ಕ್ರೈಂವೈರಲ್ ನ್ಯೂಸ್ಸಿನಿಮಾ

269 ಚಿತ್ರಗಳಲ್ಲಿ ನಟಿಸಿದ್ದ ಕನ್ನಡದ ಹಿರಿಯ ನಟ ನಿಧನ..! ಚಿಕಿತ್ಸೆಗೆ ಸ್ಪಂದಿಸದೆ ನಟ ಸರಿಗಮ ವಿಜಿ ಸಾವು..!

149

ನ್ಯೂಸ್ ನಾಟೌಟ್: ಕನ್ನಡ ಚಿತ್ರರಂಗ ಹಾಗೂ ಟಿವಿ ಲೋಕದ ಹಿರಿಯ ನಟ ಸರಿಗಮ ವಿಜಿ ಇಂದು(ಜ.15) ನಿಧನ ಹೊಂದಿದ್ದಾರೆ. ಅವರಿಗೆ 76 ವರ್ಷ ವಯಸ್ಸಾಗಿತ್ತು. ಕಳೆದ ಕೆಲ ದಿನಗಳಿಂದಲೂ ಅನಾರೋಗ್ಯದಿಂದ ಬಳಲುತ್ತಿದ್ದರು.

ವಿಜಿಗೆ ಶ್ವಾಸಕೋಶದ ಸಮಸ್ಯೆ ಎದುರಾಗಿತ್ತು. ಯಶಂಪುರದ ಬಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು, ನ್ಯುಮೋನಿಯಾಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ವಿಜಿ ಇಂದು (ಜನವರಿ 15) ಬೆಳಿಗ್ಗೆ 9:45ಕ್ಕೆ ನಿಧನ ಹೊಂದಿದ್ದಾರೆ.

ಕಳೆದ ಕೆಲವು ದಿನಗಳಿಂದಲೂ ವಿಜಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಕೆಲವು ಸಿನಿಮಾ ನಟ-ನಟಿಯರು ವಿಜಿ ಅವರನ್ನು ದಾಖಲಿಸಿದ್ದ ಆಸ್ಪತ್ರೆಗೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿದ್ದರು. ಸತತ ಚಿಕಿತ್ಸೆ ಬಳಿಕ ಇದೀಗ ವಿಜಿ ಅವರು ನಿಧನ ಹೊಂದಿದ್ದಾರೆ. ನಟನಿಗೆ ಇಬ್ಬರು ಮಕ್ಕಳಿದ್ದಾರೆ. ನಾಳೆ (ಜನವರಿ 16) ಬೆಳಿಗ್ಗೆ 10 ರಿಂದ 12 ಗಂಟೆಯೊಳಗೆ ಚಾಮರಾಜಪೇಟೆಯ ಟಿ ಆರ್ ಮಿಲ್ ಬಳಿ ಬರುವ ಚೀತಾಗಾರದಲ್ಲಿ ಅಂತ್ಯ ಕ್ರಿಯೆ ನಡೆಯಲಿದೆ.

ಹಿರಿಯ ನಟ ಮೊದಲು ನಾಟಕಗಳಲ್ಲಿ ನಟಿಸುತ್ತಿದ್ದರು. ‘ಸಂಸಾರದಲ್ಲಿ ಸರಿಗಮ’ ನಾಟಕ ಅವರಿಗೆ ಬಹಳ ಹೆಸರು ಕೊಟ್ಟಿತ್ತು. ಇದೇ ಕಾರಣಕ್ಕೆ ಅವರಿಗೆ ಸರಿಗಮ ವಿಜಿ ಹೆಸರು ಬಂದಿತ್ತು. ನಾಟಕದಿಂದ ಸಿನಿಮಾಕ್ಕೆ ಪದಾರ್ಪಣೆ ಮಾಡಿದ ವಿಜಿ ಹಲವಾರು ಸಿನಿಮಾಗಳಲ್ಲಿ ಪೋಷಕ ಪಾತ್ರ, ಹಾಸ್ಯ ಪಾತ್ರ ಕೆಲವೆಡೆ ವಿಲನ್ ಪಾತ್ರಗಳಲ್ಲಿಯೂ ನಟಿಸಿದ್ದಾರೆ.2018ರ ಹೊತ್ತಿಗೆ ವಿಜಯ್ ಕನ್ನಡದಲ್ಲಿ ಸುಮಾರು 269 ಚಿತ್ರಗಳಲ್ಲಿ ನಟಿಸಿದ್ದರು. 80 ಕ್ಕೂ ಹೆಚ್ಚು ಸಿನಿಮಾಗಳಿಗೆ ಸಹಾಯಕ ನಿರ್ದೇಶಕನಾಗಿಯೂ ಕೆಲಸ ಮಾಡಿದ್ದರು.

Click

https://newsnotout.com/2025/01/kumbha-mela-nagasadhu-kannada-news-3-5-crore-people/
https://newsnotout.com/2025/01/tulu-cinema-rupesh-shetty-and-bollywood-actor-tulunadu/
https://newsnotout.com/2025/01/monkey-illness-kannada-news-132-people-issue-last-year/
https://newsnotout.com/2025/01/mahakumbha-mela-steve-jobs-wife-in-kumbh-mela-kannada-news-health/
See also  ಪುಟ್ಟ ಮಗುವನ್ನು ಕೆರೆಗೆ ಎಸೆದದ್ದೇಕೆ ತಂದೆ..! ತಾಯಿ ಇಲ್ಲದ ಮಕ್ಕಳಿಗೆ ಇದೆಂಥಾ ಶಿಕ್ಷೆ? ಪೊಲೀಸರು ಈ ಬಗ್ಗೆ ಹೇಳಿದ್ದೇನು?
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget