ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ, ಕರ್ನಾಟಕ ಅರಣ್ಯ ಇಲಾಖೆ ಸಂಪಾಜೆ ಸಹಯೋಗದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

ನ್ಯೂಸ್ ನಾಟೌಟ್ : ಕರ್ನಾಟಕ ಅರಣ್ಯ ಇಲಾಖೆ, ಸಂಪಾಜೆ ಪ್ರಾದೇಶಿಕ ವಲಯ, ಸಂಪಾಜೆ ಹಾಗೂ ಕೆ.ವಿ.ಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ, ಸುಳ್ಯ ಇವರ ಸಂಯುಕ್ತ ಆಶ್ರಯದಲ್ಲಿ ಸಂಪಾಜೆ ಶಾಖೆ ಹಾಗೂ ದಬ್ಬಡ್ಕ ಶಾಖೆಯ ಕಾಡಂಚಿನ ಗ್ರಾಮಸ್ಥರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಸ.ಹಿ.ಪ್ರಾ. ಶಾಲೆ ಕೂಡಡ್ಕದಲ್ಲಿ ಭಾನುವಾರ (ಮಾ. 15ರಂದು) ಹಮ್ಮಿಕೊಳ್ಳಲಾಯಿತು.


Ad Widget
Ad Widget
Ad Widget
Ad Widget
Ad Widget
Ad Widget
Ad Widget

ಶಿಬಿರದಲ್ಲಿ ಜನರಲ್ ಮೆಡಿಸಿನ್, ಶಸ್ತ್ರಚಿಕಿತ್ಸೆ, ಹೃದಯ ಹಾಗೂ ಸ್ತ್ರೀರೋಗ ವಿಭಾಗ, ದಂತ ಹಾಗೂ ಕಿವಿ-ಮೂಗು-ಗಂಟಲು ವಿಭಾಗ, ಮಕ್ಕಳ ವಿಭಾಗ ಸೇರಿದಂತೆ ವಿವಿಧ ವಿಭಾಗಗಳ ತಜ್ಞ ವೈದ್ಯರು ಭಾಗವಹಿಸಿ ರೋಗಿಗಳಿಗೆ ಉಚಿತ ತಪಾಸಣೆ ನಡೆಸಿದರು. ಗ್ರಾಮೀಣ ಭಾಗದ ಜನರಿಗೆ ಉತ್ತಮ ಆರೋಗ್ಯ ಸೇವೆ ನೀಡುವ ಉದ್ದೇಶದಿಂದ ಈ ಶಿಬಿರ ಆಯೋಜಿಸಲಾಗಿದ್ದು, ಅನೇಕರು ಇದರ ಸದುಪಯೋಗ ಪಡೆದುಕೊಂಡರು.

ಕಾರ್ಯಕ್ರಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ, ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ನುರಿತ ವೈದ್ಯರು, ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಸ್ವಯಂಸೇವಕರು ಉಪಸ್ಥಿತರಿದ್ದರು. ಗ್ರಾಮಸ್ಥರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶಿಬಿರದ ಪ್ರಯೋಜನ ಪಡೆದುಕೊಂಡರು.

Leave a Comment

Your email address will not be published. Required fields are marked *

Scroll to Top