ನ್ಯೂಸ್ ನಾಟೌಟ್: ಸುಳ್ಯ ತಾಲೂಕಿನ ಅಡಿಕೆ ಕೃಷಿಗೆ ಬಾಧಿಸಿರುವ ಹಳದಿ ರೋಗ ಮತ್ತು ಎಲೆಚುಕ್ಕಿ ರೋಗದಿಂದ ರೈತರಿಗೆ ಸಾಕಷ್ಟು ನಷ್ಟವಾಗಿದೆ. ಈ ಹಿನ್ನೆಲೆಯಲ್ಲಿ ರೈತರಿಗೆ ವಿಶೇಷ ಪ್ಯಾಕೇಜ್ ನೀಡಬೇಕೆಂದು ಕೃಷಿ ಸಚಿವ ಎನ್. ಚೆಲುವರಾಯಸ್ವಾಮಿ ಅವರಿಗೆ ಸುಳ್ಯದ ಸಾಮಾಜಿಕ ಕಾರ್ಯಕರ್ತ ಸುಪ್ರೀತ್ ಮೊಂಟಡ್ಕ ಮನವಿ ಮಾಡಿದ್ದಾರೆ.
ಕೃಷಿಕರು ಆರ್ಥಿಕವಾಗಿ ಸಂಕಷ್ಟಕ್ಕೊಳಗಾಗಿದ್ದಾರೆ. ಈ ಕ್ಷೇತ್ರದ ಬಹುತೇಕ ಜನರು ಅಡಿಕೆ ಕೃಷಿಯನ್ನೇ ಅವಲಂಬಿಸಿ ಜೀವನ ನಡೆಸುತ್ತಿದ್ದಾರೆ. ಇತ್ತೀಚಿನ ದಿನಗಳಲ್ಲಿ ರೋಗಬಾಧೆಯಿಂದ ಅಡಿಕೆ ಬೆಳೆ ನಾಶವಾಗುತ್ತಿದ್ದು, ಕೃಷಿಕರ ಜೀವನೋಪಾಯ ಕಷ್ಟಕರ ಪರಿಸ್ಥಿತಿಗೆ ತಲುಪಿದೆ.ಆದ್ದರಿಂದ, ಈ ಬಾರಿ ಬಜೆಟ್ ನಲ್ಲಿ ಕೆಳಕಂಡಂತೆ ವಿಶೇಷ ಪ್ಯಾಕೇಜ್ ಘೋಷಿಸಲು ವಿನಂತಿಸುತ್ತೇವೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.













