ಕರಾವಳಿಕ್ರೈಂ

ಗ್ರಾಹಕರ ಬ್ಯಾಂಕ್‌ ಖಾತೆಯಿಂದ AEPS ಮೂಲಕ ಲಕ್ಷಾಂತರ ರೂಪಾಯಿ ಲೂಟಿ ಮಾಡುತ್ತಿದ್ದ ವಂಚಕರ ಬಂಧನ, ಹೈಟೆಕ್‌ ವಂಚಕರು ಸಿಸಿಬಿ ಪೊಲೀಸರ ಬಲೆಗೆ ಬಿದ್ದದ್ದೇಗೆ..?

267

ನ್ಯೂಸ್‌ ನಾಟೌಟ್‌: ಸೈಬರ್‌ ವಂಚನೆ ಮೂಲಕ ಲಕ್ಷಾಂತರ ರೂಪಾಯಿ ಲೂಟಿ ಮಾಡುತ್ತಿದ್ದ ವಂಚಕರ ಜಾಲವನ್ನು ಮಂಗಳೂರು ಸಿಸಿಬಿ ಪೊಲೀಸರು ಪತ್ತೆ ಹಚ್ಚಿ ಬಿಹಾರ ರಾಜ್ಯದ ಪೂರ್ನಿಯಾ ಜಿಲ್ಲೆಯಿಂದ ಮೂವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತ ಆರೋಪಿಗಳನ್ನು ಬಿಹಾರ ರಾಜ್ಯದ ಕರನ್ ಪುರ್ ಜಿಲ್ಲೆಯ ನಿವಾಸಿ ದೀಪಕ್ ಕುಮಾರ್ ಹೆಂಬ್ರಮ್ (33), ಅರಾರಿಯಾ ಜಿಲ್ಲೆಯ ನಿವಾಸಿ ವಿವೇಕ್ ಕುಮಾರ್ ಬಿಶ್ವಾಸ್ (24) ಮತ್ತು ಮದನ್ ಕುಮಾರ್ (23) ಎಂದು ಗುರುತಿಸಲಾಗಿದೆ.

ಕಳೆದ 6 ತಿಂಗಳ ಅವಧಿಯಲ್ಲಿ ಮಂಗಳೂರು ನಗರದ ಸಬ್ ರಿಜಿಸ್ಟಾರ್ ಕಚೇರಿಯಲ್ಲಿ ಆಸ್ತಿ ಹಾಗೂ ಇತರ ನೋಂದಣಿ ಮಾಡಿದ ಬಳಿಕ ನೋಂದಣಿದಾರರ ಬ್ಯಾಂಕ್‌ ಖಾತೆಗಳಿಂದ ಇತ್ತೀಚೆಗೆ AEPS (Aadhar Enabled Payment System) ಮೂಲಕ ವರ್ಗಾವಣೆಯಾಗಿರುವ ಬಗ್ಗೆ ಮಂಗಳೂರು ನಗರದ ಸೆನ್ ಕೈಂ ಪೊಲೀಸ್ ಠಾಣೆಯಲ್ಲಿ 10 ಪ್ರಕರಣಗಳು ದಾಖಲಾಗಿತ್ತು. ಈ ಪ್ರಕರಣಗಳ ಬಗ್ಗೆ ತನಿಖೆ ಕೈಗೊಂಡ ಮಂಗಳೂರು ಸಿಸಿಬಿ ಪೊಲೀಸರು ಮೂವರು ವಂಚಕರ ಹೆಡೆಮುರಿ ಕಟ್ಟಿ ಜೈಲಿಗಟ್ಟಿದ್ದಾರೆ.

ಬಂಧಿತ ಆರೋಪಿಗಳು ಆಸ್ತಿ ನೋಂದಣಿಗೆ ಸಂಬಂಧಿಸಿದ ಕಾವೇರಿ-20 ವೆಬ್ ಸೈಟ್‌ನಿಂದ ದಾಖಲಾತಿಗಳನ್ನು ಅಕ್ರಮವಾಗಿ ಪಡೆದು ಅದರಲ್ಲಿರುವ ಆಧಾರ್ ಸಂಖ್ಯೆ ಮತ್ತು ಹೆಬ್ಬೆರಳ ಗುರುತನ್ನು ಸಂಗ್ರಹಿಸಿ ಬೆರಳುಮುದ್ರೆಯನ್ನು ಸ್ಕ್ಯಾನ್ ಮಾಡಿ ಗ್ರಾಹಕರ ಬ್ಯಾಂಕ್‌ ಖಾತೆಗಳಿಂದ ಹಣವನ್ನು ತಮ್ಮ ಖಾತೆಗಳಿಗೆ ಅಕ್ರಮವಾಗಿ ವರ್ಗಾಯಿಸುತ್ತಿದ್ದರು.

