ಕ್ರೈಂದೇಶ-ವಿದೇಶರಾಜ್ಯವೈರಲ್ ನ್ಯೂಸ್

4ನೇ ತರಗತಿ ವಿದ್ಯಾರ್ಥಿ ಮೇಲೆ ಮನಸ್ಸೋ ಇಚ್ಛೆ ಚಡಿ ಏಟು ..! ಶಿಕ್ಷಕನ ವಿರುದ್ಧ ಎಫ್​.ಐ.ಆರ್

ನ್ಯೂಸ್ ನಾಟೌಟ್: ಗಣಿತ ವಿಷಯದಲ್ಲಿ ಕಡಿಮೆ ಅಂಕ ಪಡೆದಿದ್ದಾನೆ ಎಂದು ಶಿಕ್ಷಕ ವಿದ್ಯಾರ್ಥಿಗೆ‌ ಮನಸ್ಸೋ ಇಚ್ಛೆ ಥಳಿಸಿದ ಘಟನೆ ಯಾದಗಿರಿ ತಾಲೂಕಿನ ಸೈದಾಪುರ ಪಟ್ಟಣದಲ್ಲಿ ನಡೆದಿದೆ.

ಚಡಿ ಏಟಿನಿಂದ ಬಾಲಕನ ಬೆನ್ನಿನ ಮೇಲೆ ಬಾಸುಂಡೆ ಬರುವ ಹಾಗೆ ಬಾರಿಸಿದ್ದಾನೆ. ಸದ್ಯ ಬಾಲಕನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದ್ದು ಶಿಕ್ಷಕನ ವಿರುದ್ಧ ಎಫ್​ಐಆರ್ ದಾಖಲಾಗಿದೆ.

ಸೈದಾಪುರ ಪಟ್ಟಣದಲ್ಲಿರುವ ಮಹಾವೀರ್ ಜೈನ್ ಆಂಗ್ಲ ಮಾಧ್ಯಮ ಖಾಸಗಿ ಶಾಲಾ ಶಿಕ್ಷಕನಿಂದ ವಿದ್ಯಾರ್ಥಿಗಳ ಮೇಲೆ ಕ್ರೌರ್ಯ ನಡೆಯುತ್ತಿದೆ. ನಾಲ್ಕನೇ ತರಗತಿಯಲ್ಲಿ ಓದುತ್ತಿದ್ದ ಯುವರಾಜ ಎಂಬ ಬಾಲಕ ಗಣಿತದಲ್ಲಿ ಕಡಿಮೆ ಅಂಕ ಪಡೆದ ಎಂಬ ಕಾರಣಕ್ಕೆ ಶಿಕ್ಷಕ ಡೆಲ್ವೀಲ್ ಮನ ಬಂದಂತೆ ಥಳಿಸಿದ್ದಾನೆ. ಆಗಸ್ಟ್ 19 ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಥಳಿತಕ್ಕೆ ಒಳಗಾದ ವಿದ್ಯಾರ್ಥಿ ಯುವರಾಜ್ ತನ್ನ ಪಾಲಕರಿಗೆ ವಿಷಯ ತಿಳಿಸಿದ್ದು ಶಿಕ್ಷಕನ ವಿರುದ್ಧ ಸೈದಾಪುರ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ.

Click

https://newsnotout.com/2024/08/karkala-kannada-news-viral-issue-police-complaint-kannada-news/
https://newsnotout.com/2024/08/karkala-kannada-news-case-sp-statement-and-accusedd/
https://newsnotout.com/2024/08/shikar-dawan-kannada-news-retairment-announced-a-cricketer-kananda-news/

Related posts

ಆಹಾರ ಅರಸಿ ನಾಡಿಗೆ ಬಂದ ಕಾಡಾನೆ ಕಂದಕಕ್ಕೆ ಬಿದ್ದು ಸಾವು..! ದಸರಾ ಸಂಭ್ರಮದ ನಡುವೆ ಜೀವ ಕಳೆದುಕೊಂಡ ಆನೆ

70 ವರ್ಷ ದಾಟಿದ ಪ್ರಜೆಗಳಿಗೆ ಉಚಿತ ಚಿಕಿತ್ಸೆ: ರಾಷ್ಟ್ರಪತಿ ದ್ರೌಪದಿ ಮುರ್ಮು, ದೇಶದಲ್ಲಿ ಹೆಚ್ಚುವರಿ 25,000 ಜನೌಷಧಿ ಕೇಂದ್ರಗಳ ಸ್ಥಾಪನೆ

ಕಾಟಕೇರಿ ಅಪಘಾತ ಪ್ರಕರಣ: ಇಬ್ಬರೂ ಪ್ರಾಣಾಪಾಯದಿಂದ ಪಾರು