ನ್ಯೂಸ್ ನಾಟೌಟ್: ನಟ ದರ್ಶನ್ ಗೆ 25 ವರ್ಷಗಳಿಂದ ಮೇಕಪ್ ಆರ್ಟಿಸ್ಟ್ ಆಗಿದ್ದ ಹೊನ್ನೇಗೌಡ (Honne Gowda)ಇಂದು(ಮೇ.20) ನಿಧನರಾಗಿದ್ದಾರೆ.
ದರ್ಶನ್ ಗೆ ಆಪ್ತರಾಗಿದ್ದ ಹೊನ್ನೆಗೌಡ ನಿಧನದ ಬಗ್ಗೆ ನಟ ಕಂಬನಿ ಮಿಡಿದಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ನಟ ಭಾವುಕವಾಗಿ ಬರೆದುಕೊಂಡಿದ್ದಾರೆ.
“25 ವರ್ಷಗಳಿಂದ ನನ್ನೊಂದಿಗೆ ಕೆಲಸ ಮಾಡಿದ ಮೇಕಪ್ ಆರ್ಟಿಸ್ಟ್ (Makeup Artist) ಹೊನ್ನೆಗೌಡ ಇಂದು ಅಗಲಿದ್ದಾರೆ. ಈ ಸುದ್ದಿ ನಮ್ಮೆಲ್ಲರನ್ನು ಶೋಕದಲ್ಲಿ ಮುಳುಗಿಸಿದೆ. ಅವರ ಕಲೆ, ನಿಷ್ಠೆ ಮತ್ತು ನಗುಮೊಗದ ಸೇವೆಯನ್ನು ಎಂದಿಗೂ ಮರೆಯಲಾಗದು. ಈ ದುಃಖದ ಸಮಯದಲ್ಲಿ ದೇವರು ಅವರ ಕುಟುಂಬಕ್ಕೆ ನೋವನ್ನು ನುಂಗುವ ಶಕ್ತಿ ನೀಡಲಿ. ಹೊನ್ನೆಗೌಡರ ಆತ್ಮಕ್ಕೆ ಶಾಂತಿ ದೊರೆಯಲಿ. ಓಂ ಶಾಂತಿ” ಎಂದು ಇನ್ಸ್ಟಾಗ್ರಾಂನಲ್ಲಿ ಬರೆದುಕೊಂಡಿದ್ದಾರೆ.
‘ಡೆವಿಲ್’ ಸಿನಿಮಾ ಕೆಲಸದಲ್ಲಿ ದರ್ಶನ್ ಬ್ಯುಸಿಯಾಗಿದ್ದಾರೆ. ಈ ಚಿತ್ರದ ಶೂಟಿಂಗ್ ಭರದಿಂದ ನಡೆಯುತ್ತಿದೆ.
ಮಂಗಳೂರು: ಸುಹಾಸ್ ಶೆಟ್ಟಿ ಕೊಲೆ ಆರೋಪಿ ಮೇಲೆ ಜೈಲಲ್ಲೇ ಸಹ ಕೈದಿಗಳಿಂದ ದಾಳಿ..! ಮೈಸೂರು ಕಾರಾಗೃಹಕ್ಕೆ ಶಿಫ್ಟ್..?