21.6 C
Sullia
Saturday, March 7, 2026

ಸುಳ್ಯ: ಎನ್.ಎಂ.ಸಿ :ಎನ್.ಎಸ್.ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರ ಸಮಾರೋಪ

ನ್ಯೂಸ್ ನಾಟೌಟ್ : ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಎನ್. ಎಸ್.ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭ ಫೆ. 23ರಂದು ಪೇರಾಲು ದ.ಕ.ಜಿ.ಪಂ.ಸ.ಉ.ಹಿ.ಪ್ರಾ. ಶಾಲೆಯಲ್ಲಿ ನಡೆಯಿತು. ಎನ್.ಎಂ.ಸಿ. ಆಡಳಿತಾಧಿಕಾರಿ ಚಂದ್ರಶೇಖರ ಪೇರಾಲು ಮಾತನಾಡಿ, ರಾಷ್ಟ್ರೀಯ ಸೇವಾ ಯೋಜನೆಯ ಶಿಬಿರದ ಮೂಲಕ ಕಲಿತ ಕೆಲವೊಂದು ಪಾಠಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಿ.


Ad Widget
Ad Widget
Ad Widget
Ad Widget
Ad Widget
Ad Widget
Ad Widget

ನೀವು ಪಡೆದ ಈ ಅನುಭವಗಳು, ನಿಮ್ಮನ್ನು ಉತ್ತಮ ವಿದ್ಯಾರ್ಥಿಗಳಾಗಿ ಮಾತ್ರವಲ್ಲ, ಉತ್ತಮ ವ್ಯಕ್ತಿತ್ವಗಳಾಗಿ ರೂಪಿಸಲಿ ಎಂದು ಹಾರೈಸಿದರು. ಕಾಲೇಜಿನ ಪ್ರಾಂಶುಪಾಲ ಡಾ. ರುದ್ರಕುಮಾರ್ ಎಂ.ಎಂ. ಅಧ್ಯಕ್ಷತೆ ವಹಿಸಿ ಮಾತನಾಡಿ, ಎನ್.ಎಸ್.ಎಸ್. ಶಿಬಿರ ವಿದ್ಯಾರ್ಥಿಗಳಲ್ಲಿ ಸೇವಾಭಾವನೆ, ಶಿಸ್ತು, ನಾಯಕತ್ವ ಹಾಗೂ ಸಮಾಜದ ಬಗ್ಗೆ ಜವಾಬ್ದಾರಿಯನ್ನು ಬೆಳೆಸುವಲ್ಲಿ ಮಹತ್ವದ ಪಾತ್ರ ವಹಿಸಿದೆ. ಪ್ರತಿಯೊಬ್ಬ ವಿದ್ಯಾರ್ಥಿಯೂ ತಮ್ಮ ಸನ್ನಡತೆಯಿಂದ ನಮ್ಮ ಕಾಲೇಜಿನ ಹೆಸರನ್ನು ಬೆಳಗಿದ್ದಾರೆ. ಕಲಿಕೆಯ ಜೊತೆಗೆ ಸಮಾಜವನ್ನು ಅರ್ಥಮಾಡಿಕೊಳ್ಳುವ ಅನುಭವವನ್ನು ಪಡೆದಿದ್ದಾರೆ ಎಂದರು. ಮುಖ್ಯ ಅತಿಥಿಯಾಗಿ ಆಗಮಿಸಿದ ರಾಜ್ಯ ಅರೆಭಾಷೆ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಂಜಿ ಮಾತನಾಡಿ, ರಾಷ್ಟ್ರೀಯ ಸೇವಾ ಯೋಜನೆಯ ಶಿಬಿರ ಕೇವಲ ಕಾರ್ಯಕ್ರಮ ಮಾತ್ರವಲ್ಲ. ಅದು ವ್ಯಕ್ತಿತ್ವ ನಿರ್ಮಾಣದ ವೇದಿಕೆ. ಸೇವಾ ಮನೋಭಾವ, ಶಿಸ್ತು, ನಾಯಕತ್ವ ಗುಣಗಳನ್ನು ಬೆಳೆಸುವ ವೇದಿಕೆ ಎಂದರು.

ಮಂಡೆಕೋಲು ಗ್ರಾ.ಪಂ. ಸದಸ್ಯ ತಾರನಾಥ ಕೊಡೆಂಚಿಕಾರ್, ಪೇರಾಲು ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷ ಮೋಹನ್ ದಾಸ್ ಕುಕ್ಕುಡೇಲು, ಮಂಡೆಕೋಲು ಪ್ರಾ.ಕೃ.ಪ.ಸ.ಸಂಘದ ಮಾಜಿ ಅಧ್ಯಕ್ಷ ರಾಮಕೃಷ್ಣ ರೈ ಪೇರಾಲುಗುತ್ತು, ಕೆವಿಜಿr ಪಾಲಿಟೆಕ್ನಿಕ್ ನಿವೃತ್ತ ಪ್ರಾಂಶುಪಾಲರಾದ ಗಣೇಶ್ ನೀರ್ಪಾಡಿ, ಶಾಲಾ ಪ್ರಭಾರ ಮುಖ್ಯೋಪಾಧ್ಯಾಯಿನಿ ಲತಾಶ್ರೀ ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷ ದೇವದಾಸ ಕುಕ್ಕುಡೇಲು ಮತ್ತು ಮಂಡೆಕೋಲು ಗ್ರಾ.ಪಂ. ಮಾಜಿ ಅಧ್ಯಕ್ಷೆ ವಿನುತಾ ಪಾತಿಕಲ್ಲು ಮತ್ತು ಶಿಬಿರದ ಸಂಚಾಲಕರಾದ ವೆಂಕಟ್ರಮಣ ಅತ್ಯಾಡಿ ಅತಿಥಿಗಳಾಗಿ ಭಾಗವಹಿಸಿದ್ದರು. ಶಿಬಿರಾಧಿಕಾರಿಗಳಾದ ಚಿತ್ರಲೇಖಾ ಕೆ.ಎಸ್ ಮತ್ತು ಹರಿಪ್ರಸಾದ್ ಅತ್ಯಾಡಿ, ಘಟಕದ ನಾಯಕರಾದ ಹವ್ಯಸ್ ಸ್ವಾಗತಿಸಿ, ಗೌತಮ್ ಕೆ ವಂದಿಸಿದರು. ಅರ್ಪಿತಾ ಡಿ.ಕೆ ಶಿಬಿರದ ವರದಿ, ಚಂದನ್ ಸಿ.ಹೆಚ್ ಉಗ್ರಾಣಿ ವರದಿ ವಾಚಿಸಿದರು. ಅಭಿಷೇಕ್ ಎಂ. ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಸಹಾಯಕ ಶಿಬಿರಾರ್ಥಿಗಳು, ಪೇರಾಲು ಶಾಲಾ ಶಿಕ್ಷಕ ವೃಂದ, ವಿದ್ಯಾರ್ಥಿಗಳು, ಶಾಲಾಭಿವೃದ್ಧಿ ಸಮಿತಿ ಸದಸ್ಯರು, ಪೋಷಕರು, ಊರವರು ಭಾಗವಹಿಸಿದ್ದರು. ಎಒಎಲ್ಇ ಪ್ರಧಾನ ಕಾರ್ಯದರ್ಶಿ ಅಕ್ಷಯ್ ಕೆ.ಸಿ. ಆಗಮಿಸಿ ಸಿಹಿ ತಿಂಡಿ ನೀಡಿ ಶುಭ ಹಾರೈಸಿದರು.

Related Articles

LEAVE A REPLY

Please enter your comment!
Please enter your name here

Latest Articles