ನ್ಯೂಸ್ ನಾಟೌಟ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾರ್ಚ್ 6ರಂದು ತಮ್ಮ ದಾಖಲೆಯ 17ನೇ ಕರ್ನಾಟಕ ಬಜೆಟ್ ಮಂಡಿಸಿದ್ದಾರೆ. ವಿಧಾನಸೌಧದಲ್ಲಿ ಮಂಡನೆಯಾದ ಈ ಐತಿಹಾಸಿಕ ಬಜೆಟ್ ರಾಜ್ಯದ ಆರ್ಥಿಕತೆಗೆ ಹೊಸ ದಿಕ್ಕು ನೀಡಿದೆ.
ರಾಜ್ಯದ ಇತಿಹಾಸದಲ್ಲಿ ಅತಿ ಹೆಚ್ಚು ಬಜೆಟ್ ಮಂಡಿಸಿದ ಕೀರ್ತಿಗೆ ಸಿಎಂ ಸಿದ್ದರಾಮಯ್ಯ ಪಾತ್ರರಾಗಿದ್ದಾರೆ. ಸಿದ್ದರಾಮಯ್ಯ ಅವರು ಹಣಕಾಸು ಸಚಿವರಾಗಿ ಒಟ್ಟು 7 ಬಜೆಟ್ ಮಂಡನೆ ಮಾಡಿದ್ದರೆ, ಮುಖ್ಯಮಂತ್ರಿಯಾಗಿ ಈವರೆಗೆ 9 ಬಜೆಟ್ ಮಂಡನೆ ಮಾಡಿದ್ದಾರೆ. 2023-24ರಲ್ಲಿ ಬಜೆಟ್ ಮಂಡನೆ ಮಾಡುವ ಮೂಲಕ ಸಿಎಂ ಸಿದ್ದರಾಮಯ್ಯ ಅವರು ರಾಮಕೃಷ್ಣ ಹೆಗಡೆಯವರ ಅತಿ ಹೆಚ್ಚು ಬಜೆಟ್ ಮಂಡನೆ ದಾಖಲೆಯನ್ನು ಮುರಿದಿದ್ದರು.
2025-26ನೇ ಸಾಲಿನಲ್ಲಿ ಸಿಎಂ ಸಿದ್ದರಾಮಯ್ಯ 4.09 ಲಕ್ಷ ಕೋಟಿ ಗಾತ್ರದ ಬಜೆಟ್ ಮಂಡನೆ ಮಾಡಿದ್ದರು. ಸುಮಾರು 19,262 ಕೋಟಿ ಅಂದಾಜು ಆದಾಯ ಕೊರತೆಯ ಬಜೆಟ್ ಮಂಡನೆ ಮಾಡಿದ್ದರು. ಸುಮಾರು 1,16,000 ಕೋಟಿ ರೂ. ಸಾಲದ ಮೊರೆ ಹೋಗಿದ್ದರು. ಈ ಬಾರಿ ಸಿಎಂ ಸಿದ್ದರಾಮಯ್ಯ ಇತಿ ಮಿತಿಯೊಳಗೆ ಬಜೆಟ್ ಮಂಡನೆ ಮಾಡುವ ಸಾಧ್ಯತೆ ಇದೆ. ವಾಸ್ತವದ ಲೆಕ್ಕಚಾರದೊಂದಿಗೆ ಅಭಿವೃದ್ಧಿಗೂ ಪೂರಕವಾಗಿ ಬಜೆಟ್ ಮಂಡನೆ ಮಾಡುವ ನಿರೀಕ್ಷೆ ಇದೆ.