ಬಂಧಿತ ಆರೋಪಿಗಳಿಗೆ ಸಂಬಂಧಿಸಿದ 10 ಬ್ಯಾಂಕ್ ಖಾತೆಗಳಲ್ಲಿರುವ ರೂಪಾಯಿ 3,60,242/- ನ್ನು ವಹಿವಾಟು ಸ್ಥಗಿತಗೊಳಿಸಲಾಗಿದ್ದು, ಆರೋಪಿಗಳಿಂದ ಮೊಬೈಲ್ ಫೋನ್‌ಗಳನ್ನು ವಶಕ್ಕೆ ಪಡೆದು ತಾಂತ್ರಿಕ ಪರಿಶೀಲನೆ ನಡೆಸಲಾಗುತ್ತಿದೆ. ಇದುವರೆಗೆ ಕರ್ನಾಟಕ ರಾಜ್ಯಕ್ಕೆ ಸಂಬಂಧಿಸಿದಂತೆ 1000ಕ್ಕೂ ಹೆಚ್ಚು ನೋಂದಣೆ ಪತ್ರಗಳ PDF ಮತ್ತು ಆಂಧ್ರಪ್ರದೇಶ ಹಾಗೂ ಇತರ ಕೆಲವು ರಾಜ್ಯಗಳ 300ಕ್ಕೂ ಹೆಚ್ಚು ಪತ್ರಗಳ PDF ಪ್ರತಿಗಳನ್ನು ಸಂಗ್ರಹಿಸಿಟ್ಟಿರುವುದು ಬೆಳಕಿಗೆ ಬಂದಿದೆ. ಹೆಚ್ಚುವರಿ ತನಿಖೆಗಾಗಿ ಆರೋಪಿಗಳನ್ನು ಬಿಹಾರಕ್ಕೆ ಕರೆದುಕೊಂಡು ಹೋಗಿ ಸ್ಥಳ ಪರಿಶೀಲನೆ ಮಾಡುವ ಕಾರ್ಯ ಮುಂದುವರಿಸಿದ್ದಾರೆ.

ಪ್ರಕರಣದ ಕುರಿತು ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್ IPS, ಸಿದ್ದಾರ್ಥ್ ಗೋಯಲ್ IPS ಉಪ ಪೊಲೀಸ್ ಆಯುಕ್ತರು (ಕಾ. ಮತ್ತು ಸು.) ಮತ್ತು ದಿನೇಶ್ ಕುಮಾರ್‌ ಬಿ.ಪಿ. ಉಪ ಪೊಲೀಸ್ ಆಯುಕ್ತರು (ಅಪರಾಧ ಮತ್ತು ಸಂಚಾರ), ಪರಮೇಶ್ವರ ಹೆಗ್ಡೆ ಸಹಾಯಕ ಪೊಲೀಸ್ ಆಯುಕ್ತರು, ಸಿಸಿಬಿ ವಿಭಾಗ ಇವರ ನಿರ್ದೇಶನದಂತೆ ಪತ್ತೆಯ ಬಗ್ಗೆ ವಿಶೇಷ ತಂಡ ರಚಿಸಿ ಕಾರ್ಯಾಚರಣೆ ಕೈಗೊಂಡಿದ್ದಾರೆ.

See also  ಬೆಂಗಳೂರಲ್ಲಿ​ ನಟ ರಕ್ಷಿತ್ ಶೆಟ್ಟಿ ವಿರುದ್ಧ ಎಫ್.​ಐ.ಆರ್ ದಾಖಲು..! ಇಲ್ಲಿದೆ ಸಂಪೂರ್ಣ ಮಾಹಿತಿ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget