ಕ್ರೈಂವೈರಲ್ ನ್ಯೂಸ್ಸಿನಿಮಾ

ಕೇವಲ 6 ತಿಂಗಳಲ್ಲಿ ಜೈಲಿಂದ ಹೊರ ಬಂದ ಕಿಲ್ಲಿಂಗ್ ಸ್ಟಾರ್..! ನಟ ದರ್ಶನ್‌, ಪವಿತ್ರ ಗೌಡ ಸೇರಿ 7 ಮಂದಿಗೆ ಜಾಮೀನು ಮಂಜೂರು..!

227

ನ್ಯೂಸ್ ನಾಟೌಟ್: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಸೇರಿದಂತೆ 7 ಆರೋಪಿಗಳಿಗೆ ಇಂದು(ಡಿ.13) ಜಾಮೀನು ಮಂಜೂರಾಗಿದೆ. ಜಾಮೀನು ಕೋರಿ ಆರೋಪಿಗಳು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್‌ ದರ್ಶನ್‌, ಪವಿತ್ರಾ ಗೌಡ ಸೇರಿದಂತೆ ಎಲ್ಲಾ 7 ಆರೋಪಿಗಳಿಗೂ ಜಾಮೀನು ನೀಡಿದೆ.

ದರ್ಶನ್​ರ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಿಶ್ವಜೀತ್ ಶೆಟ್ಟಿ ದರ್ಶನ್, ಪವಿತ್ರಾ ಗೌಡ, ಪ್ರದೋಶ್, ಅನುಕುಮಾರ್, ನಾಗರಾಜು, ಲಕ್ಷ್ಮಣ್, ಜಗದೀಶ್ ಅವರಿಗೆ ಜಾಮೀನು ಮಂಜೂರು ಮಾಡಿದ್ದಾರೆ. ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜುಲೈ 11 ರಂದು ಪೊಲೀಸರಿಂದ ಬಂಧನಕ್ಕೆ ಒಳಗಾಗಿದ್ದರು. ಪ್ರಸ್ತುತ ಅವರು ಅನಾರೋಗ್ಯದ ಕಾರಣ ನೀಡಿ ಹೈಕೋರ್ಟ್​ನಿಂದ ಮಧ್ಯಂತರ ಜಾಮೀನು ಪಡೆದಿದ್ದಾರೆ. ಈಗ ಅವರಿಗೆ ಜಾಮೀನು ಮಂಜೂರಾಗಿದೆ.

ದರ್ಶನ್ ಪರ ವಾದ ಮಂಡಿಸಿದ್ದ ಸಿವಿ ನಾಗೇಶ್, ದರ್ಶನ್ ಅವರದ್ದು ರೇಣುಕಾ ಸ್ವಾಮಿ ಕೊಲೆಯಲ್ಲಿ ಪಾತ್ರವಿಲ್ಲ ಎಂದು ವಾದಿಸಿದ್ದರು. ಪೊಲೀಸರು ಕೆಲವು ಉತ್ಪ್ರೇಕ್ಷಿತ ಆರೋಪಗಳನ್ನು ದರ್ಶನ್ ವಿರುದ್ಧ ಮಾಡಿದ್ದಾರೆ ಎಂದು ವಾದಿಸಿದ್ದರು. ದರ್ಶನ್ ಪರ ವಕೀಲರ ವಾದವನ್ನು ಪುರಸ್ಕರಿಸಿರುವ ನ್ಯಾಯಮೂರ್ತಿ ವಿಶ್ವಜೀತ್ ಶೆಟ್ಟಿ ದರ್ಶನ್ ​ಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ್ದಾರೆ. ಜೊತೆಗೆ ಜಾಮೀನಿಗೆ ಅರ್ಜಿ ಸಲ್ಲಿಸಿದ್ದ ಪವಿತ್ರಾ ಗೌಡ, ಪ್ರದೋಶ್, ಅನುಕುಮಾರ್, ನಾಗರಾಜು, ಲಕ್ಷ್ಮಣ್, ಜಗದೀಶ್ ಅವರಿಗೂ ಜಾಮೀನು ದೊರೆತಿದೆ.

See also  ವಿಷದ ಹಾವು ಕಚ್ಚಿ ಗೋಳಿತೊಟ್ಟು ಗ್ರಾಂ.ಪಂ.ಸದಸ್ಯೆ ಸಾವು
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget