21.6 C
Sullia
Sunday, March 8, 2026

ಅಕ್ರಮ ಮರಳುಗಾರಿಕೆ ಅಡ್ಡೆ ಮೇಲೆ ಪೊಲೀಸರ ದಾಳಿ, ಹಿಟಾಚಿ ಬಿಟ್ಟು ಓಡಿದ ಪೊಯ್ಯೆ ಕಳ್ಳರು..!

ನ್ಯೂಸ್ ನಾಟೌಟ್: ಸುಬ್ರಹ್ಮಣ್ಯದಲ್ಲಿ ಅಕ್ರಮ ಮರಳುಗಾರಿಕೆ ಅಡ್ಡೆಯ ಮೇಲೆ ಪೊಲೀಸರು ಫೆ.16ರಂದು ದಾಳಿ ನಡೆಸಿದ್ದಾರೆ.


Ad Widget
Ad Widget
Ad Widget
Ad Widget
Ad Widget
Ad Widget
Ad Widget

ಬೆಳಗ್ಗೆ 10.30 ಗಂಟೆಗೆ ಕಡಬ ತಾಲೂಕು ಐನೆಕಿದು ಗ್ರಾಮದ ಕಲ್ಲಾಜೆ ಎಂಬಲ್ಲಿ ಹೊಳೆಯಲ್ಲಿ ಅಕ್ರಮವಾಗಿ ಹಿಟಾಚಿ ಮೂಲಕ ಮರಳು ತೆಗೆಯಲಾಗುತ್ತಿದೆ ಎಂಬ ಮಾಹಿತಿಯ ಮೇರೆಗೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ಆಂಜನೇಯ ರೆಡ್ಡಿ ಜಿ.ವಿ ರವರು ಸಿಬ್ಬಂದಿ ಜೊತೆಗೆ ಸ್ಥಳಕ್ಕೆ ತೆರಳಿದಾಗ ಆರೋಪಿತರು ಸ್ಥಳದಿಂದ ಪರಾರಿಯಾಗಿದ್ದಾರೆ. TATA HITACHI ಮತ್ತು KA-21-B-3929 EICHER ಟಿಪ್ಪರ್ ಹಾಗೂ KA-20-D-7639 ಟಿಪ್ಪರ್ ಲಾರಿಗಳನ್ನು ಮಹಜರು ಮೂಲಕ ಸ್ವಾಧೀನಪಡಿಸಿಕೊಳ್ಳಲಾಗಿದೆ. ಸುಮಾರು 50 ಟನ್ ಮರಳು (ಅಂದಾಜು ಮೌಲ್ಯ ₹50,000/-) ಪತ್ತೆಯಾಗಿದೆ. ಸ್ವಾಧೀನಪಡಿಸಿದ ವಾಹನಗಳ ಒಟ್ಟು ಅಂದಾಜು ಮೌಲ್ಯ ₹20 ಲಕ್ಷ. ಈ ಬಗ್ಗೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 08/2026 ರಂತೆ ಕಲಂ 303(2) BNS-2023, 4(1), 21(1) MMRD Act ಹಾಗೂ 43, 44 KMMCR 1994 ಅಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related Articles

LEAVE A REPLY

Please enter your comment!
Please enter your name here

Latest Articles