತಿಯಲ್ಲಿ ಶವ ಪತ್ತೆ

ನ್ಯೂಸ್ ನಾಟೌಟ್: ಮತ್ತೊಬ್ಬ ಹಿಂದೂ ವ್ಯಕ್ತಿಯನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ. ಬಾಂಗ್ಲಾದೇಶದ ಸಾರ್ವತ್ರಿಕ ಚುನಾವಣೆಗೆ ಕೇವಲ ಒಂದು ದಿನ ಬಾಕಿ ಇದೆ ಅನ್ನುವಷ್ಟರಲ್ಲಿ ಈ ದುರ್ಘಟನೆ ನಡೆದಿದೆ.


Ad Widget
Ad Widget
Ad Widget
Ad Widget
Ad Widget
Ad Widget
Ad Widget

ಬಾಂಗ್ಲಾದೇಶದ ಮೌಲ್ವಿಬಜಾರ್ ಜಿಲ್ಲೆಯಲ್ಲಿ ಉದ್ವಿಗ್ನತೆ ಭುಗಿಲೆದ್ದಿದೆ ಎಂದು ತಿಳಿದು ಬಂದಿದೆ. ಬುಧವಾರ 28 ವರ್ಷದ ಹಿಂದೂ ವ್ಯಕ್ತಿಯೊಬ್ಬನನ್ನು ಕ್ರೂರವಾಗಿ ಹತ್ಯೆ ಮಾಡಲಾಗಿದೆ. ಕೈಕಾಲುಗಳನ್ನು ಕಟ್ಟಿಹಾಕಿದ ಸ್ಥಿತಿಯಲ್ಲಿ ಆತನ ದೇಹವು ಪತ್ತೆಯಾಗಿತ್ತು, ಅಲ್ಪಸಂಖ್ಯಾತರ ಸುರಕ್ಷತೆಯ ಬಗ್ಗೆ ಮತ್ತೆ ಆತಂಕ ಮೂಡಿದೆ.

ಮೃತರನ್ನು ರತನ್ ಸಾಹುಕರ್ ಎಂದು ಗುರುತಿಸಲಾಗಿದೆ. ರತನ್ ಚಂಪಾ ಪ್ರದೇಶದ ಚಹಾ ತೋಟಗಳಲ್ಲಿ ಕೆಲಸ ಮಾಡುತ್ತಿದ್ದರು. ಬುಧವಾರ ಬೆಳಗ್ಗೆ 10 ಗಂಟೆ ಸುಮಾರಿಗೆ ಅವರ ಶವ ಪತ್ತೆಯಾಗಿದೆ. ಶವ ಪತ್ತೆಯಾದಾಗ, ರತನ್ ಅವರ ಕೈ ಮತ್ತು ಕಾಲುಗಳನ್ನು ಕಟ್ಟಿಹಾಕಲಾಗಿತ್ತು ಮತ್ತು ಅವರ ದೇಹದಲ್ಲಿ ತೀವ್ರ ಗಾಯಗಳಾಗಿದ್ದವು, ಅದರಿಂದ ವಿಪರೀತ ರಕ್ತಸ್ರಾವವೂ ಆಗುತ್ತಿತ್ತು ಎಂದು ಬಾಂಗ್ಲಾದ ಮಾಧ್ಯಮಗಳು ವರದಿ ಮಾಡಿವೆ.

ಪೂರ್ವ ನಿಯೋಜಿತ ಕೊಲೆಯೇ..?

ರತನ್ ಜೊತೆ ಕೆಲಸ ಮಾಡುತ್ತಿದ್ದ ಕಾರ್ಮಿಕರು ಇದು ಪೂರ್ವನಿಯೋಜಿತ ಕೊಲೆ ಎಂದು ಸ್ಪಷ್ಟವಾಗಿ ಹೇಳಿದ್ದಾರೆ. ಅವರ ಕೈಕಾಲುಗಳನ್ನು ಕಟ್ಟಲಾಗಿದ್ದ ರೀತಿ ಮತ್ತು ಅವರ ದೇಹದ ಮೇಲಿನ ಗಾಯಗಳು ಇದು ಅಪಘಾತವಲ್ಲ. ಬದಲಾಗಿ ಪಿತೂರಿ ಎಂಬುದನ್ನು ಸ್ಪಷ್ಟವಾಗಿ ಸೂಚಿಸುತ್ತವೆ ಎಂದು ಅವರು ಹೇಳಿದ್ದಾರೆ. ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದು, ಕೊಲೆ ಚುನಾವಣೆಗೆ ಸಂಬಂಧಿಸಿದೆಯೇ ಅಥವಾ ಬೇರೆ ಯಾವುದಾದರೂ ಉದ್ದೇಶವಿದೆಯೇ ಎಂದು ನಿರ್ಧರಿಸಲು ಪ್ರಯತ್ನಿಸುತ್ತಿದ್ದಾರೆ. ಈ ಸಮಯದಲ್ಲಿ ಪೊಲೀಸರು ಯಾವುದೇ ಅಧಿಕೃತ ಹೇಳಿಕೆಯನ್ನು ನೀಡಿಲ್ಲ.

ಕೆಲವು ದಿನಗಳ ಹಿಂದೆ, ಮೈಮೆನ್ಸಿಂಗ್ ಜಿಲ್ಲೆಯಲ್ಲಿ ಮತ್ತೊಬ್ಬ ಹಿಂದೂ ಉದ್ಯಮಿ ಸುಶೇನ್ ಚಂದ್ರ ಸರ್ಕಾರ್ (62) ಅವರನ್ನು ಕ್ರೂರವಾಗಿ ಹತ್ಯೆ ಮಾಡಲಾಗಿತ್ತು ಸುಶೇನ್ ಅಕ್ಕಿ ವ್ಯಾಪಾರ ಮಾಡುತ್ತಿದ್ದರು. ಪೊಲೀಸರ ಪ್ರಕಾರ, ದಾಳಿಕೋರರು ಅವರ ಮೇಲೆ ಹರಿತವಾದ ಆಯುಧಗಳಿಂದ ಹಲ್ಲೆ ನಡೆಸಿ, ರಕ್ತಸ್ರಾವವಾಗುವ ಸ್ಥಿತಿಯಲ್ಲಿ ಅಂಗಡಿಯೊಳಗೆ ಬೀಗ ಹಾಕಿ ಪರಾರಿಯಾಗಿದ್ದರು. ಪ್ರಸ್ತುತ, ಮೊಹಮ್ಮದ್ ಯೂನಸ್ ನೇತೃತ್ವದ ಮಧ್ಯಂತರ ಸರ್ಕಾರ ದೇಶವನ್ನು ನಡೆಸುತ್ತಿದೆ. ಮೊಹಮ್ಮದ್ ಯೂನಸ್ ಎಲ್ಲಾ ರಾಜಕೀಯ ಪಕ್ಷಗಳು ಮತ್ತು ಅಭ್ಯರ್ಥಿಗಳಿಗೆ ಶಾಂತಿಯನ್ನು ಕಾಪಾಡಿಕೊಳ್ಳಲು ಮತ್ತು ಪ್ರಜಾಪ್ರಭುತ್ವ ನಿಯಮಗಳನ್ನು ಅನುಸರಿಸಲು ಮನವಿ ಮಾಡಿದ್ದಾರೆ.

Related Articles

LEAVE A REPLY

Please enter your comment!
Please enter your name here

Latest Articles