Latestಕ್ರೈಂರಾಜಕೀಯವೈರಲ್ ನ್ಯೂಸ್

7 ವರ್ಷ ಜೈಲು ಶಿಕ್ಷೆಯಿಂದ ಜನಾರ್ದನ ರೆಡ್ಡಿಗೆ ರಿಲೀಫ್..! ತೆಲಂಗಾಣ ಹೈಕೋರ್ಟ್‌ನಿಂದ ಜಾಮೀನು ಮಂಜೂರು..!

594

ನ್ಯೂಸ್‌ ನಾಟೌಟ್‌: ಅಕ್ರಮ ಗಣಿಗಾರಿಕೆ ಹಗರಣ ಪ್ರಕರಣದಲ್ಲಿ ಶಾಸಕ ಜನಾರ್ದನ ರೆಡ್ಡಿಗೆ ತೆಲಂಗಾಣ ಹೈಕೋರ್ಟ್‌ ಷರತ್ತುಬದ್ಧ ಜಾಮೀನು ನೀಡಿದೆ.

ಓಬಳಾಪುರಂ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜನಾರ್ದನ ರೆಡ್ಡಿಗೆ ಸಿಬಿಐ ವಿಶೇಷ ನ್ಯಾಯಾಲಯ 7 ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಈ ಆದೇಶಕ್ಕೆ ತೆಲಂಗಾಣ ಹೈಕೋರ್ಟ್‌ ತಡೆ ನೀಡಿದೆ.
ರೆಡ್ಡಿಗೆ ಷರತ್ತುಬದ್ಧ ಜಾಮೀನು ನೀಡಿರುವ ಕೋರ್ಟ್‌, ತಲಾ 10 ಲಕ್ಷ ಮೌಲ್ಯದ ಇಬ್ಬರು ಶ್ಯೂರಿಟಿಗಳನ್ನು ಸಲ್ಲಿಸುವಂತೆ ಸೂಚನೆ ನೀಡಿದೆ. ಅಲ್ಲದೇ, ಭಾರತ ಬಿಟ್ಟು ಹೋಗಲು ಅನುಮತಿ ಇರುವುದಿಲ್ಲ. ಗಾಲಿ ಜನಾರ್ದನ ರೆಡ್ಡಿ ಪಾಸ್‌ ಪೋರ್ಟ್ ಅನ್ನು ಒಪ್ಪಿಸುವಂತೆಯೂ ಆದೇಶಿಸಿದೆ.

ಆಂಧ್ರ-ಕರ್ನಾಟಕದ ಗಡಿ ಭಾಗಕ್ಕೆ ಹೊಂದಿಕೊಂಡ ಹೀರೆಹಾಳ್-ಸಿದ್ದಾಪುರ ಬಳಿಯ ಓಬಳಾಪುರಂ ಬೆಟ್ಟದಲ್ಲಿ ನಡೆದಿದ್ದ ಅಕ್ರಮ ಗಣಿಕಾರಿಕೆಗೆ ಸಂಬಂಧಿಸಿದ ಪ್ರಕರಣ ಇದಾಗಿದೆ. ಓಎಂಸಿ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಶ್ರೀನಿವಾಸರೆಡ್ಡಿ ಮತ್ತು ಜನಾರ್ದನರೆಡ್ಡಿ ಈ ಕಂಪನಿಯ ಮುಖ್ಯಸ್ಥರಾಗಿದ್ದರು. ಈ ಕಂಪನಿಗೆ ಗಣಿ‌ಗಾರಿಕೆ ಮಂಜೂರಾತಿ ನೀಡುವಲ್ಲಿ ಅರಣ್ಯ ಇಲಾಖೆ ಹಾಗೂ ಗಣಿ‌ ಇಲಾಖೆಯಿಂದಲೂ ಅಕ್ರಮ‌ ನಡೆದಿತ್ತು.

ಇದರಲ್ಲಿ ರಾಜ್ಯದ 29 ಲಕ್ಷ ಟನ್ ಅದಿರನ್ನು ಲೂಟಿ ಮಾಡಿ 884 ಕೋಟಿ ರೂ. ಆದಾಯ ಪಡೆದಿದ್ದಾರೆ ಎನ್ನುವ ಆರೋಪವಿದೆ. ಈ ಪ್ರಕರಣದಲ್ಲಿ ಶ್ರೀನಿವಾಸರೆಡ್ಡಿ, ಜನಾರ್ದನ ರೆಡ್ಡಿ, ಆಪ್ತ ಅಲಿಖಾನ್, ಗಣಿ ಇಲಾಖೆಯ ನಿರ್ದೇಶಕ ರಾಜಗೋಪಾಲ್, ಆಂಧ್ರದ ಮಾಜಿ ಸಚಿವೆ ಸಬಿತಾ ಇಂದ್ರಾರೆಡ್ಡಿ, ನಿವೃತ್ತ ಐಎಎಸ್ ಅಧಿಕಾರಿ ಕೃಪಾನಂದ, ಶ್ರೀಲಕ್ಷ್ಮೀ ಇದ್ದಾರೆ. 

ಚಾಕೊಲೇಟ್​ ಆಮಿಷವೊಡ್ಡಿ 4 ವರ್ಷದ ಬಾಲಕಿ ಮೇಲೆ ಅತ್ಯಾಚಾರ..! ಇಟ್ಟಿಗೆಯಿಂದ ಹೊಡೆದು, ಬಾಯಿಗೆ ಎಲೆಗಳನ್ನು ತುರುಕಿದ್ದ ಕಿರಾತಕ..!

ಭಾರತದ ಜೊತೆ ಸಂಘರ್ಷ ನಡೆಸಿದ್ದ ಮಾಲ್ಡೀವ್ಸ್‌ ದೇಶದ ಪ್ರವಾಸೋದ್ಯಮಕ್ಕೆ ಕತ್ರಿನಾ ಕೈಫ್‌ ರಾಯಭಾರಿಯಾಗಿ ನೇಮಕ..! ಇಲ್ಲಿದೆ ಸಂಪೂರ್ಣ ಮಾಹಿತಿ

See also  ಸ್ಫೋಟಕಗಳು ತುಂಬಿದ್ದ ವಾಹನದಲ್ಲಿ ಪಾಕ್ ಮಿಲಿಟರಿಯ ಗಡಿ ಗೋಡೆಗೆ ಡಿಕ್ಕಿ ಹೊಡೆದ ಉಗ್ರರು..! 12 ಮಂದಿ ಸಾವು, 6 ಭಯೋತ್ಪಾದಕರ ಹತ್ಯೆ..!
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget