Latestಕರಾವಳಿಕೇರಳ

ಕೇರಳ:ಒಂದು ತಿಂಗಳ ಹಿಂದೆ ನಾಯಿ ಕಡಿತಕ್ಕೊಳಗಾದ ಬಾಲಕಿ!!ರೇಬಿಸ್ ಲಸಿಕೆ ಪಡೆದರೂ ಬದುಕುಳಿಯಲಿಲ್ಲ!ಏನಿದು ಘಟನೆ?

560

ನ್ಯೂಸ್‌ ನಾಟೌಟ್:ಒಂದು ತಿಂಗಳ ಹಿಂದೆ(ಏ.೮) ನಾಯಿಯೊಂದು ಬಾಲಕಿಗೆ ಕಚ್ಚಿದ್ದು ಇದೀಗ ಆಕೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ ಬಗ್ಗೆ ವರದಿಯಾಗಿದೆ. ರೇಬೀಸ್ ಲಸಿಕೆ ಪಡೆದರೂ ಏಳು ವರ್ಷದ ಬಾಲಕಿ ಸಾವನ್ನಪ್ಪಿದ ಘಟನೆ ಕೇರಳದಲ್ಲಿ ನಡೆದಿದೆ.ಕೊಲ್ಲಂನ ಕುನ್ನಿಕೋಡ್ ನ ನಿಯಾ ಫೈಸಲ್ ಮೃತ ಬಾಲಕಿಯೆಂದು ತಿಳಿದು ಬಂದಿದೆ.

ಏನಿದು ಘಟನೆ?

ಏಪ್ರಿಲ್ 8 ರಂದು ಬಾಲಕಿ ಅಂಗಳದಲ್ಲಿ ಆಟವಾಡುತ್ತಿದ್ದಳು. ಅಂಗಳದಲ್ಲಿದ್ದ ಬಾತುಕೋಳಿ ಮೇಲೆ ದಾಳಿ ಮಾಡಲು ಬೀದಿ ನಾಯಿ ಮುಂದಾಗಿತ್ತು.ಬಾಲಕಿ ಬಾತುಕೋಳಿಯನ್ನು ರಕ್ಷಿಸಲು ಹೋಗಿದ್ದಳು. ಈ ವೇಳೆ ನಾಯಿ ಬಾಲಕಿಯ ಮೊಣಕೈಗೆ ಕಚ್ಚಿತ್ತು.ಬಾಲಕಿಯನ್ನು ಕೂಡಲೇ ವಿಲಕ್ಕುಡಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ರೇಬೀಸ್ ಲಸಿಕೆಯ ಮೊದಲ ಡೋಸ್ ನೀಡಲಾಯಿತು. ನಂತರ ಏ.11 ಮತ್ತು 15 ರಂದು ಕ್ರಮವಾಗಿ ಎರಡನೇ ಮತ್ತು ಮೂರನೇ ಡೋಸ್ ನೀಡಲಾಯಿತು. ಅಂತಿಮ ಡೋಸ್ ಅನ್ನು ಮೇ 6 ರಂದು ನೀಡಲು ನಿಗದಿಪಡಿಸಲಾಗಿತ್ತು. 

ಆದರೆ ಎರಡನೇ ಡೋಸ್ ಪಡೆದ ಕೆಲ ದಿನಗಳಲ್ಲಿ ಬಾಲಕಿಗೆ ಜ್ವರ ಕಾಣಿಸಿದೆ. ನಾಯಿ ಕಚ್ಚಿದ ಮೊಣಕೈಯಲ್ಲಿ ನೋವು ಅನುಭವಿಸಲು ಪ್ರಾರಂಭಿಸಿದಳು. ನಂತರ ಆಕೆಯನ್ನು ಪುನಲೂರು ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಯಿತು ಮತ್ತು ಬಳಿಕ ವಿಶೇಷ ಆರೈಕೆಗಾಗಿ SAT ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು.ರೇಬೀಸ್‌ ಪತ್ತೆಯಾದ ಬಳಿಕ ಆಕೆಯನ್ನು ವೆಂಟಿಲೇಟರ್‌ನಲ್ಲಿ ಇಟ್ಟು ಚಿಕಿತ್ಸೆ ನೀಡಲಾಗುತ್ತಿತ್ತು. ಈ ಸಾವಿನೊಂದಿಗೆ ಕಳೆದ ಒಂದು ತಿಂಗಳೊಳಗೆ ಕೇರಳದಲ್ಲಿ ರೇಬೀಸ್ ಸೋಂಕಿನಿಂದ ಸಾವನ್ನಪ್ಪಿದ ಮಕ್ಕಳ ಸಂಖ್ಯೆ ಮೂರಕ್ಕೆ ಏರಿದೆ.ಬಾಲಕಿಯನ್ನು ಕಚ್ಚಿದ್ದ ನಾಯಿಯನ್ನು ಸ್ಥಳೀಯ ನಿವಾಸಿಗಳು ಓಡಿಸಿದ್ದರೂ ಮರುದಿನ ಹತ್ತಿರದ ಹೊಲದಲ್ಲಿ ಅದು ಶವವಾಗಿ ಪತ್ತೆಯಾಗಿತ್ತು.

See also  ಕುಂಭಮೇಳದ ತ್ರಿವೇಣಿ ಸಂಗಮದಲ್ಲಿ ಸ್ವಚ್ಛತಾ ಕಾರ್ಯ ಆರಂಭ,45 ದಿನಗಳಲ್ಲಿ 66 ಕೋಟಿ ಜನ ಭಾಗಿ..!
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget