ನ್ಯೂಸ್ ನಾಟೌಟ್: ಫಾರ್ಚೂನರ್ ಕಾರಿನಲ್ಲಿ ನಾಲ್ಕು ಗೋವುಗಳನ್ನು ಹಿಂಸಾತ್ಮಕವಾಗಿ ಕಟ್ಟಿ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಹಿಡಿಯುವಲ್ಲಿ ಬಜಪೆ ಪೊಲೀಸರು ಯಶಸ್ವಿಯಾಗಿದ್ದಾರೆ.
ಮಾ.18ರಂದು ಬೆಳ್ ಬೆಳಗ್ಗೆ 4.45ಕ್ಕೆ ಬಜಪೆ ಠಾಣಾ ವ್ಯಾಪ್ತಿಯ ಎಡಪದವು ಸಸ್ತಾವು ಎಂಬಲ್ಲಿ ಫಾರ್ಚೂನರ್ ಕಾರಿನಲ್ಲಿ ಗೋವುಗಳನ್ನು ಕದ್ದು ತೆಗೆದುಕೊಂಡು ಹೋಗುತ್ತಿದ್ದಾರೆ ಎನ್ನುವ ಖಚಿತ ಮಾಹಿತಿ ತಿಳಿದು ಬಂದಿದೆ. ಮಾಹಿತಿ ಆಧರಿಸಿ ಎಸಿಪಿ ಶ್ರೀಕಾಂತ್, ಪಿಐ ಬಾಲಕೃಷ್ಣ ಮಾರ್ಗದರ್ಶನದಲ್ಲಿ ಬಜಪೆ ಪೊಲೀಸ್ ಠಾಣಾ ಪಿಎಸ್ಐ ಲತಾ ಮತ್ತು ಸಿಬ್ಬಂದಿಗಳಾದ ರಾಜೇಶ್, ಚಿದಾನಂದ , ಪ್ರಕಾಶ್ ದಾಳಿ ಮಾಡಿದರು. ನಾಲ್ಕು ಗೋವುಗಳು, ಕಾರು, ಒಂದು ತಲವಾರ್ ಅನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ನಿಸಾರ್ (28 ವರ್ಷ) ಹಾಗೂ ಮೊಹಮ್ಮದ್ ಜಮಾಲುದ್ದೀನ್ (24 ವರ್ಷ) ಇಬ್ಬರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ನ್ಯಾಯಾಲಯಕ್ಕೆ ಹಾಜರು ಮಾಡಲಾಗಿದೆ.



