ನ್ಯೂಸ್ ನಾಟೌಟ್: ಒಡಿಶಾದ ಗಂಜಾಂನಲ್ಲಿ 27 ವರ್ಷದ ವ್ಯಕ್ತಿ ತನ್ನ ಸಂಬಂಧಿಯ 4 ವರ್ಷದ ಮಗಳ ಮೇಲೆ ಅತ್ಯಾಚಾರವೆಸಗಿರುವ ಘಟನೆ ವರದಿಯಾಗಿದೆ. ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ್ದಾನೆ.
ಅತ್ಯಾಚಾರ ಎಸಗಿ ಕೊಲೆ ಮಾಡಿದ ಆರೋಪಿಯನ್ನು ಬಂಧಿಸಲಾಗಿದ್ದು, ಶನಿವಾರ(ಎ.26) ನಿರ್ಮಾಣ ಹಂತದ ಕಟ್ಟಡದಲ್ಲಿ ಆಕೆಯ ಮೃತದೇಹ ಪತ್ತೆಯಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಶುಕ್ರವಾರ ಸಂಜೆ ಪೋಷಕರು ಮಗು ಕಾಣೆಯಾಗಿರುವುದಾಗಿ ದೂರು ನೀಡಿದ್ದರು. ಆ ವ್ಯಕ್ತಿಯ ವಿರುದ್ಧ ಭಾರತೀಯ ನ್ಯಾಯ ಸಂಹಿತೆ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆ, 2012 ರ ಸಂಬಂಧಿತ ವಿಭಾಗಗಳ ಅಡಿಯಲ್ಲಿ ದೂರು ದಾಖಲಾಗಿದೆ ಎಂದು ಗಂಜಾಂ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಸುವೇಂದು ತಿಳಿಸಿದ್ದಾರೆ.
ಆರೋಪಿಯು ಬಾಲಕಿಗೆ ಚಾಕೊಲೇಟ್ ಆಮಿಷ ಒಡ್ಡಿ, ತಮ್ಮ ಗ್ರಾಮದಲ್ಲಿ ನಡೆಯುವ ಹಬ್ಬಕ್ಕೆ ಕರೆದುಕೊಂಡು ಹೋಗುವುದಾಗಿ ಹೇಳಿದ್ದ. ಆದರೆ, ಆಕೆಯನ್ನು ನಿರ್ಜನ ಸ್ಥಳಕ್ಕೆ ಕರೆದೊಯ್ದು ಅತ್ಯಾಚಾರಕ್ಕೆ ಯತ್ನಿಸಿದ್ದ. ಆಕೆಯ ಕುತ್ತಿಗೆ ಹಿಸುಕಿ ಕೊಂದು, ನಂತರ ಶವವನ್ನು ನಿರ್ಮಾಣ ಹಂತದ ಕಟ್ಟಡದಲ್ಲಿ ಎಸೆದಿದ್ದ. ಆತ ಮದ್ಯದ ಅಮಲಿನಲ್ಲಿದ್ದ ಎಂದು ಎಸ್ಪಿ ಮಾಹಿತಿ ನೀಡಿದ್ದಾರೆ.
ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಎಂಕೆಸಿಜಿ ವೈದ್ಯಕೀಯ ಕಾಲೇಜಿಗೆ ಕಳುಹಿಸಿದ್ದಾರೆ. ಶವಪರೀಕ್ಷೆಯ ವರದಿ ಬಂದ ನಂತರವೇ ಸಾವಿಗೆ ನಿಖರವಾದ ಕಾರಣ ತಿಳಿದುಬರಲಿದೆ.
ಜಮೀನಿಗಾಗಿ ಟ್ರ್ಯಾಕ್ಟರ್ ಹತ್ತಿಸಿ ಹೆತ್ತವರನ್ನೇ ಬರ್ಬರವಾಗಿ ಕೊಂದ ಮಗ..! ಆರೋಪಿಗಾಗಿ ಪೊಲೀಸರ ಹುಡುಕಾಟ..!