ಸುಳ್ಯ

ಮೂರು ತಿಂಗಳಲ್ಲಿ ಸುಳ್ಯದ 110 ಕೆ.ವಿ ವಿದ್ಯುತ್ ಸಬ್ ಸ್ಟೇಷನ್ ಸಮಸ್ಯೆ ನಿವಾರಣೆ: ಇಂಧನ ಸಚಿವ ಸುನೀಲ್ ಕುಮಾರ್ ಭರವಸೆ

1k

ಉಡುಪಿ : ಮುಂದಿನ ಮೂರು ತಿಂಗಳದಲ್ಲಿ ಸುಳ್ಯದ 110 ಕೆ.ವಿ ವಿದ್ಯುತ್ ಸಬ್ ಸ್ಟೇಷನ್ ಅನುಷ್ಠಾನಕ್ಕೆ ಇರುವ ತೊಡಕುಗಳನ್ನು ನಿವಾರಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಇಂಧನ ಸಚಿವ ಸುನೀಲ್ ಕುಮಾರ್ ತಿಳಿಸಿದ್ದಾರೆ.

ದ.ಕ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರರ  ನೇತೃತ್ವದಲ್ಲಿ ನಿಯೋಗ ತೆರಳಿ ಮನವಿ ಸಲ್ಲಿಸಲಾಯಿತು. ಅರಣ್ಯ ಭಾಗದಲ್ಲಿ ವಿದ್ಯುತ್ ಲೈನ್ ಹಾದು ಹೋಗುವುದಿದ್ದರೆ ಅಲ್ಲಿ ಕೇಬಲ್ ಅಳವಡಿಸಿ ವಿದ್ಯುತ್ ಲೈನಿಗೆ ಕ್ರಮ ಕೈಗೊಳ್ಳಬೇಕೆಂದು ಈ ಸಂದರ್ಭದಲ್ಲಿ ಸಚಿವರನ್ನು ಒತ್ತಾಯಿಸಲಾಯಿತು. ಅಲ್ಲದೆ ಆಲಂಗಾರಿನ 110 ಕೆ.ವಿ ವಿದ್ಯುತ್ ಸಬ್ ಸ್ಟೇಷನ್ ಬಗ್ಗೆ ಗಮನ ಕೊಡಬೇಕೆಂದು ವಿನಂತಿಸಲಾಯಿತು. ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಬಂದರು ಮೀನುಗಾರಿಕೆ ಒಳನಾಡು ಜಲ ಸಾರಿಗೆ ಸಚಿವ ಅಂಗಾರ, ಬಿಜೆಪಿ ಸುಳ್ಯ ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ, ಪ್ರಧಾನ ಕಾರ್ಯದರ್ಶಿಗಳಾದ ಸುಬೋದ್ ಶೆಟ್ಟಿ ಮೇನಾಲ, ರಾಕೇಶ್ ರೈ ಕೆಡೆಂಜಿ, ಬಿಜೆಪಿ ರೈತ ಮೋರ್ಚಾ ರಾಜ್ಯ ಉಪಾಧ್ಯಕ್ಷ ಎ.ವಿ ತೀರ್ಥರಾಮ,  ನಗರ  ಪಂಚಾಯತ್ ಅಧ್ಯಕ್ಷ ವಿನಯಕುಮಾರ್ ಕಂದಡ್ಕ, ಪುತ್ತೂರು ಎಪಿಎಂಸಿ ಅಧ್ಯಕ್ಷ ದಿನೇಶ್ ಮೆದು, ಕುಕ್ಕೆ ಸುಬ್ರಹ್ಮಣ್ಯ ದೇವಾಲಯದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್ ರಾಮ್ ಸುಳ್ಳಿ, ಸದಸ್ಯ ಪ್ರಸನ್ನ, ಬಿಜೆಪಿ ಮುಖಂಡರಾದ ಕೃಷ್ಣ ಶೆಟ್ಟಿ ಕಡಬ, ಬಾಲಕೃಷ್ಣ ಬಾಣ ಬಾಗಿಲು ಉಪಸ್ಥಿತರಿದ್ದರು.

See also  ಸುಳ್ಯ: NMC ಕಾಲೇಜು ವಾರ್ತಾಪತ್ರ “ವಿದ್ಯಾಚೇತನ” ಅನಾವರಣ
  Ad Widget   Ad Widget   Ad Widget   Ad Widget   Ad Widget   Ad Widget   Ad Widget