21.6 C
Sullia
Saturday, March 7, 2026

ಪುತ್ತೂರು: ಸಿಗರೇಟು ಸೇದಿಕೊಂಡು ಅಸಭ್ಯ ವರ್ತನೆ, ಸಾರ್ವಜನಿಕರ ಮಾಹಿತಿ ಆಧರಿಸಿ ವ್ಯಕ್ತಿಯನ್ನು ವಶಕ್ಕೆ ಪಡೆದ ಪೊಲೀಸರು

ನ್ಯೂಸ್ ನಾಟೌಟ್: ಪುತ್ತೂರು ತಾಲೂಕಿನ ಬಜತ್ತೂರು ಗ್ರಾಮದ ಕಾಂಚನ ಮುಕ್ವೆ ಎಂಬಲ್ಲಿ ವ್ಯಕ್ತಿಯೊಬ್ಬ ಸಿಗೇಟ್ ಸೇದುತ್ತಾ ಅಸಭ್ಯವಾಗಿ ವರ್ತಿಸಿದ್ದಾನೆ ಎನ್ನುವ ಕಾರಣಕ್ಕೆ ಸಾರ್ವಜನಿಕರ ಮಾಹಿತಿ ಆಧರಿಸಿ ಉಪ್ಪಿನಂಗಡಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.


Ad Widget
Ad Widget
Ad Widget
Ad Widget
Ad Widget
Ad Widget
Ad Widget

ಪೊಲೀಸ್ ಉಪ ನಿರೀಕ್ಷಕರಾದ ಸುರೇಶ್ ಸಿ.ಟಿ ರವರು ಸಿಬ್ಬಂದಿ ಜೊತೆಗೆ ಸ್ಥಳಕ್ಕೆ ತೆರಳಿ ವಶಕ್ಕೆ ಪಡೆದಿದ್ದಾರೆ. ವಿಚಾರಣೆ ವೇಳೆ ವಿಟ್ಲದ ಮಹಮ್ಮದ್ ಮೋಹಾದ್ ಎಸ್ (33 ವರ್ಷ) ಎಂಬಾತನು ತನ್ನ ಮನೆಗೆ ಹೋಗುವ ದಾರಿಯಲ್ಲಿ ಸಿಗರೇಟ್ ಸೇದಿರುವುದೆಂದು ತಿಳಿದು ಬಂದಿರುತ್ತದೆ. ಸದ್ರಿ ವ್ಯಕ್ತಿಯನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ ಮಾದಕ ದ್ರವ್ಯ ಸೇವನೆ ಮಾಡಿರುವುದು ದೃಢಪಟ್ಟಿದೆ. ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 24/2026 ರಂತೆ ಕಲಂ 27(b) NDPS Act ನಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related Articles

LEAVE A REPLY

Please enter your comment!
Please enter your name here

Latest Articles