ಬೆಳ್ಳಾರೆ: ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಮನೆ ಕಳ್ಳ ಈಗ ಪೊಲೀಸರ ಅತಿಥಿ..!, ನ್ಯಾಯಾಲಯ ವಿಧಿಸಿದ ಶಿಕ್ಷೆಯೇನು ಗೊತ್ತಾ..?

ನ್ಯೂಸ್ ನಾಟೌಟ್: ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಮನೆ ಕಳ್ಳತನ ಪ್ರಕರಣದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.


Ad Widget
Ad Widget
Ad Widget
Ad Widget
Ad Widget
Ad Widget
Ad Widget

ಮಾ.24ರಂದು ರಾತ್ರಿ ಬೆಳ್ಳಾರೆಯಲ್ಲಿ ಮನೆ ಕಳ್ಳತನ ಪ್ರಕರಣವೊಂದು ನಡೆದಿತ್ತು. ಈ ಪ್ರಕರಣದಲ್ಲಿ ಬೆಳ್ತಂಗಡಿ ನೆರಿಯ ನಿವಾಸಿ ಶರತ್ ಎಸ್ (24 ವರ್ಷ) ಆರೋಪಿಯಾಗಿದ್ದ. ಇದಕ್ಕೆ ಸಂಬಂಧಿಸಿದಂತೆ ಆರೋಪಿ ಕೋರ್ಟ್ ಗೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ. ಈತನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಸದ್ಯ ವಿಚಾರಣೆ ನಡೆಸಿದ ನ್ಯಾಯಧೀಶ ಶಿವಣ್ಣ ಎಚ್ .ಆರ್ ಅವರು ಪ್ರಕರಣದಲ್ಲಿ ಆರೋಪಿಗೆ ಕಲಂ 457 ಐಪಿಸಿ ರಲ್ಲಿ 6 ತಿಂಗಳ ಸಾಧಾರಣ ಸಜೆ ಹಾಗೂ 500 ದಂಡ. ಕಲಂ 380 ಐಪಿಸಿ ಯಲ್ಲಿ 10 ತಿಂಗಳ ಸಾದಾರಣ ಸಜೆ ಹಾಗೂ 500 ದಂಡವನ್ನು ವಿಧಿಸಿದ್ದು, ದಂಡ ಪಾವತಿಸದಿದ್ದರೆ 10 ದಿನಗಳ ಸಜೆಯನ್ನು ನೀಡಿ ಆದೇಶಿಸಿದ್ದಾರೆ.

ಪ್ರಕರಣದ ತನಿಖಾಧಿಕಾರಿ ಅಗತ್ಯ ಸಾಕ್ಷಿಗಳನ್ನು ಕಲೆಹಾಕಿ ಮಾನ್ಯ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಿದ್ದಾರೆ. ಸಹಾಯಕ ಸರ್ಕಾರಿ ಅಭಿಯೋಜಕರಾಗಿ ಪ್ರೀತಿ ಎಂ ಸಿ ರವರು ಸಮರ್ಥ ವಾದ ಮಂಡನೆ ನಡೆಸಿರುತ್ತಾರೆ. ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡ ಹಿನ್ನೆಲೆಯಲ್ಲಿ ಸದ್ರಿ ಆರೋಪಿತನ ವಿರುದ್ಧ ಭಾರತೀಯ ನ್ಯಾಯ ಸಂಹಿತೆ ಕಲಂ 269 ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ನ್ಯಾಯಾಲಯದಲ್ಲಿ ಮಾನ್ಯ ನ್ಯಾಯಾದೀಶರಾದ ರೂ. 1000 ದಂಡ ಅಥವಾ 10 ದಿನಗಳ ಕಾರಾಗೃಹ ವಾಸ ವಿಧಿಸಿ ಆದೇಶಿಸಿರುತ್ತದೆ.

Related Articles

LEAVE A REPLY

Please enter your comment!
Please enter your name here

Latest Articles