ನ್ಯೂಸ್ ನಾಟೌಟ್ : ಮೈಕ್ರೋ ಫೈನಾನ್ಸ್ (Micro Finance) ಸಾಲ ಸಾಮಾನ್ಯ ಜನರ ಪ್ರಾಣವನ್ನೇ ಹಿಂಡುತ್ತಿದೆ. ಇದರಿಂದ ಈಗಾಗ್ಲೇ ಹಲವರು ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಇದೀಗ ತಾನು ಪಡೆದಕ್ಕಿಂತ ಹೆಚ್ಚು ಬಡ್ಡಿಯನ್ನೇ ಕಟ್ಟಿ ಹೃದಯಾಘಾತದಿಂದ ವ್ಯಕ್ತಿಯೊಬ್ಬರು ಸಾವಿಗೀಡಾದ ಘಟನೆ ತುಮಕೂರಿನಲ್ಲಿ ನಡೆದಿದೆ.
ತುಮಕೂರು ನಗರದ ಲೇಬರ್ ಕಾಲೋನಿಯ ಸೈಯದ್ ಸಮಿವುಲ್ಲಾ ಸಾವಿಗಿಡಾದ ವ್ಯಕ್ತಿಯೆಂದು ಹೇಳಲಾಗಿದೆ. ಇವರು ಫೈಸ್ ಸ್ಟಾರ್ ಫೈನಾನ್ಸ್‌ನಿಂದ 2019ರಲ್ಲಿ 4.66 ಮನೆ ಸಾಲ ಪಡೆದಿದ್ದು, 2024 ಮೇವರೆಗೆ ಬರೊಬ್ಬರಿ 7.20 ಲಕ್ಷ ಬಡ್ಡಿ ಕಟ್ಟಿದ್ದರು. ಆದರೆ ಅಸಲು ಹಾಗೆಯೇ ಉಳಿದಿತ್ತು. ಮತ್ತೆ ಅಸಲು ಕಟ್ಟುವಂತೆ ಫೈನಾನ್ಸ್‌ನವರು ಕಿರುಕುಳ ಕೊಡುತ್ತಿದ್ದರು. ಈ ಕಿರುಕುಳ ತಾಳಲಾರದೆ ಹೃದಯಾಘಾತದಿಂದ ಸಮೀವುಲ್ಲಾ ಮೇ ತಿಂಗಳಲ್ಲಿ ಸಾವಿಗೀಡಾಗಿದ್ದಾರೆ. ಇವರಿಗೆ ಸುಮಾರು 24.55 % ಬಡ್ಡಿ ಹಾಕಲಾಗಿತ್ತು ಎಂದು ಹೇಳಲಾಗಿದೆ.