ನ್ಯೂಸ್ ನಾಟೌಟ್ : ಜ್ಯೋತಿಷಿ ವೇಣು ಸ್ವಾಮಿ ಅವರು ಯಶ್ ಅವರನ್ನು ಏಕವಚನದಲ್ಲಿ ಕರೆದಿದ್ದು, ಅವರು ಖಿನ್ನೆತಗೆ ಒಳಗಾಗಿದ್ದಾರೆ ಎಂದಿರುವ ಹೇಳಿಕೆ ಭಾರಿ ವಿವಾದಕ್ಕೆ ಎಡೆ ಮಾಡಿಕೊಟ್ಟಿದೆ. ಇದು ಎರಡು ತಿಂಗಳ ಹಿಂದೆ ನೀಡಿದ ಸಂದರ್ಶನವಾದರೂ, ಈಗ ವೈರಲ್ ಆಗುತ್ತಿದೆ. ಯಶ್ ಬಗ್ಗೆ ಈ ರೀತಿ ಮಾತನಾಡಿದ ವೇಣು ಸ್ವಾಮಿ ವಿರುದ್ಧ ಯಶ್ ಫ್ಯಾನ್ಸ್ ತಿರುಗಿ ಬಿದ್ದಿದ್ದಾರೆ.
ಯಶ್ ಅಂತ ಒಬ್ಬರು ಹೀರೋ ಇದಾನೆ. ಆತನ ಪರಿಸ್ಥಿತಿ ತುಂಬಾ ಕಷ್ಟದಲ್ಲಿದೆ. ಕನ್ನಡದ ಹೀರೋ ಅಂತ ಹೆಸರು ತೆಗೆದುಕೊಂಡು ಮಾತನಾಡುತ್ತಿದ್ದೇನೆ. ತೆಲುಗು ಹೀರೋ ಆಗಿದ್ರೆ ಮಾತನಾಡುತ್ತಾ ಇರಲಿಲ್ಲ. ಯಶ್ ಡಿಪ್ರೆಷನ್ ನಲ್ಲಿದ್ದಾನೆ. ಆತ ಮಾಡಿದ ಎರಡು ಸಿನಿಮಾ ಎಲ್ಲಿಯೋ ಇವೆ. ಕೆಜಿಎಫ್ನ ಪದೇ ಪದೇ ತೆಗೆಯೋಕಾಗಲ್ಲ. ಕೆಜಿಎಫ್ ರೀತಿಯ ಸಿನಿಮಾ ತೆಗೆಯಲು ಸಾಧ್ಯವಾಗದೆ, ಹೊಸ ಸಿನಿಮಾ ಆಯ್ಕೆ ಮಾಡಲಾಗದೆ ಡಿಪ್ರೆಷನ್ಗೆ ಹೋಗಿದ್ದಾನೆ. ಸ್ಟಾರ್ ದಂ ಉಳಿಸಿಕೊಳ್ಳೋಕೆ ಆಗ್ತಿಲ್ಲ. ಅದೇ ಟೆನ್ಷನ್ ಅಲ್ಲಿ ಯಶ್ ಇದ್ದಾನೆ’ ಎಂದಿದ್ದಾರೆ ವೇಣು ಸ್ವಾಮಿ.
ಯಶ್ ಅವರು ‘ಟಾಕ್ಸಿಕ್’ ರೀತಿಯ ದೊಡ್ಡ ಸಿನಿಮಾ ಒಪ್ಪಿಕೊಂಡಿದ್ದಾರೆ. ‘ರಾಮಾಯಣ’ ಸಿನಿಮಾದಲ್ಲಿ ಯಶ್ ಅವರು ರಾವಣನ ಪಾತ್ರ ಮಾಡುತ್ತಿದ್ದಾರೆ. ಅಕ್ಕಿನೇನಿ ನಾಗ ಚೈತನ್ಯ-ಸಮಂತಾ ಜಾತಕದ ಬಗ್ಗೆ ವೇಣುಸ್ವಾಮಿ ಹೇಳಿಕೆ ನೀಡಿದ್ದರು. ಅವರು ಬೇರೆ ಆಗುತ್ತಾರೆ ಎಂದು ಭವಿಷ್ಯ ನುಡಿದಿದ್ದರು. ಅವರು ಬೇರೆ ಆಗುತ್ತಿದ್ದಂತೆ ಇವರಿಗೆ ಜನಪ್ರಿಯತೆ ಸಿಕ್ಕಿತು.













