Latestಕ್ರೈಂಬೆಂಗಳೂರುವೈರಲ್ ನ್ಯೂಸ್

21 ವರ್ಷದ ದಂತ ವೈದ್ಯಕೀಯ ವಿದ್ಯಾರ್ಥಿನಿ 5ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ..! ಆಕೆಯ ಓದಿಗಾಗಿ ಆಂದ್ರದಿಂದ ಬಂದು ಬೆಂಗಳೂರಿನಲ್ಲಿ ನೆಲೆಸಿದ್ದ ಕುಟುಂಬ..!

794
Pc Cr: Tv 9 kannada

ನ್ಯೂಸ್ ನಾಟೌಟ್: 21 ವರ್ಷದ ದಂತ ವೈದ್ಯಕೀಯ ವಿದ್ಯಾರ್ಥಿನಿ ಪರೀಕ್ಷಾ ಭಯದಿಂದ ಅಪಾರ್ಟ್‌ಮೆಂಟ್ ​​ನ 5ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಿನ್ನೆ(ಏ.13) ಮಧ್ಯಾಹ್ನ ಬೆಂಗಳೂರಿನಲ್ಲಿ ನಡೆದಿದೆ.

ಸೌಮ್ಯ ಆತ್ಮಹತ್ಯೆ ಮಾಡಿಕೊಂಡ ದಂತ ವೈದ್ಯಕೀಯ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ. ಮೃತ ಸೌಮ್ಯ ಪರೀಕ್ಷಾ ಸಮಯದಲ್ಲಿ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಆತ್ಮಹತ್ಯೆಗೂ ಮುನ್ನ ಯಾವುದೇ ಡೆತ್​ ನೋಟ್​ ಬರೆದಿಟ್ಟಿಲ್ಲ. ಸದ್ಯ ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಯಶವಂತಪುರದ ಖಾಸಗಿ ಕಾಲೇಜಿನಲ್ಲಿ ಎರಡನೇ ವರ್ಷದ ದಂತ ವೈದ್ಯಕೀಯ ಕೋರ್ಸ್ ಓದುತ್ತಿದ್ದ ಸೌಮ್ಯ, ತಮ್ಮ ತಂದೆ, ತಾಯಿ ಮತ್ತು ಸಹೋದರನ ಜತೆ ವಾಸವಾಗಿದ್ದರು. ಸೌಮ್ಯ ತಂದೆ ಗಣೇಶ್ ನಾರಾಯಣ್​ ವೃತ್ತಿಯಲ್ಲಿ ಇಂಜಿನಿಯರ್ ಆಗಿದ್ದಾರೆ. ಮೂಲತಃ ಆಂಧ್ರದವರಾಗಿದ್ದು, ಮಗಳನ್ನು ಓದಿಸುವ ಉದ್ದೇಶಕ್ಕೆ ಕುಟುಂಬ ಸಮೇತ ಬೆಂಗಳೂರಿಗೆ ಬಂದು ನೆಲೆಸಿದ್ದರು.

ಪರೀಕ್ಷಾ ಸಮಯದಲ್ಲಿ ಖಿನ್ನತೆಗೆ ಒಳಗಾಗುತ್ತಿದ್ದ ಸೌಮ್ಯಗಳಿಗೆ ಕುಟುಂಬದವರು ಇತ್ತೀಚೆಗೆ ನಂದಿನಿ ಲೇಔಟ್‌ನ ಪುನರ್ವಸತಿ ಕೇಂದ್ರಕ್ಕೆ ದಾಖಲಿಸಿ ಚಿಕಿತ್ಸೆ ನೀಡಿದ್ದರು. ಆದರೆ ನಿನ್ನೆ ಮಧ್ಯಾಹ್ನ ಹೊರಗಡೆ ಹೋಗುವುದಾಗಿ ಹೇಳಿದ ಸೌಮ್ಯ, ಅಪಾರ್ಟ್‌ಮೆಂಟ್​ ಟೆರೇಸ್ ​​ಗೆ ಹೋಗಿ ಅಲ್ಲಿಂದ​ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಆತ್ಮಹತ್ಯೆಯ ಯೋಚನೆ ಬಂದಾಗ ಅದನ್ನು ನಿಗ್ರಹಿಸಲು ರಾಜ್ಯ ಸರಕಾರದ ಅರೋಗ್ಯ ಇಲಾಖೆಯ ಹೆಲ್ಪ್ ಲೈನ್ 104 ಸಹಾಯ ಮಾಡುತ್ತದೆ. ಅದರ ಜೊತೆಗೆ Tele-MANAS ನ 14416 ಅನ್ನೂ ಸಂಪರ್ಕಿಸಬಹುದು.

4,500 ಎಕರೆ ಜಾಗಕ್ಕೆ ಸರ್ಕಾರ ಮತ್ತು ರಾಜ ಮನೆತನದ ನಡುವೆ ಜಟಾಪಟಿ..? ಅರಮನೆ ಹೆಸರಿಗೆ ಜಮೀನು ಬಂದ್ರೂ ಗ್ರಾಮಸ್ಥರು ಆತಂಕ ಪಡಬೇಕಿಲ್ಲ ಎಂದ ರಾಜಮಾತೆ..!

ವಕ್ಫ್ ಹೆಸ್ರಲ್ಲಿ ಬಡವರ ಭೂಮಿ ಕಿತ್ತುಕೊಳ್ಳಲಾಗಿದೆ ಎಂದ ನರೇಂದ್ರ ಮೋದಿ..! ಬಡ ಮುಸ್ಲಿಮರು ಎಂದಿಗೂ ಪ್ರಯೋಜನ ಪಡೆಯಲಿಲ್ಲ ಎಂದ ಪ್ರಧಾನಿ..!

See also  ಪಾರ್ಟಿ ಮೂಡಲ್ಲಿದ್ದ ಆತನಿಗೆ ಏಕಾಏಕಿ ಚಾಕು ಇರಿದ ಪ್ರೇಯಸಿ..! ಯುವಕನಿಗೆ ಐಸಿಯುನಲ್ಲಿ ಚಿಕಿತ್ಸೆ..!
  Ad Widget   Ad Widget   Ad Widget     Ad Widget   Ad Widget   Ad Widget Ad Widget     Ad Widget   Ad Widget   Ad Widget